Sunday, September 8, 2024
Friday, September 6, 2024
Thursday, September 5, 2024
ಗಣೇಶೋತ್ಸವ: ಎಫ್‌ಎಸ್‌ಎಸ್‌ಎಐ ಪರವಾನಗಿ ಅವೈಜ್ಞಾನಿಕ
ವಿಜಯಪುರ: ಗಣೇಶೋತ್ಸವ ಪ್ರಸಾದಕ್ಕೆ ಎಫ್‌ಎಸ್‌ಎಸ್‌ಎಐ ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿAದ ಮಾತ್ರ ಪ್ರಸಾದ ಪಡೆಯಬೇಕೆಂಬ ನಿಯಮಾವಳಿ ಅವೈಜ್ಞಾನಿಕ ಹಾಗೂ ಹಿಂದೂ ಹಬ್ಬಗಳನ್ನು, ಆಚರಣೆಗಳನ್ನು ಹತ್ತಿಕ್ಕುವ ಪ್ರಯತ್ನ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.
ಈ ಕುರಿತಂತೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ರಾಜ್ಯದ ಜನರ ಮೇಲೆ ಅಷ್ಟೊಂದು ಕಾಳಜಿ ಇದ್ದಲ್ಲಿ, ಇದೇ ನಿಯಮವನ್ನು ಹೋಟೆಲ್, ಡಾಬಾ ಹಾಗೂ ಹಲಾಲ್ ಮಾಂಸವನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳಿಗೂ ಅನ್ವಯ ಆಗಬೇಕಾಗಿತ್ತು. ಇನ್ನೇನು, ಹಬ್ಬಕ್ಕೆ ಎರಡು ದಿನಗಳು ಇರಬೇಕಾದರೆ ಪಾಲಿಸಲಾಗದ ನಿಯಮವನ್ನು ಹೇರುವುದು ಸರ್ಕಾರದ ಹಿಂದೂ ವಿರೋಧಿ ನೀತಿ ತೋರಿಸುತ್ತದೆ. ಅನ್ಯಕೋಮಿನ ಹಬ್ಬಗಳಲ್ಲಿ ಬೀದಿ ಬೀದಿಯಲ್ಲಿ ಪ್ರಾಣಿಬಲಿ ನೀಡಿ, ಅದರಿಂದ ಮಾಂಸ ಮಾರಾಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ ?. ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಆಹಾರ ತಯಾರು ಮಾಡಬೇಕಾದರೆ ಎಫ್‌ಎಸ್‌ಎಸ್‌ಎಎಲ್ ಪರವಾನಗಿ ಪಡೆದವರಿಂದ ಸರ್ಕಾರ ಮಾಡಿಸುತ್ತಿದೆಯಾ ? ಬೀದಿ, ಬೀದಿಗಳಲ್ಲಿ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು ಉಪಯೋಗಿಸಿ ತಿಂಡಿ, ಊಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಮಕ್ಕಳಲ್ಲಿನ ಪೌಷ್ಟಿಕತೆ ಕೊರತೆ ಕುರಿತು ಅರಿವು ಮೂಡಿಸುವುದು ಅವಶ್ಯ
ವಿಜಯಪುರ: ಮಕ್ಕಳಲ್ಲಿ ಕಂಡುಬರುತ್ತಿರುವ ಪೌಷ್ಟಿಕತೆಯ ಕೊರತೆ ಕುರಿತು ಪಾಲಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧಿಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಗರಗಿ ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆಯ ಎವ್ಹಿಎಸ್ ಆಯುರ್ವೇದ ಮಹಾವಿದ್ಯಾಲಯ ಕೌಮಾರಭೃತ್ಯ ವಿಭಾಗದಲ್ಲಿ ಹಮ್ಮಿಕೊಂಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಶಿಶು ಅಭಿವೃದ್ಧಿ ಯೋಜನೆ ನಿಮಿತ್ತ ರಾಷ್ಟಿçಯ ಪೋಷಣ ಮಾಸಾಚರಣೆ ಮತ್ತು ವಿಶ್ವ ಪೌಷ್ಟಿಕ ಆಹಾರ ಸಪ್ತಾಹ ದಿನಾಚರಣೆ ಹಾಗೂ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪೌಷ್ಟಿಕತೆಯ ಕೊರತೆ ಉಂಟಾಗುತ್ತಿದೆ. ಈ ಕುರಿತು ಜನಜಾಗೃತಿ ಮೂಡಿಸಬೇಕಾಗಿದೆ. ಇದಕ್ಕೆ ಸಂಬAಧಿಸಿದ ಇಲಾಖೆಗಳ ಮೂಲಕ ಹಾಗೂ ಆಯುರ್ವೇದ ಮಹಾವಿದ್ಯಾಲಯದ ಸಹಯೋಗದೊಂದಿಗೆ ಜನಸಾಮಾನ್ಯರಲ್ಲಿ ಆಯುರ್ವೆದಿಯ ಪೊಷಣಮುಕ್ತ ಆಹಾರ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನಿಯ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಾಗಿರುವ ಕೆಲಸ ಕಾರ್ಯಗಳಿಗೆ ಮಹಾವಿದ್ಯಾಲಯದ ಕೌಮಾರಭೃತ್ಯ ವಿಭಾಗ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.
ಈ ಕಾರ್ಯಕ್ರಮದ ನಂತರ ಆಗಮಿಸಿದ 50 ಮಕ್ಕಳಿಗೆ ಕೌಮಾರಭೃತ್ಯ ವಿಭಾಗ ವತಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧ ವಿತರಣೆ ಮಾಡಲಾಯಿತು. ಅಲ್ಲದೇ, ಈ ಕಾರ್ಯಕ್ರಮದ ನಿಮಿತ್ತ ಗರ್ಭಿಣಿಯರಿಗೆ ಸೀಮಂತ ಮತ್ತು ಮಕ್ಕಳಿಗೆ ಅನ್ನಪ್ರಾಶನ ಸಂಸ್ಕಾರ, ಪ್ರತಿ ತಾಯಿಗೊಂದು ಗಿಡ ಅನ್ನೊ ಎಂಬ ಧ್ಯೇಯ ವಾಕ್ಯದೊಂದಿಗೆ ಮಹಾವಿದ್ಯಾಲಯದ ಶ್ರೀವನದಲ್ಲಿ ಸಸಿ ನೆಡಲಾಯಿತು.
ಈ ಸಂದರ್ಭದಲ್ಲಿ ಬಸವರಾಜ ಜಿಗಳೂರ, ಡಾ. ಜಾವೇದ್ ಬಾಗಾಯತ, ಕೆ.ಕೆ. ಚವ್ಹಾಣ, ಅರವಿಂದ ಹಗರಗಿ, ಡಾ. ಕೆ.ಎ. ಪಾಟೀಲ, ಅನಿಲ ಹಳ್ಳಿ, ಡಾ. ವಿಜಯಲಕ್ಷಿö್ಮ ಬೆನಕಟ್ಟಿ, ಡಾ. ದೌಲಬಿ ಚೌಧರಿ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Tuesday, September 3, 2024
ಫಾಸ್ಟ್‌ಫುಡ್ ತಯಾರಿಕಾ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫಾಸ್ಟ್‌ಫುಡ್ ತಯಾರಿಕಾ ಕುರಿತ 10 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.