Sunday, July 28, 2024
ಈ ಬೇರುಗಳನ್ನು ಗಟ್ಟಿಗೊಳಿಸುವ ಜವಾಬ್ದಾರಿ ಜಿಲ್ಲೆಯ ಪತ್ರಕರ್ತರ ಮೇಲಿದೆ: ಕೆವಿಪಿ
ಬಾಗಲಕೋಟೆ: ಗಾಂಧಿವಾದ ಮತ್ತು ಸಮಾಜವಾದಿ ಆಶಯಗಳು ಆಳವಾಗಿ ಬೇರೂರಿರುವ ನೆಲ ಬಾಗಲಕೋಟೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಈ ಬೇರುಗಳನ್ನು ಗಟ್ಟಿಗೊಳಿಸುವ ಜವಾಬ್ದಾರಿ ಜಿಲ್ಲೆಯ ಪತ್ರಕರ್ತರ ಮೇಲಿದೆ. ಪ್ರಜಾಪ್ರಭುತ್ವ ವಚನ ಚಳವಳಿಯ ಅಂತರಾಳ. ಬಾಗಲಕೋಟೆ ಸೂಫಿ-ಶರಣರ-ವಚನ ಚಳವಳಿಯ ನಾಡು. ಪ್ರಜಾಪ್ರಭುತ್ವದ ಸ್ಥಾಪನೆ ಮತ್ತು ರಕ್ಷಣೆ ವಚನ ಚಳವಳಿಯ ಆಶಯವೂ ಆಗಿದೆ. ಇದು ಪತ್ರಿಕಾ ವೃತ್ತಿಯ ಹೊಣೆಗಾರಿಕೆಯೂ ಆಗಿದೆ ಎಂದರು.
ನಾನು ಮುಖ್ಯಮಂತ್ರಿಗಳ ಜೊತೆಗಿದ್ದ ಈ ಹತ್ತು ವರ್ಷಗಳಲ್ಲಿ ನಾನು ಗಮನಿಸಿರುವುದು ಏನೆಂದರೆ, ಮುಖ್ಯಮಂತ್ರಿಗಳಿಗೆ ಭಾಗಲಕೋಟೆ ಜಿಲ್ಲೆಗೆ ಹೋಗೋದು ಅಂದರೆ ತಮ್ಮ ತವರು ಜಿಲ್ಲೆ ಮೈಸೂರಿಗೆ ಹೋದಷ್ಟೇ ಸಂಭ್ರಮ ಪಡುತ್ತಾರೆ. ವಿಧಾನಸೌಧದಲ್ಲಿ ಬಾದಾಮಿಯವರು ಕಂಡರೆ ಕಾರು ನಿಲ್ಲಿಸಿ ಹತ್ತಿರಕ್ಕೆ ಕರೆದು ಆತ್ಮೀಯವಾಗಿ ಮಾತನಾಡುತ್ತಾರೆ ಎಂದು ತಮ್ಮ ಅನುಭವ ಹಂಚಿಕೊಂಡರು.
ಪತ್ರಕರ್ತರು ತಮ್ಮ ಹಾಗೂ ಕುಟುಂಬದ ಆರೋಗ್ಯದ ಕಡೆಗೂ ಗಮನ ಹರಿಸಿ ಎಂದು ಕಿವಿ ಮಾತು ಹೇಳಿದ ಪ್ರಭಾಕರ್ ಅವರು, ಬಡ ಮತ್ತು ನಿಜವಾದ ವೃತ್ತಿಪರ ಪತ್ರಕರ್ತ ಕುಟುಂಬಗಳ ಯೋಗಕ್ಷೇಮಕ್ಕಾಗಿ ಒಂದು ಉತ್ತಮವಾದ ಯೋಜನೆ ರೂಪಿಸುವ ಅಗತ್ಯವಿದೆ. ಆ ದಿಕ್ಕಿನಲ್ಲಿ ಪ್ರಯತ್ನಗಳು ಸಾಗಿವೆ ಎಂದರು.
ಮುಂದಿನ 15-20 ದಿನಗಳಲ್ಲಿ ಕಾರ್ಯನಿರತ ಗ್ರಾಮೀಣ ಪತ್ರಕರ್ತರ ಕೈಗೆ ಉಚಿತ ಬಸ್ ಪಾಸ್ ಸಿಗುವ ಸಿದ್ಧತೆಗಳು ಮುಗಿದಿವೆ. ಕಾರ್ಯ ಮರೆತ ಪತ್ರಕರ್ತರು ಮತ್ತು ವೃತ್ತಿ ತೊರೆದ ಪತ್ರಕರ್ತರು ಸರ್ಕಾರದ ಈ ಯೋಜನೆ ದುರುಪಯೋಗ ಆಗದಂತೆ ಸಹಕರಿಸಿ ಎಂದು ಮನವಿ ಮಾಡಿದರು.
ಸರ್ಕಾರಿ ನಿವೇಶನ ಬಗ್ಗೆ ಸಚಿವರ ಜೊತೆ ಚರ್ಚಿಸಿದ ಕೆವಿಪಿ
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರ ಜೊತೆ ಚರ್ಚಿಸಿದ ಪ್ರಭಾಕರ್ ಅವರು ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ಕೊಡಿಸುವ ಬಗ್ಗೆ ವಿನಂತಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ತಿಮ್ಮಾಪುರ್ , ಜಿಲ್ಲಾಧಿಕಾರಿ ಜಾನಕಿ, ಸಿಇಓ ಕುರೇನ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಕಾರ್ಪೋರೇಟ್ ಗಳ ಶ್ರೀಮಂತಿಕೆಯ ವಿಜ್ರಂಭಣೆಯೇ ಪತ್ರಿಕೋದ್ಯಮಕ್ಕೆ ಆಧ್ಯತೆ ಆಗುತ್ತಿರುವುದು ನಾಚಿಕೆಗೇಡು: ಕೆವಿಪಿ
ವಿಜಯಪುರ : ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಿಜಯಪುರ ಬಹು ಸಂಸ್ಕೃತಿ ಮತ್ತು ಬಹು ಭಾಷೆಗಳ, ಹಲವು ಸಂಸ್ಕಾರಗಳನ್ನು ಏಕ ಕಾಲಕ್ಕೆ ಆಚರಿಸುವ ಜಿಲ್ಲೆ. ಈ ಬಹುತ್ವವೇ ನಮ್ಮ ನಾಡಿನ ಹೆಮ್ಮೆ. ಈ ಬಹುತ್ವವನ್ನು ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.
ಈ ವೇದಿಕೆಯ ಮೇಲೆ, ಈ ವೇದಿಕೆಯ ಮುಂಭಾಗದಲ್ಲಿ ಹಲವು ಸಂಸ್ಕೃತಿ ಮತ್ತು ಹಲವು ಭಾಷಿಕರು ನೆರೆದಿದ್ದೇವೆ. ಇದು ಈ ಜಿಲ್ಲೆಯ ಬಹುತ್ವದ ಸಂಕೇತ ಕೂಡ ಹೌದು. ಇಲ್ಲಿ, ನನ್ನ ಬಲಗಡೆ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಭಾವ ಚಿತ್ರಗಳನ್ನು ಅಳವಡಿದ್ದಾರೆ. ಬುದ್ದನಿಂದ ಹಿಡಿದು ಅಂಬೇಡ್ಕರ್ ಅವರ ವರೆಗೂ ಏನೇನು ಹೇಳಿದ್ದಾರೋ, ಯಾವುದಕ್ಕಾಗಿ ಶ್ರಮಿಸಿದ್ದಾರೋ ಅದನ್ನು ಕಾಪಾಡಿಕೊಳ್ಳುವುದೇ ಪತ್ರಕರ್ತರ ಜವಾಬ್ದಾರಿ ಮತ್ತು ಪತ್ರಿಕೋದ್ಯಮದ ಹೊಣೆಗಾರಿಕೆ ಆಗಿದೆ.
ನಮ್ಮ ಸಂವಿಧಾನದಲ್ಲಿ ಪತ್ರಕರ್ತರಿಗೆ ಪ್ರತ್ಯೇಕ ಹಕ್ಕು, ಅಧಿಕಾರಗಳನ್ನೇನೂ ನೀಡಿಲ್ಲ. ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವೂ ಆಗಿದೆ. ಈ ಅಭಿವ್ಯಕ್ತ ಸ್ವಾತಂತ್ರ್ಯದ ದುರುಪಯೋಗ ಆದಾಗ ಎಂತೆಂಥಾ ಅನಾಹುತಗಳು ಆಗುತ್ತವೆ ಎನ್ನುವುದನ್ನು ಈಗಾಗಲೇ ಈ ಸಮಾಜ ಕಂಡಿದೆ ಎಂದು ಉದಾಹರಣೆಗಳ ಸಮೇತ ವಿವರಿಸಿದರು.
ಸಂವಿಧಾನದ ರಕ್ಷಣೆಯಿಂದ ಮಾತ್ರ ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ. ಜನರ ನಿರೀಕ್ಷೆ ಮತ್ತು ಸಮಸ್ಯೆಗಳನ್ನು ಅರಿಯಲು ಸರ್ಕಾರಕ್ಕಾಗಲಿ, ವಿರೋಧ ಪಕ್ಷಕ್ಕಾಗಲಿ ಇರುವ ಬಹುಮುಖ್ಯ ಸಾಧನ ಮಾಧ್ಯಮ. ಮೊದಲೆಲ್ಲಾ ಜನರ ನಿರೀಕ್ಷೆಗಳನ್ಮು ಮಾಧ್ಯಮಗಳು ಸರ್ಕಾರದ ಗಮನಕ್ಕೆ ತರುತ್ತಿದ್ದವು. ಈಗ ಪರಿಸ್ಥಿತಿ ಬದಲಾಗಿದೆ. ಕಾರ್ಪೋರೇಟ್ ಶ್ರೀಮಂತರ ವೈಯುಕ್ತಿಕ ಹಿತಾಸಕ್ತಿಗಳೇ ಜನರ ಸಮಸ್ಯೆಗಳು ಎನ್ನುವಂತೆ ಬಿಂಬಿಸಲಾಗುತ್ತಿದೆ.
ಕಾರ್ಪೋರೇಟ್ ಸಂಸ್ಥೆಗಳು ಮಾಧ್ಯಮ ಲೋಕವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡ ಬಳಿಕ ಮನರಂಜನೆ ಮತ್ತು ಸುದ್ದಿಗಳ ಆಧ್ಯತೆ ಎರಡೂ ಬದಲಾಗಿವೆ ಎಂದರು.
ಕಾರ್ಪೋರೇಟ್ ಗಳ ಶ್ರೀಮಂತಿಕೆಯ ವಿಜ್ರಂಭಣೆ ಮತ್ತು ಸೆಲೆಬ್ರಿಟಿಗಳ ಜೀವನ ವಿಕೃತಿಗಳ ವಿಜ್ರಂಭಣೆಯೇ ಪತ್ರಿಕೋದ್ಯಮಕ್ಕೆ ಆಧ್ಯತೆ ಆಗುತ್ತಿರುವುದು ನಾಚಿಕೆಗೇಡು ಅಲ್ಲವೇ ಎಂದು ಪ್ರಶ್ನಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಫ.ಗು.ಹಳಕಟ್ಟಿಯವರ ಕುರಿತು ವಿಶೇಷ ಉಪನ್ಯಾಸ ನೀಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾ ಮತ್ತು ತಾಲ್ಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


