Wednesday, August 21, 2024

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು,  ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.



ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್ ನಿಂದ 524.25 ಮೀಟರ್ ಎತ್ತರಕ್ಕೆ ಹೆಚ್ಚಿಸಬೇಕಾಗಿದೆ. ಆದರೆ ಇದಕ್ಕೆ ಕೇಂದ್ರಸರ್ಕಾರದ ನೋಟಿಫಿಕೇಶನ್ ಇನ್ನೂ ಆಗಿರುವುದರಿಂದ  ಎತ್ತರವನ್ನು ಹೆಚ್ಚಿಸಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಕೇಂದ್ರಸರ್ಕಾರವು , ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ಇತ್ಯರ್ಥ ಮಾಡಿಸುವುದು ಅಗತ್ಯವಿದೆ.  ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲು ನಾನು ಮತ್ತು ಉಪಮುಖ್ಯಮಂತ್ರಿ ಅವರು ಈಗಾಗಲೇ  ಪ್ರಧಾನಮಂತ್ರಿ ಅವರನ್ನು ಹಾಗೂ  ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ ಎಂದರು.

 ಇದಕ್ಕೆ ಸಂಬಂಧಿಸಿದಂತೆ ನಾವು ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣಕ್ಕಾಗಿ ಸಿದ್ದರಿದ್ದೇವೆ.  ನಮ್ಮ ಹಿಂದಿನ ಅವಧಿಯಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ 51,148 ಕೋಟಿ ರೂ.ಗಳ ಅಂದಾಜಿಗೆ ಅನುಮೋದನೆ ನೀಡಲಾಗಿತ್ತು. ಈಗ ಈ ಮೊತ್ತ 80 ಸಾವಿರ ಕೋಟಿ ರೂ.ಗಳಷ್ಟಾಗಬಹುದು ಎಂಬ ಅಂದಾಜಿದೆ. ಪ್ರತಿ ವರ್ಷ ನಮ್ಮ ಸರ್ಕಾರ 20,000 ಕೋಟಿ ಖರ್ಚು ಮಾಡುವ ಮೂಲಕ, 5 ವರ್ಷಕ್ಕೆ ಅಂದಾಜು 1 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಬೇಕೆಂಬುದು ನಮ್ಮ ಸರ್ಕಾರದ ಉದ್ದೇಶಿಸಲಾಗಿದೆ.  ಆದರೆ ಇದಕ್ಕೆ ಮೊದಲು ಕೇಂದ್ರ ಸರ್ಕಾರದ ನೋಟಿಫಿಕೇಷನ್ ಆಗಬೇಕಿರುವುದರಿಂದ, ಪ್ರಧಾನಮಂತ್ರಿಗಳ ಮಧ್ಯಸ್ಥಿಕೆಯಲ್ಲಿ ನಿರ್ಣಯವಾದರೆ, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆಗೆ ನಾವು ಚಾಲನೆ ನೀಡಬಹುದು. 

ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಡಿ 16.47 ಲಕ್ಷ ಎಕರೆ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ. ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳದಿಂದ ಯೋಜನೆಯಿಂದ ಒಟ್ಟು 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ)  ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ.  ಬಾಗಲಕೋಟೆ, ಬಿಜಾಪುರ, ಯಲಬುರ್ಗಾ, ಕೊಪ್ಪಳರಾಯಚೂರು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಇವರ ಜನಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಪುನರ್ವಸತಿ, ಪುನರ್ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ ಮಾಡಲಿದ್ದೇವೆ.

ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ, ಇಲ್ಲಿಯೂ  ಸಮಾನಾಂತರ ಜಲಾಶಯ ನಿರ್ಮಾಣದ ಪ್ರಸ್ತಾಪ ತಮ್ಮ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜಲಾಶಯದಲ್ಲಿ ಹೂಳು ತುಂಬಿರುವ ಪ್ರಮಾಣ, ನೀರಿನ ಸಾಮರ್ಥ್ಯ, ಇದರಿಂದ ರೈತರಿಗಾಗಬಹುದಾದ ತೊಂದರೆ ಬಗ್ಗೆ ಚರ್ಚೆ ನಡೆಸುತ್ತೇವೆ.

ರೈತರ ಅನುಕೂಲಕ್ಕಾಗಿ ಬಸವ ಸಾಗರ ಸೇರಿದಂತೆ ಇತರ ಜಲಾಶಯಗಳಿಗೆ ನೀರು ಮರುಹಂಚಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಯೋಜನೆಯಲ್ಲಿ ಸ್ಕೀಂ ಎ ಮತ್ತು ಬಿ ಎರಡು ವಿಧವಿದ್ದು, ಯೋಜನಾವಾರು 3ನೇ ಹಂತದಲ್ಲಿ ಹಂಚಿಕೆಯಾಗಿದೆ. ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಾಗಿದೆ. ಈ ನೀರನ್ನು ಸಂಬಂಧಪಟ್ಟ ಜಿಲ್ಲೆಗೆ ನೀರು ಮರುಹಂಚಿಕೆ  ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್‌ಗೇಟ್ ಅಳವಡಿಕೆಯನ್ನು ಮೂರ್ನಾಲ್ಕು ದಿನಗಳ ಒಳಗಾಗಿ ಪೂರ್ಣಗೊಳಿಸಲಾಗಿದೆ. ದುರಸ್ತಿಯ ಅವಧಿಯಲ್ಲಿ 35 ಟಿಎಂಸಿ ನೀರು ಮಾತ್ರ ಪೋಲಾಗಿದೆ. ಇಂದಿಗೂ ಜಲಾಶಯದಲ್ಲಿ ಸುಮಾರು 78 ಟಿಎಂಸಿ ನೀರಿದೆ.    ಇನ್ನೂ 20 ಟಿಎಂಸಿ ನೀರು ಹರಿದುಬಂದರೆ, ಜಲಾಶಯ ಶೇ.95 ರಷ್ಟು ಭರ್ತಿಯಾಗುತ್ತದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ  ಮೊದಲ ಬೆಳೆಗೆ ನೀರು ಬಿಡಲಾಗಿದೆ. ಆದ್ದರಿಂದ ರೈತರಿಗೆ ಯಾವುದೇ ಆತಂಕ  ಬೇಡ ಎಂದು ಹೇಳಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 19, 2024

'ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ'' ತುಮಕೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಥಮ ರ‍್ಯಾಂಕ್ | ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಪ್ರದಾನ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

      ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ 'ಚಿನ್ನದ ಪದಕ'ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

        ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ 'ಗೋಲ್ಡ್ ಮೆಡಲ್' ನ ಸಾಧನೆ ತಂದಿದ್ದಾರೆ.

         ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್  ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

       ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ. 


  ''ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ 'ಚಿನ್ನದ ಪದಕ' ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ.

-ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)


"ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ  ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ. 

 - ಡಾ. ಬಿ.ಟಿ ಮುದ್ದೇಶ (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


20-08-2024 EE DIVASA KANNADA DAILY NEWS PAPER

ಆ.21 ರಂದು ಮುಖ್ಯಮಂತ್ರಿಗಳಿAದ ಕೃಷ್ಣೆಗೆ ಬಾಗಿನ ಅರ್ಪಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಆ.21 ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿ, 10.50 ಕ್ಕೆ ಗಿಣಿಗೆರಾ ಏರಸ್ಟಿçಪ್ ಕೊಪ್ಪಳ ಜಿಲ್ಲೆಗೆ ಆಗಮಿಸಿ, ಬೆಳಗ್ಗೆ 11 ಗಂಟೆಗೆ ಕೊಪ್ಪಳದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12.30ಕ್ಕೆ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿ,  ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಆಶ್ರಯದಲ್ಲಿ ಆ.21 ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತಿç ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ನಾಡಿನ ಪ್ರತಿಷ್ಠಿತ ಆಲಮಟ್ಟಿ ಅಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ನಿಮಿತ್ತ ಅಂದು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ ಉಪಸ್ಥಿತಿ ವಹಿಸಲಿದ್ದು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆದ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



19-08-2024 EE DIVASA KANNADA DAILY NEWS PAPER