Wednesday, October 9, 2024

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯಪುರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲೆಯ ಇಂಡಿ, ಚಡಚಣ, ಸಿಂದಗಿ, ವಿಜಯಪುರ(ಗ್ರಾ), ವಿಜಯಪುರ(ನ), ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿನ ಖಾಲಿ ಇರುವ ಅಂಗನವಾಡಿ ಕಾಯಕರ್ತೆ ಹಾಗೂ ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

 ಖಾಲಿಯಿರುವ 313 ಅಂಗನವಾಡಿ ಕಾರ್ಯಕರ್ತೆ ಹಾಗೂ 857 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 09-11-2024 ಕೊನೆಯ ದಿನವಾಗಿದ್ದು, ಅಂಗನವಾಡಿ ಕಾರ್ಯಕತೆಯರ ಹುದ್ದೆಗೆ ಕನಿಷ್ಠ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/  ಮೂಲಕ ಸಲ್ಲಿಸಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಅಕ್ಟೋಬರ್ 23ರಂದು ಭಾಷಣ ಸ್ಪರ್ಧೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗಾಗಿ ಇದೇ ತಿಂಗಳ ಅಕ್ಟೋಬರ್ 23ರಂದು ಬೆಳಿಗ್ಗೆ 11 ಗಂಟೆಗೆ “ವಿಕಸಿತ ಭಾರತ- ಯುವಜನರ ಪಾತ್ರ” ಕುರಿತ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.

ಪದವಿ ಕಾಲೇಜುಗಳಲ್ಲಿ ಬಿ.ಎ., ಬಿ.ಕಾಂ., ಬಿಎಸ್‌ಸಿ, ಬಿಸಿಎ, ಬಿಬಿಎಂ ಮುಂತಾದ ಕೋರ್ಸ್ಗಳಲ್ಲಿ ಒಂದರಿAದ ಆರನೆಯ ಸೆಮಿಸ್ಟರ್ ವರೆಗೆ ಓದುತ್ತಿರುವ ಅಥವಾ ಈ ವರ್ಷ 6ನೆಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿನಿಯರು ಈ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಬಹುದು. 

ಈ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ- ರೂ.1500, ದ್ವಿತೀಯ ಬಹುಮಾನ- ರೂ.1000 ಮತ್ತು ತೃತೀಯ ಬಹುಮಾನ- ರೂ.500 ರೂಪಾಯಿಗಳ ನಗದು ನೀಡಲಾಗುವುದು. ಅಲ್ಲದೇ ಐದು ಸಮಾಧಾನಕರ ಬಹುಮಾನಗಳನ್ನು ಕೂಡಾ ನೀಡಲಾಗುತ್ತದೆ.  

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿನಿಯರು ಈ  ಲಿಂಕ್ https://forms.gle/NsUC12WZ7Mp bNQvy7  ಬಳಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂದೀಪ್ ಮೊಬೈಲ್ ಸಂಖ್ಯೆ 9844681398 ಸಂಪರ್ಕಿಸಬಹುದು. ಇಲ್ಲವೇ ನೇರವಾಗಿ ಅಕ್ಟೋಬರ್ 23ರಂದು 10.45ರೊಳಗಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ನೇರವಾಗಿ ಬಂದು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿಜಯಪುರ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ

ವಿಜಯಪುರ : ಭಾರತವು ಹಲವು ವೈವಿಧ್ಯಗಳನ್ನು ಒಳಗೊಂಡ ದೇಶವಾಗಿದ್ದು, ಕರ್ನಾಟಕ ತನ್ನದೇಯಾದ ವಿಶಿಷ್ಟತೆ ಹೊಂದಿದ್ದು, ರಾಜ್ಯದ ಜನರ ದೈನಂದಿನ ಜೀವನದ ಕನ್ನಡ ಭಾಷೆಯ ಬಗ್ಗೆ ನಿರಂತರವಾಗಿ ಅಭಿಮಾನವಿರಲಿ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

 ಬುಧವಾರ ಅವರು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥವನ್ನು ಸ್ವಾಗತಿಸಿ, ಭುವನೇಶ್ವರಿ ದೇವಿಗೆ ಮಾಲಾಪರ್ಣೆ ಮಾಡಿ ಮಾತನಾಡಿದರು.

 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಕನ್ನಡ ಜ್ಯೋತಿ ರಥ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಂಚರಿಸಲಿದೆ. ಕನ್ನಡ ಜ್ಯೋತಿ ರಥಕ್ಕೆ ಸಾರ್ವಜನಿಕರು ಅಭೂತಪೂರ್ವ ಸ್ವಾಗತ ಕೋರಿ ಕನ್ನಡ ಸಾಹಿತ್ಯ ಸಮೇಳನದ ಯಶಸ್ಸಿಗೆ ಸಹಕರಿಸಬೇಕು. ಪ್ರತಿಯೊಬ್ಬರೂ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿ ದಿನವೂ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳಸಿಕೊಳ್ಳಬೇಕು. ನಾಡುನುಡಿಯ ಬಗ್ಗೆ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಮಾತನಾಡಿ, ಸಾಹಿತ್ಯ, ಕಲೆ, ಸಾಂಸ್ಕೃತಿಕ ಪರಂಪರೆಗಳನ್ನು ನಾವು ಅನುಸರಣೆ ಮಾಡಬೇಕು. ಇಂದಿನ ಯುವ ಜನಾಂಗಕ್ಕೆ ಕನ್ನಡ ನಾಡು ನುಡಿಯ ಬಗ್ಗೆ ಹಿರಿಯರ ತ್ಯಾಗ ಹಾಗೂ ಸಾಧನೆಗಳನ್ನು ಪರಿಚಯಿಸುವ ಕಾರ್ಯ ಮಾಡಬೇಕಾಗಿದೆ ಎಂದರು.

ಕನ್ನಡ ಜ್ಯೋತಿ ರಥಯಾತ್ರೆಯೂ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಮಾರುಕಟ್ಟೆ ರಸ್ತೆ ಮಾರ್ಗವಾಗಿ ಗಾಂಧಿವೃತ್ತದ ಮೂಲಕ ವಿವಿಧ ಕಲಾಮೇಳಗಳೊಂದಿಗೆ ನಗರದಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ರಥವನ್ನು ಇಂಡಿ ತಾಲೂಕಿಗೆ ಬಿಳ್ಕೋಡಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪವಿಭಾಗಾಧಿಕಾರಿ, ಗುರುನಾಥ ದಡ್ಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎನ್.ಎಚ್.ನಾಗೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ತಹಶೀಲ್ದಾರ ಪ್ರಕಾಶ ಚನಗೊಂಡ, ವಿಜಯಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಶಿಂಪೀರ್ ವಾಲೀಕಾರ, ಫಯಾಜ್ ಕಲಾದಗಿ, ಅಡಿವೆಪ್ಪ ಸಾಲಗಲ್, ಅಭಿಷೇಕ್ ಚಕ್ರವರ್ತಿ, ಆನಂದ ಕುಲಕಣಿ, ಸುರೇಶ ಜತ್ತಿ, ದೇವೆಂದ್ರ ಮೆರೆಕರ್, ವಿದ್ಯಾವತಿ ಅಂಕಲಗಿ, ರವಿ ಕಿತ್ತೂರ, ಶ್ರೀಶೈಲ ಆಳೂರ ಸೇರಿದಂತೆ ವಿವಿಧ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

09-10-2024 EE DIVASA KANNADA DAILY NEWS PAPER