Sunday, February 11, 2024
Tuesday, February 6, 2024
ಫೆ.8 ರಂದು ಗ್ರಾಮ ಪಂಚಾಯತ ಸದಸ್ಯರಿಂದ ಬೆಂಗಳೂರು ಚಲೋ
ವಿಜಯಪುರ : ಫೆ.8 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಧರಣಿ ಸತ್ಯಾಗ್ರಹದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಕ್ಷಾತೀತವಾಗಿ ಭಾಗವಹಿಸಬೇಕೆಂದು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಗ್ರಾಮ ಪಂಚಾಯತ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಎಚ್.ಪಠಾಣ ಕರೆ ಕೊಟ್ಟಿದ್ದಾರೆ.
ಅಧ್ಯಕ್ಷರ ಚೆಕ್ ಅಧಿಕಾರವನ್ನು ತೆಗೆದು ಕೆ2 ಮೂಲಕ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹಾಗೂ ಸದಸ್ಯರ ಗೌರವ ಧನವನ್ನು ಕೆರಳ ಮಾದರಿಯಲ್ಲಿ ಜಾರಿಗೆ ಬರಬೇಕು. ಆರೋಗ್ಯ ವಿಮೆ ಕಾರ್ಡ್ನ್ನು ಜಾರಿಗೆ ತರಬೇಕು. ಸದಸ್ಯರಿಗೆ ಪಿಂಚಣಿ ಸೌಲಭ್ಯ ನೀಡಬೇಕು. ಬಸ್ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಮೀಟಿಂಗ್ ಭತ್ಯೆ ಹೆಚ್ಚಿಸಬೇಕು ಹಾಗೂ ಮೇಲಾಧಿಕಾರಿಗಳ ಹಸ್ತಕ್ಷೇಪವನ್ನು ತಡೆಗಟ್ಟಬೇಕೆಂದು ವಿಜಯಪುರ ಜಿಲ್ಲೆಯ ಎಲ್ಲ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಬೇಕೆಂದು ಈ ಮೂಲಕ ವಿನಂತಿಸಿಕೊAಡಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Sunday, February 4, 2024
38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ದಾವಣಗೆರೆ ಫೆ 3: ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
KUWJ ಆಯೋಜಿಸಿದ್ದ 38 ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 'ಸರ್ಕಾರ ಮತ್ತು ಮಾಧ್ಯಮ' ಕುರಿತ ಸಂವಾದ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.
ಈಗ ಅಧಿಕಾರಸ್ಥರ ಮತ್ತು ಪತ್ರಕರ್ತರ ನಡುವೆ ಸಂಪರ್ಕ ಅನಿವಾರ್ಯ ಅನ್ನುವ ಸ್ಥಿತಿ ಬಂದಿದೆ. ಮೊದಲೆಲ್ಲಾ ಪತ್ರಕರ್ತರು ಅಧಿಕಾರಸ್ಥರ ಜತೆ ನಿಕಟ ಸಂಪರ್ಕ ಹೊಂದುವುದಕ್ಕೆ ಬಹಳ ಮುಜುಗರ ಅನುಭವಿಸುತ್ತಿದ್ದರು ಎಂದು ವಿವರಿಸಿದರು.
ಈಗ ಜಾಹಿರಾತು ತರುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿ ಆಗಿಬಿಟ್ಟಿದೆ. ತನಿಖಾ ಪತ್ರಿಕೋದ್ಯಮ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದ ಹೊಣೆ ಹಿಂದಕ್ಕೆ ಸರಿದಿದೆ. ಸ್ವಾತಂತ್ರ್ಯ ನಂತರದ ಭಾರತೀಯ ಪತ್ರಿಕೋದ್ಯಮ ಅಭಿವೃದ್ಧಿ ಮತ್ತು ಜನಮುಖಿ ಪತ್ರಿಕೋದ್ಯಮವನ್ನು ಪ್ರಥಮ ಆಧ್ಯತೆಯನ್ನಾಗಿಸಿಕೊಂಡಿತ್ತು. ಈಗ ಬದಲಾದ ಸನ್ನಿವೇಶದಲ್ಲಿ, ಜವಾಬ್ದಾರಿ ಮತ್ತು ಹೊಣೆಗಾರಿಕೆಗಳೂ ಬದಲಾಗುತ್ತಿವೆ ಎಂದರು.
ಪತ್ರಕರ್ತರು ಮೊದಲು ತಮ್ಮ ಮತ್ತು ತಮ್ಮ ಕುಟುಂಬದ ಆರೋಗ್ಯ, ಯೋಗಕ್ಷೇಮದ ಕಡೆಗೂ ಗಮನ ಹರಿಸಬೇಕು. ಕೆಲಸದ ಒತ್ತಡದ ನಡುವೆಯೂ ಈ ದಿಕ್ಕಿನಲ್ಲೂ ಗಮನ ಹರಿಸಿ ಎಂದು ಸಲಹೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಮತ್ತು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಪತ್ರಕರ್ತ ಸಮುದಾಯದ ವೃತ್ತಿಪರತೆ ಮತ್ತು ಪ್ರಗತಿಗೆ ನೀಡಿದ ನೆರವುಗಳನ್ನು ಪಟ್ಟಿ ಮಾಡಿದ ಕೆ.ವಿ.ಪ್ರಭಾಕರ್ ಅವರು, ಈ ಬಾರಿಯ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸುವ ಕುರಿತು ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಪತ್ರಿಕಾ ವಿತರಕರನ್ನು ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು.
KUWJ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಸೇರಿ ಸಂಘದ ಹಲವು ಪದಾಧಿಕಾರಿಗಳು ವೇದಿಲೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

