Saturday, March 9, 2024

ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ

ವಿಜಯಪುರ: ಉದ್ಯಮಿ ಅಣ್ಣಾರಾಯ ಎಸ್. ಬಿರಾದಾರ ಆರಂಭಿಸಿದ ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕಕ್ಕೆ   ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ ಇಂದು ನೀಡಿದರು.  

ಅವರು ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕದ ಯಂತ್ರದಲ್ಲಿ ಒಣದ್ರಾಕ್ಷಿಯನ್ನು ಹಾಕುವ ಮೂಲಕ ಸಚಿವ ಎಂ. ಬಿ. ಪಾಟೀಲ ವಿಂಗಡಣೆ ಯಂತ್ರಕ್ಕೆ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಅಣ್ಣಾರಾಯ ಎಸ್. ಬಿರಾದಾರ, ನಿತೀನ ಎ. ಬಿರಾದಾರ, ವಿಠ್ಠಲ ಕಟಕದೊಂಡ, ಎಸ್.ಎಂ.ಪಾಟೀಲ ಗಣಿಹಾರ, ಪ್ರಕಾಶಗೌಡ ಪಾಟೀಲ, ಮುಂತಾದವರು ಉಪಸ್ಥಿತರಿದ್ದರು.
 ನಗರದ ಸೋಲಾಪುರ ರಸ್ತೆಯ ಯಶೋಧಾ ಆಸ್ಪತ್ರೆ ಹಿಂದೆ ಇರುವ ಒಣದ್ರಾಕ್ಷಿ ಸಂಸ್ಕರಣಾ ಘಟಕದಲ್ಲಿ ಇಂದು ಶನಿವಾರ ಈ ಕಾರ್ಯಕ್ರಮ ನಡೆಯಿತು.
ಘಟಕದ ಕಾರ್ಯವನ್ನು ವೀಕ್ಷಿಸಿ, ಒಣದ್ರಾಕ್ಷಿ ಸಂಗ್ರಹ, ಸಂಸ್ಕರಣೆ, ಮಾರಾಟ ಹಾಗೂ ರಫ್ತು ಮಾಡುವ ಕುರಿತು ಮಾಹಿತಿ ಪಡೆದರು. ಅಲ್ಲದೇ, ಈ ಘಟಕ ಉತ್ತರೋತ್ತರವಾಗಿ ಅಭಿವೃದ್ಧಿಯಾಗಲಿ ಎಂದು ಅಣ್ಣಾರಾಯ ಎಸ್. ಬಿರಾದಾರ ಮತ್ತು ಅವರ ಪುತ್ರ ನಿತೀನ ಎ.ಬಿರಾದಾರ ಅವರಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ವಿಜಯಪುರ ಜ್ಞಾಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಪಶ್ಚಿಮ ಬಂಗಾಳ ನಿವೃತ್ತ ಡಿಜಿಪಿ ಜಿ.ಎಂ.ಪಿ ರೆಡ್ಡಿ, ಉದ್ಯಮಿಗಳಾದ ಪ್ರಕಾಶಗೌಡ ಪಾಟೀಲ, ಮುಖಂಡರಾದ ಎಸ್.ಎಂ.ಪಾಟೀಲ ಗಣಿಹಾರ, ಬಸವರಾಜ ದೇಸಾಯಿ, ಡಾ.ಮಹಾಂತೇಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗೌರವಾನ್ವಿತ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರ ಜಿಲ್ಲಾ ಪ್ರವಾಸ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಮಾ.11 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋಟತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಾರ್ಚ್ 11 ರಂದು ಬೆಳಿಗ್ಗೆ 8-45ಕ್ಕೆ ಬೆಳಗಾವಿಯಿಂದ ಹೊರಟು ಮಧ್ಯಾಹ್ನ 11-45ಕ್ಕೆ ವಿಜಯಪುರದ ತೊರವಿಯಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಕ್ಯಾಂಪಸ್‌ಗೆ ಆಗಮಿಸಿ ಮಧ್ಯಾಹ್ನ 12-15ಕ್ಕೆ ವಿವಿಯ 15ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, March 8, 2024

ಇಡೀ ಸಮಾಜವನ್ನೇ ಬದಲಿಸುವ ಶಕ್ತಿ ಸಾಹಿತ್ಯಕ್ಕಿದೆ : ಹೇಮಲತಾ ವಸ್ತ್ರದ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಮಹಿಳಾ ಸಾಂಸ್ಕøತಿಕ ಹಬ್ಬದ’ ಕವಿಗೋಷ್ಠಿಯನ್ನು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಹೇಮಲತಾ ವಸ್ತ್ರದ ಹಾಗೂ ಗಣ್ಯಮಾನ್ಯರು ಉದ್ಘಾಟಿಸಿದರು. 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

 ವಿಜಯಪುರ: ಪ್ರಸ್ತುತ ದಿನಮಾನದಲ್ಲಿ ಸಾಹಿತ್ಯ ಎನ್ನುವುದು ವೈಯಕ್ತಿಕ ಲಾಭ ಹಾಗೂ ಪ್ರಶಸ್ತಿಗಳ ಬೆನ್ನತ್ತಿ ಹೋಗುವ ಹೀನಾಯ ಸ್ಥಿತಿ ಬಂದಿದ್ದು, ಇದನ್ನು ನಾವು ಬರಹಗಳ ಮೂಲಕವೇ ಖಂಡಿಸಬೇಕು ಎಂದು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಹೇಮಲತಾ ವಸ್ತ್ರದ ಹೇಳಿದರು. 

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಮಹಿಳಾ ಸಾಂಸ್ಕøತಿಕ ಹಬ್ಬದ’ ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯ ಎನ್ನುವುದು ಅಪಾರ ಶಕ್ತಿ ಹೊಂದಿದಂತಹ ಕ್ಷೇತ್ರ ಅದನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಬಾರದು. ಇಡೀ ಸಮಾಜವನ್ನೇ ಬದಲಿಸುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದ ತಲ್ಲಣಗಳು ಲೇಖಕರನ್ನು ನಿದ್ದೆ ಮಾಡಲು ಬಿಡಬಾರದು ಎಂದರು.

ಇನ್ನು ಕವಿತೆ ಎಂಬುವುದು ನಮ್ಮ ವ್ಯಕ್ತಿಗತ ಭಾವನೆಗೆ ಸ್ಪಂದನೆ ನೀಡುವಂತಿರಬೇಕು. ಕವಿತ್ರಿಯರು ಸಮಾಜದ ಭಾವನೆಗೆ ಸ್ಪಂದಿಸಬೇಕು. ಹೆಣ್ಣಿನ ಬಗ್ಗೆ ಅಪಾರವಾದ ಪ್ರೀತಿ ಕಾಳಜಿ ಎಲ್ಲವು ಇರಬೇಕು. ಯಾರಿಗೆ ಸಮಾಜದ ತಲ್ಲಣಗಳು ಸಮಸ್ಯೆಗಳು ನಿದ್ದೆ ಮಾಡಿಸದೇ ಅದರ ಬಗ್ಗೆ ವಿಚಾರಿಸಲು ದಾರಿ ಮಾಡಿಕೊಡುತ್ತವೆಯೋ ಅವರು ಮಾತ್ರ ನಿಜವಾದ ಕವಿ. ಓದು ಇದ್ದರೆ ಮಾತ್ರ ಒಬ್ಬ ಕವಿ ಎಲ್ಲ ವಿಷಯಗಳಿಗೂ ನ್ಯಾಯ ಕೊಡಲು ಸಾಧ್ಯ. ಕವಿಗೆ ಓದು ಎಷ್ಟು ಮುಖ್ಯವೂ ಅಷ್ಟೇ ಗ್ರಹಿಕೆ ಕೂಡಾ ಮುಖ್ಯವಾಗುತ್ತದೆ. ಜೊತೆಗೆ ಓದುವ ಕಲೆ ಕೂಡಾ ಸಿದ್ಧಿಸಬೇಕು ಎಂದರು. 

ಅತ್ಯುತ್ತಮ ಕವಿತೆಗಳು ಯಾವಾಗಲೂ ಏಕಾಂತದಲ್ಲಿ ಇದ್ದಾಗಲೇ ಬರುತ್ತವೆ. ಏಕಾಂತದಲ್ಲಿ ಸೃಷ್ಟಿಯಾದ ಕವಿತೆ ಲೋಕಾಂತಕ್ಕೆ ಅರ್ಪಣೆಯಾಗುತ್ತದೆ. ಕಾವ್ಯದ ರಚನೆಗೆ ಏಕಾಗ್ರತೆ ಅವಶ್ಯಕತೆ ಇದೆ ಮತ್ತು ಏಕಾಗ್ರತೆಯಿಂದ ಮಾತ್ರ ನಾವು ಕವಿತೆ ರಚನೆ ಮಾಡಲು ಸಾಧ್ಯ ಎಂದು ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಮಹಿಳಾ ಸಾಂಸ್ಕøತಿಕ ಹಬ್ಬದ’ ಕವಿಗೋಷ್ಠಿಯನ್ನು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಹೇಮಲತಾ ವಸ್ತ್ರದ ಉದ್ಘಾಟಿಸಿ ಮಾತನಾಡಿದರು. 

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಹಿಂದಿ ವಿಭಾಗದ ಮುಖ್ಯಸ್ಥ ಪ್ರೊ. ನಾಮದೇವಗೌಡ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕವಿತೆಗಳಿಂದ ತಮ್ಮ ಮನಸ್ಸಿನ ಭಾವನೆಗಳನ್ನು ಅತ್ಯಂತ ಸುಂದರವಾಗಿ ವ್ಯಕ್ತಪಡಿಸಿದ್ದು ಖುಷಿಯ ವಿಚಾರ. ಈ ಕವಿಗೋಷ್ಠಿಯಲ್ಲಿ ಅತೀ ಹೆಚ್ಚಿನ ಕವಿತೆಗಳು ತಾಯಿ ಮತ್ತು ಹೆಣ್ಣಿನ ಮೇಲೆ ಮೂಡಿ ಬಂದಿದ್ದು, ಹೆಣ್ಣಿನ ಪ್ರಾಮುಖ್ಯತೆ ಬಗ್ಗೆ ತಿಳಿಸುತ್ತದೆ. ನೀವು ಬರೆದ ಕವಿತೆಗಳು ಬರೀ ಇಲ್ಲಿಗೆ ಮಾತ್ರ ಸೀಮಿತವಾಗಬಾರದು ಈ ಬರಹ ನಿಮ್ಮ ಜೀವನದೂದ್ದಕ್ಕೂ ಸಾಗಲಿ. ಮುಂಬರುವ ದಿನಗಳಲ್ಲಿ ನೀವು ಮಹಿಳಾ ವಿವಿಯ ರತ್ನಗಳಾಗಲು ಸಂಶಯವಿಲ್ಲ ಎಂದು ಆಶಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ 30 ಕ್ಕೂ ಹೆಚ್ಚು ವಿವಿಧ ವಿಭಾಗದ ವಿದ್ಯಾರ್ಥಿನಿಯರು ಸ್ವರಚಿತ ಕವನ ವಾಚನ ಮಾಡಿದರು. 

ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಲಕ್ಷ್ಮೀದೇವಿ ವೈ, ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಮಹೇಶ ಚಿಂತಾಮಣಿ, ವಿವಿಧ ವಿಭಾಗದ ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ನಾರಾಯಣ ಬಿ. ಪವಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಗೀತ ವಿಭಾಗದ ವಿದ್ಯಾರ್ಥಿನಿಯರಾದ ಮಹಾಲಕ್ಷ್ಮೀ ಹಾಗೂ ರಾಗಿಣಿ ಪ್ರಾರ್ಥನಾ ಗೀತೆ ಹಾಡಿದರು. ಡಾ.ಸುಧಾರಾಣಿ ಮಣೂರ ಅತಿಥಿಗಳನ್ನು ಪರಿಚಯಿಸಿದರು. ಪದ್ಮಾವತಿ ಯತಗಲ್ ವಂದಿಸಿದರು. ಡಾ. ಚೇತನಾ ಸಂಕೊಂಡ ಹಾಗೂ ನಿಕಿತಾ ಚೆನ್ನಾಳ ಕಾರ್ಯಕ್ರಮವನ್ನು ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, March 2, 2024

ಐಎಎಸ್ ಅಧಿಕಾರಿ ಕೆ. ಶಿವರಾಮು ರವರಿಗೆ ಭಾವಪೂರ್ಣ ಶ್ರದ್ದಾಂಜಲಿ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಛಲವಾದಿ ಮಹಾಸಭಾದ ಸಂಸ್ಥಾಪಕರು ಹಾಗೂ ರಾಜ್ಯ ಅಧ್ಯಕ್ಷರು, ಹಿರಿಯ ಐಎಎಸ್ ಅಧಿಕಾರಿಗಳು ಮತ್ತು ಚಲನಚಿತ್ರ ನಟರಾದ ಕೆ.ಶಿವರಾಮು ರವರ ಅಗಲಿಕೆಯಿಂದಾಗಿ ಭಾವಪೂರ್ಣ ಶ್ರದ್ದಾಂಜಲಿ ಸಭೆಯನ್ನು ವಿಜಯಪುರ ನಗರದ ಸರಕಾರಿ ನೌಕರರ ಭವನದಲ್ಲಿ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುನೀಲ ಹೊಸಳ್ಳಿ ಅಧ್ಯಕ್ಷರು ಮಾತನಾಡಿ, ಕೆ.ಶಿವರಾಮು ಸಾಹೇಬರು, ಒಬ್ಬ ಧೀಮಂತ ಹಿರಿಯ ಐಎಎಸ್ ಅಧಿಕಾರಿಗಳಾಗಿ ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲ ಜಾತಿ, ಮತ, ಪಂಥ ಜನಾಂಗದವರೊಂದಿಗೆ ಒಳ್ಳೆಯ ನಿಕಟ ಸಂಪರ್ಕವನ್ನು ಹೊಂದಿದ್ದರು. ಇವರು ಎಲ್ಲ ಜನರಿಗೆ ಸಹಾಯ ಸಹಕಾರ ನೀಡುತ್ತಾ ತಮ್ಮ ಕಾರ್ಯನಿಷ್ಠೆಯನ್ನು ಅತ್ಯಂತ ಶ್ರದ್ದೆಯಿಂದ ಸಲ್ಲಿಸಿದ ಮಹಾನ ನಾಯಕರಾದ ಇವರು ಸರಕಾರಿ ನೌಕರಿಯಿಂದಿಗೆ ತಮ್ಮನ್ನು ಗುರ್ತಿಸಿದ ಛಲವಾದಿ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಇದರೊಂದಿಗೆ ಇವರು ಚಲನಚಿತ್ರದಲ್ಲಿಯೂ ಸಹ ಅಚ್ಚಳಿಯದಂತಹ ಚಿತ್ರಗಳನ್ನು ನೀಡಿದ ಇವರು ನಟಿಸಿದ ಚಿತ್ರಗಳು ಹಾಡುಗಳು ಜನಮಾನಸದಲ್ಲಿ ಜನಾನುರಾಗಿ ಆಗಿವೆ ಎಂದು ನೆನಪು ಮಾಡಿಕೊಂಡರು.

ಈ ಸಂದರ್ಭದಲ್ಲಿ ಆಯಾಜ ಎಚ್. ರೋಜೆವಾಲೆ, ಯುನುಸ್ ವಿಜಯಪುರ, ಜಿ.ಡಿ.ಹೊಸಮನಿ, ಬಿ.ಆ‌ರ್. ಲಿಂಬೂಡಕರ, ಫಯಾಜ ಜಮಾದಾರ, ಎಮ್.ಆರ್. ಮೆಟಗಾರ, ಸುರೇಶ ಕೋಟ್ಯಾಳಕರ, ರಾಜಕುಮಾರ ಆರ್. ಕಟ್ಟಿ, ಇಬ್ರಾಹಿಂ ಒಂಟಿ, ಸಿದ್ದಾರ್ಥ ಅಹಿರಸಂಗ, ಶಶಿಕಾಂತ ಕಟ್ಟಿ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಾ. 6 ರಂದು ಕರ್ನಾಟಕ ಸರಕಾರ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪತ್ರಕರ್ತ, ಸಾಹಿತಿ ಕಲ್ಲಪ್ಪ ಶಿವಶರಣ ವಿರಚಿತ ಕಲ್ಲು ಮನಸ್ಸು ಕೃತಿ ಲೋಕಾರ್ಪಣೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಮಾ. 6  ರಂದು ಬುಧವಾರ ಸಂಜೆ 5.30 ಗಂಟೆಗೆ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಕರ್ನಾಟಕ ಸರಕಾರ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಆಯ್ಕೆಯಾದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಪತ್ರಕರ್ತ, ಸಾಹಿತಿ ಕಲ್ಲಪ್ಪ ಶಿವಶರಣ ವಿರಚಿತ ‘ಕಲ್ಲು ಮನಸ್ಸು’ ಕಲ್ಲರಳಿ ಹೂಮಸು ಕೃತಿ ಲೋಕಾರ್ಪಣೆ ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ನೆರವೇರಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಹೆಸರಾಂತ ಸಾಹಿತಿ ಶ್ರೀ ಜೋಗಿ (ಗಿರೀಶ್ ರಾವ್ ತ್ವಾರ್) ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿದೇವಿ  ಭಾಗವಹಿಸಲಿದ್ದಾರೆ. ಅದರಂತೆ ಇದೇ ಸಂದರ್ಭದಲ್ಲಿ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಿಸಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.