Thursday, February 6, 2025
ಕ್ರೀಡೆ ಉತ್ತಮ ಆರೋಗ್ಯವನ್ನು ಬೆಳೆಸಿಕೊಳ್ಳಲು ಸಹಾಯಕವಾಗಿದೆ : ಬಾಲಾಜಿ
ವಿಜಯಪುರ: ಕ್ರೀಡೆ ಕೇವಲ ಮನರಂಜನೆಗಾಗಿ ಮಾತ್ರವಲ್ಲ, ಉತ್ತಮ ಆರೋಗ್ಯವನ್ನು ಬೆಳೆಸಿಕೊಳ್ಳಲು ಸಹಾಯಕವಾಗಿದೆ ಎಂದು ಬೆಂಗಳೂರಿನ ಅಂತರಾಷ್ಟಿçÃಯ ಕ್ರೀಡಾಪಟು ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಬಾಲಾಜಿ ಪ್ರಭು ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಮತ್ತು ದೈಹಿಕ ನಿರ್ದೇಶನಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ವಾಲಿಬಾಲ್ ಕ್ರೀಡೆಯ ಕುರಿತು ಮೂರು ದಿನಗಳ ಕಾರ್ಯಾಗಾರ ಮತ್ತು ನಿರ್ಣಾಯಕರ ಪರೀಕ್ಷೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಜೀವನದಲ್ಲಿ ಸೋಲು-ಗೆಲುವು ಸಹಜ. ಸೋಲು ನಮ್ಮನ್ನು ಹೆಚ್ಚು ದೃಢವಾಗಿ ನಿಲ್ಲಿಸಲಿದೆ, ಗೆಲುವು ನಮ್ಮನ್ನು ಮತ್ತಷ್ಟು ಮುನ್ನಡೆಸಲಿದೆ. ಕ್ರೀಡೆಯ ಒಡನಾಟ ನಮಗೆ ಈ ಸಮತೋಲನ ಕಲಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಪ್ರತಿಯೊಬ್ಬರೂ ತಮ್ಮ ದಿನಚರಿಯಲ್ಲಿ ಕೆಲವು ಕ್ರೀಡಾ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ ಮಾತನಾಡಿ, ಕ್ರೀಡೆಯು ಕೇವಲ ಸ್ಪರ್ಧೆಯಾಗಿರದೆ, ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಶ್ರೇಷ್ಠ ಸಾಧನವಾಗಿದೆ. ಸೋಲು ಮತ್ತು ಗೆಲುವು ಜೀವನದ ಅವಿಭಾಜ್ಯ ಅಂಗಗಳಾಗಿದ್ದು, ಇವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಕ್ರೀಡೆಯ ಮೂಲಕ ಬೆಳೆಯುತ್ತದೆ. ಪ್ರತಿದಿನದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಒಂದು ಭಾಗ್ಯವಾಗಿದ್ದು, ಇದರಿಂದ ಆರೋಗ್ಯಕರ ಹಾಗೂ ಶಕ್ತಿಯುತ ಜೀವನವನ್ನು ರೂಪಿಸಬಹುದು ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯವು ವಿಶ್ವವಿದ್ಯಾಲಯದಲ್ಲಿ ವರ್ಷಪೂರ್ತಿ ವಿಭಿನ್ನ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತವೆ. ಇವು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಸುಸ್ಥಿತಿಗೆ ಮಹತ್ವದ ಪಾತ್ರವಹಿಸುತ್ತವೆ. ಈ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲು ಅವಕಾಶವನ್ನು ಪಡೆಯುತ್ತಾರೆ ಎಂದರು.
ಕಾರ್ಯಾಗಾರದಲ್ಲಿ ಬೆಂಗಳೂರಿನ ವಾಲಿಬಾಲ್ ತರಬೇತಿದಾರ ರಾಜೇಶ್ ಪತ್ತಾರ ಹಾಗೂ ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಮತ್ತು ತೀರ್ಪುಗಾರರ ಮಂಡಳಿಯ ಸಂಚಾಲಕ ಕೆ.ವೆಂಕಟೇಶ್‌ಗೌಡ, ಪ್ರೊ.ಡಿ.ಎಂ.ಜ್ಯೋತಿ, ಪ್ರೊ.ರಾಜಕುಮಾರ ಮಾಲಿಪಾಟೀಲ, ಪ್ರೊ. ಶ್ರೀನಿವಾಸ, ಡಾ.ಕಿರಣ ಜಿ.ಎನ್, ಡಾಅಶ್ವಿನಿ ಕೆ, ಎನ್, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಮತ್ತು ಶಿಕ್ಷಣ ನಿಕಾಯ ಡೀನ ಪ್ರೊ.ಸಕ್ಪಾಲ್ ಹೂವಣ್ಣ ಇದ್ದರು.
ಪ್ರೊ.ಜ್ಯೋತಿ ಉಪಾದ್ಯ ಸ್ವಾಗತಿಸಿದರು. ಜಬಿನತಾಜ ಜಿಗಳೂರ ನಿರೂಪಿಸಿದರು. ನಿರ್ದೇಶನಾಲಯದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Wednesday, February 5, 2025
ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ, ಜೀವನದ ಮೌಲ್ಯ ಭಿತ್ತಿ: ಬಂಡೆ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ಮಕ್ಕಳಲ್ಲಿ ಬಾಲ್ಯದಿಂದಲೇ ಸಂಸ್ಕೃತಿ, ಸಂಸ್ಕಾರ, ಜೀವನದ ಮೌಲ್ಯಗಳನ್ನು ಭಿತ್ತಿ, ಅವರ ಜೀವನಕ್ಕೆ ಭದ್ರ ಬುನಾದಿ ಹಾಕುವ ಜತೆಗೆ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಬೇಕು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
ಮಂಗಳವಾರ ಸಂಜೆ ನಗರದ ಬಸವೇಶ್ವರ ವಿದ್ಯಾವರ್ಧಕ ಸಂಘದ ಲೀಟಲ್ ಪ್ಲಾವರ್ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮನೆಯಲ್ಲಿ ಮಕ್ಕಳಿಗೆ ಉತ್ತಮ ವಾತಾವರಣವನ್ನು ನಿರ್ಮಿಸಿ ಕೊಡುವುದು ಯಶಸ್ಸಿನ ಬೀಜ ಬಿತ್ತಿದಂತೆ.
ಕುಟುಂಬವು ಮಕ್ಕಳಿಗೆ ಸಾಂಸ್ಕೃತಿಕ, ನೈತಿಕ, ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಮೌಲ್ಯಗಳನ್ನು ನೀಡುತ್ತದೆ.
ಮನೆಯ ವಾತಾವರಣವೇ ಮಗುವಿನ ವ್ಯಕ್ತಿತ್ವ ವಿಕಸನಕ್ಕೆ ಬುನಾದಿಯಾಗಿದೆ ಎಂದು ತಿಳಿಸಿದರು.
ಚಿನ್ಮಯ ಶಾಲೆಯ ಅಧ್ಯಕ್ಷೆ ಪ್ರತಿಭಾ ಪಾಟೀಲ ಮಾತನಾಡಿ, ಮನೆಯಲ್ಲಿ ಕಲಿಸುವ ಗುಣ,ನಡವಳಿಕೆ,
ಸ್ವಭಾವ, ಮಾತಿನ ಶೈಲಿ ಮಗುವಿನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಉತ್ತಮ ಮೌಲ್ಯಗಳಿಂದ ಉತ್ತಮ ನಾಗರಿಕರಾಗುವಂತೆ ಪ್ರೇರಣೆ ನೀಡಬೇಕು ಎಂದು ಹೇಳಿದರು.
ಪ್ರೆಸಿಡೆನ್ಸಿ ಶಿಕ್ಷಣ ಕಾಲೇಜಿನ ಪ್ರಾಚಾರ್ಯೆ ಡಾ ಸುಮಾ ಬೋಳರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಿಗೆ ಆಟದೊಂದಿಗೆ ಪಾಠ ಕಲಿಸುವ ಪ್ರವೃತ್ತಿ ರೂಢಿಸಿಕೊಂಡು,
ಪಾಲಕರು ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ನಿತ್ಯ ಬದುಕಿನ ಕೆಲ ಸಮಯ ಮೀಸಲಿಡುವುದು ಅವಶ್ಯ ಎಂದರು.
ಸಂಸ್ಥೆಯ ಸಲಹೆಗಾರ ಶರತಚಂದ್ರ ಮಂಗಾನವರ ಜ್ಯೋತಿ ಬೆಳಗಿಸಿದರು. ಸಂಸ್ಥೆಯ ನಿರ್ದೇಶಕಿ ಗುಣಸಾಗರಿ ಮಂಗಾನವರ,ಪಿಯು ಕಾಲೇಜಿನ ಪ್ರಾಚಾರ್ಯ ಎಸ್ ಆರ್ ಕುಲಕರ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಕೆ ಎಸ್ ಆಲಮೇಲ ವಾರ್ಷಿಕ ವರದಿ ವಾಚಿಸಿದರು.
ಮನೋಜ ದೇಸಾಯಿ ಮತ್ತು ನಿವೇದಿತಾ ಪಿ ನಿರೂಪಿಸಿದರು. ಲಕ್ಷ್ಮಿ ಜಂಗಮಶೆಟ್ಟಿ ಸ್ವಾಗತಿಸಿದರು. ಮಂಜುಳಾ ರಾಠೋಡ ವಂದಿಸಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

