Thursday, July 17, 2025
ಪತ್ರಕರ್ತರ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಪರಶುರಾಮ ಶಿವಶರಣ ಆಯ್ಕೆ
ವಿಜಯಪುರ: ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ ಭಾಜನರಾಗಿದ್ದಾರೆ.
ಪರಶುರಾಮ ಶಿವಶರಣ ಅವರು ರಾಜ್ಯ ಮಟ್ಟದ ಕನ್ನಡ ದಿನ ಪತ್ರಿಕೆ ಹೊಸ ದಿಗಂತದ ವಿಜಯಪುರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ತಾವು ತೊಡಗಿಸಿಕೊಂಡು, ನಿರ್ಭಿತಿಯಾಗಿ ಜನಮುಖಿ, ಸಮಾಜಮುಖಿ ವರದಿಗಳನ್ನು ಮಾಡುತ್ತ ಖ್ಯಾತಿ ಪಡೆದವರು.
ಪರಶುರಾಮ ಶಿವಶರಣ ಅವರು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವುದರ ಜೊತೆಗೆ ಸಾಹಿತಿಗಳು ಆಗಿದ್ದಾರೆ. ಈಗಾಗಲೇ ಹಲವು ಕೃತಿಗಳನ್ನು ಹೊರ ತಂದಿದ್ದು,
ಜೀವಪೀಠ, ನೀಲಿ ಮಿಂಚು ಕವನ ಸಂಕಲನ, ರಾಣಿ ಬಗೀಚ್ ಕಥಾ ಸಂಕಲನ ಹಾಗೂ ವಾರ ನೋಟ ಅಂಕಣ ಸಂಕಲನಗಳನ್ನು ಹೊರ ತಂದಿದ್ದಾರೆ. ಇವರ ಕೃತಿಗಳು ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿವೆ. ಅದರಂತೆ ಶಿವಶರಣ ಅವರ ವಿರಚಿತ ‘ಜೀವ ಪೀಠ’ ಕೃತಿಗೆ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ‘ಅರಳು ಪ್ರತಿಭೆ’ ಪ್ರಶಸ್ತಿ ದೊರೆತಿದೆ.
ವಿವಿಧ ಸಂಘ, ಸಂಸ್ಥೆಗಳು ಕೊಡಮಾಡುವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಜು. 19 ರಂದು ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ನೋಂ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡ ಪತ್ರಕರ್ತರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ - ಜಿಲ್ಲಾಧಿಕಾರಿ ಡಾ.ಆನಂದ.ಕೆ
ವಿಜಯಪುರ : ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬAಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಒಳಗೊಂಡAತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸುವಂತೆ ಅವರು ಸೂಚನೆ ನೀಡಿದರು.
ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಬAಧಿಸಿದ ಇಲಾಖೆಗಳು ನಿರಂತರ ಸಭೆ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸುವ ಮೂಲಕ ಸೂಕ್ತ ಕಾನೂನು ಅರಿವು ಮತ್ತು ತಿಳುವಳಿಕೆ ಮೂಡಿಸಬೇಕು. ಈ ವಿಷಯದಲ್ಲಿ ತುಂಬಾ ಗಂಭೀರತೆಯಿAದ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.
ಬಾಲ್ಯವಿವಾಹ ತಡೆಗಟ್ಟುವಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಆಡಳಿತಗಳ ಪಾತ್ರ ಬಹುಮುಖ್ಯವಾಗಿದ್ದು, ಸಮನ್ವಯವಾಗಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ನಡೆಯುವ ಮುನ್ನವೇ ಪತ್ತೆ ಹಚ್ಚಿ ತಪ್ಪಿತಸ್ಥರ ಸಂಬAಧಿಸಿದ ಪೋಷಕರು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರ ವಿರುದ್ದ ವಿಳಂಬ ಮಾಡದೇ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚಿಸಿದರು.
ಬಾಲ್ಯವಿವಾಹ ಅದೊಂದು ಅಪರಾಧ. ಸಾರ್ವಜನಿಕರಿಗೆ ಸೂಕ್ತ ಕಾನೂನಿನ ಅರಿವು ನೀಡುವುದರ ಜೊತೆಗೆ ಬಾಲ್ಯವಿವಾಹ ನಡೆಯುವುದು ಕಂಡುಬAದಲ್ಲಿ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಮಕ್ಕಳ ಭವ್ಯ ಭವಿಷ್ಯ ಹಾಳಾಗದಂತೆ ಸಂಬAಧಿಸಿದ ಇಲಾಖಾ ಅಧಿಕಾರಿಗಳು ಮುಂಜಾಗ್ರತೆವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಫ್ ಕೇಂದ್ರಗಳಲ್ಲಿ ಪೋಕ್ಸೋ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕೊಳಗಾದವರನ್ನು ಕೌನ್ಸೆಲಿಂಗ್ ಪ್ರಕ್ರಿಯೆಗೆ ಒಳಪಡಿಸಿ, ಅವರ ಮನೋಸ್ಥೆöÊರ್ಯ ಹೆಚ್ಚಿಸಬೇಕು. ಈ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು.ವೈದ್ಯರು, ಪೊಲೀಸ್ ಇಲಾಖೆ ಸಹಕಾರ ಒದಗಿಸಬೇಕು. ಸಂಬAಧಿಸಿದ ಸಂತ್ರಸ್ತರ ಕುರಿತ ವಸ್ತುಸ್ಥಿತಿ ಆಗಾಗ ವರದಿ ಮಾಡಬೇಕು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಸಾರ್ವಜನಿಕರಿಗೆ ಜಾಗೃತಿ ಅವಶ್ಯವಾಗಿದ್ದು, ಈ ಬಗ್ಗೆ ನಿರಂತರ ಶಿಬಿರ, ಸಭೆ ನಡೆಸಬೇಕು. ಪ್ರಕರಣ ನಡೆದ ಸಂದರ್ಭದಲ್ಲಿ ಮಾಹಿತಿ ಒದಗಿಸಿದರೆ ಪೊಲೀಸ್ ಇಲಾಖೆಯಿಂದ ಈ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು. ಸಂಬAಧಿಸಿದ ಇಲಾಖೆಗಳು ವಾಟ್ಸಾಫ್ ಗ್ರೂಪ್ ರಚಿಸಿಕೊಂಡು ಸಮರ್ಪಕ ಮಾಹಿತಿಯನ್ನು ವಿನಿಮಯ ಮಾಡಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತçಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

