Saturday, July 26, 2025

ರಮೇಶ ಕೋಟ್ಯಾಳಗೆ ಪ್ರತಿಷ್ಠಿತ ಅತ್ಯುತ್ತಮ ಪ್ರಶಸ್ತಿ

ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಹಮ್ಮಿಕೊಂಡ ಉತರ ಕರ್ನಾಟಕ ಪ್ರಾಂಥ ಗುರು ನಮನ ಕಾರ್ಯಕ್ರಮದಲ್ಲಿ ಕವಿ, ಸಾಹಿತಿ, ದರಬಾರ ಶಾಲೆ ಮುಖ್ಯೋಪಧ್ಯಾಯ ರಮೇಶ ಕೋಟ್ಯಾಳ ಅವರಿಗೆ 2025 ನೇ ಸಾಲಿನ ಭಾಷೆ, ಸಾಹಿತ್ಯಕ್ಕಾಗಿ ಪ್ರತಿಷ್ಠಿತ ಅತ್ಯುತ್ತಮ ಪ್ರಶಸಿ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭ ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಎಸ್. ಪಾಪಗೊಂಡ, ಖ್ಯಾತ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ (ಧಾರವಾಡ), ಸಿದ್ಧೇಶ್ವರ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸಯ್ಯ ಹಿರೇಮಠ, ಬಸವರಾಜ ಕೌಲಗಿ, ವಿಕಾಸ ದರ್ಬಾರ, ಡಾ.ವಿ.ಬಿ. ಗ್ರಾಮಪುರೋಹಿತ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮೌಲ್ಯಮಾಪನ ಕುಲಸಚಿವರರಾಗಿ ಪ್ರೊ.ಬಿ.ಎಲ್.ಲಕ್ಕಣ್ಣನವರ ನೇಮಕ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವರನ್ನಾಗಿ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಲ್.ಲಕ್ಕಣ್ಣನವರ ಅವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮಹಿಳಾ ವಿಶ್ವವಿದ್ಯಾನಿಲಯದ ಪ್ರಸ್ತುತ ಮೌಲ್ಯಮಾಪನ ಕುಲಸಚಿವರಾಗಿದ್ದ ಪ್ರೊ.ಎಚ್.ಎಂ.ಚAದ್ರಶೇಖರ್ ಅವರ ಸೇವೆಯನ್ನು ಅವರ ಮಾತೃ ಸಂಸ್ಥೆಯಾಗಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ತಕ್ಷಣ ಜಾರಿಗೆ ಬರುವಂತೆ ಹಿಂತಿರುಗಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಹೋದರತೆಯ ಭಾವವೇ ನಾಗರ ಪಂಚಮಿ ಹಬ್ಬ

ಹಿಂದೂ ಪಂಚಾಂಗದ ಪ್ರಕಾರ ಎಲ್ಲಾ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ. ಶ್ರಾವಣ ಶುದ್ಧ ಪಂಚಮಿಯಿಂದ ಆಚರಿಸಲ್ಪುಡುವ ಈ ಹಬ್ಬ ಮುಂದೆ ಬರಲಿರುವ ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ಊರಿನ ಜಾತ್ರೆಗೆ, ಎಲ್ಲಾ ಶುಭ ಆಚರಣೆಗಳಿಗೆ ಮೊದಲ ಮೆಟ್ಟಿಲು. 

ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗಪ್ಪನಿಗೆ ಹಲವು ವಿಧದ ಉಂಡೆಗಳು, ಕರಿ ಎಳ್ಳಿನಿಂದ ಮಾಡಿದ ಉಂಡೆ, ಚಿಗಳಿ ತಂಬಿಟ್ಟು, ಕರದಂಟು, ನಾನಾತರದ ಕಡಬುಗಳು,  ಚುರುಮುರಿ ಚುಡಾ, ಮತ್ತು ಬೆಲ್ಲ ಬೆರೆಸಿ ಮಾಡಿದ ತಂಬಿಟ್ಟಿನ ನೈವೇದ್ಯವನ್ನು ಮಾಡಲಾಗುತ್ತದೆ.

ಅಣ್ಣ ತಂಗಿಯ ಪ್ರೀತಿ ಸಾರುವಂತಹ ಈ ಹಬ್ಬದಲ್ಲಿ ಅಕ್ಕ ತಂಗಿಯರು ಅಣ್ಣ ತಮ್ಮಂದಿರ ಆಯಸ್ಸು, ಆರೋಗ್ಯ ಮತ್ತು ಸಕಲ ಸುಖಗಳನ್ನು ನೀಡುವಂತೆ ದೇವರಲ್ಲಿ ಪ್ರಾರ್ಥಿಸಿಕೊಳ್ಳವ ದಿನವಾಗಿದೆ. ಹುತ್ತಕ್ಕೆ ಹಾಲು ಎರೆದು, ಹುತ್ತದ ಮಣ್ಣನ್ನು ಹೊಕ್ಕಳು ಅಥವಾ ಬೆನ್ನಿಗೆ ಹಚ್ಚಿ ಒಳ್ಳೆದಾಗಲಿ ಎಂದು ಹಾರೈಸುತ್ತಾರೆ. ನಾಗದೇವತೆಗಳಿಗೆ ಅನುಗ್ರಹ ಮತ್ತು ನಿಗ್ರಹ ಮಾಡುವಂತಹ ಸಾಮರ್ಥ್ಯ ಇರುವುದರಿಂದ ಸರ್ಪು ಪೂಜೆಗೆ ವಿಶೇಷವಾದ ಮಾನ್ಯತೆ ನೀಡಲಾಗಿದೆ.

ಇನ್ನು ಉತ್ತರ ಕರ್ನಾಟಕದಲ್ಲಿ ಈ ಹಬ್ಬ ಮತ್ತಷ್ಟು ವಿಶಿಷ್ಟವಾಗಿರುತ್ತದೆ. ಈ ಹಬ್ಬದಲ್ಲಿ ಮನೆಗಳಲ್ಲಿ ಮತ್ತು ಊರಿನಲ್ಲಿ ಜೋಕಾಲಿ ಕಟ್ಟಿ ಹಾಡುವಂತಹ ವಿಶಿಷ್ಟ ಪದ್ಧತಿ ಇದೆ. ಹಿರಿಯರು ಕಿರಿಯರು ಭೇದವಿಲ್ಲದೇ ಜೋಕಾಲಿ ಆಡುತ್ತಾರೆ. ನಾಗರಪಂಚಮಿ ಹಬ್ಬ ಉತ್ತರ ಕರ್ನಾಟಕ ಭಾಗದಲ್ಲಿ ಜೋಕಾಲಿ ಹಬ್ಬವೆಂದು ಪ್ರಸಿದ್ಧಿ ಪಡೆದಿದೆ. ನಾಗ ಪೂಜೆ ಮಾಡಿ ಸುಬ್ರಮಣ್ಯನನ್ನು ಆರಾಧನೆ ಮಾಡಿದರೆ ನಮ್ಮ ಇಡೀ ಕುಟುಂಬವನ್ನು ನಾಗಪ್ಪ ಕಾಯ್ತಾನೆ ಎಂಬ ನಂಬಿಕೆ ಇದೆ.

ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ.

ಸ್ಕಂದ ಪುರಾಣದಲ್ಲಿ ನಾಗರ ಪಂಚಮಿಯ ಬಗ್ಗೆ ಕೆಲ ಮಾಹಿತಿಗಳು ಸಿಗುತ್ತದೆ. ಶ್ರೀಕೃಷ್ಣನ ಮಗನಾದ ಸಾಂಬನು ಶಿವಸುತ ಸುಬ್ರಹ್ಮಣ್ಯನಲ್ಲಿ ನಾಗರ ಪಂಚಮಿಯನ್ನು ಯಾಕೆ ಆಚರಿಸಲಾಗುತ್ತದೆ ಎಂದು ಪ್ರಶ್ನೆ ಕೇಳಿದಾಗ ಆತನ ಒಂದು ಕಥೆಯನ್ನು ಹೇಳುತ್ತಾನೆ. 

ಹಿಂದೆ ದೇವಶರ್ಮ ಎಂಬ ಬ್ರಾಹ್ಮಣನೊಬ್ಬನಿದ್ದನು. ಆತನಿಗೆ 8 ಗಂಡು ಮಕ್ಕಳು ಹಾಗೂ ಒಬ್ಬಾಕೆ ಹೆಣ್ಣು ಮಗಳಿದ್ದಳು. ಒಂದು ದಿನ ಗರುಡನಿಂದ ಹೆದರಿಸಲ್ಪಟ್ಟ ನಾಗರವೊಂದು ಈ ಕನ್ನಿಕೆಯ ಬಳಿ ಬಂದು ಆಶ್ರಯವನ್ನು ಕೇಳುತ್ತದೆ. ಭಕ್ತಿಯಿಂದ ಕನ್ನಿಕೆ ಆ ನಾಗನಿಗೆ ಹಾಲು, ಫಲಗಳನ್ನು ಇಟ್ಟು ಭಕ್ತಿಯಿಂದ ಸಾಕುತ್ತಾಳೆ. ಇದಕ್ಕೆ ಪ್ರತಿಯಾಗಿ ಆ ನಾಗವು ದಿನಂಪ್ರತಿ ಆಕೆಗೆ ಒಂದು ತೊಲೆ ಚಿನ್ನವನ್ನು ನೀಡುತ್ತಿರುತ್ತದೆ. ಹೀಗಿರಲು ಒಂದು ದಿನ ಎಂಟು ಗಂಡು ಮಕ್ಕಳಲ್ಲಿ ಒಬ್ಬನು ತುಂಬಾ ಬಂಗಾರ ಬೇಕೆಂದು ನಾಗನನ್ನು ಪೀಡಿಸಿ, ಕಾಲಿನಿಂದ ಒದೆಯುತ್ತಾನೆ. ಕೋಪಗೊಂಡ ನಾಗರ ಹಾವು ಅವನ್ನು ಸೇರಿದಂತೆ ಇತರ ಏಳು ಜನರನ್ನು ಕೊಂದು ಹೊರಟು ಹೋಗುತ್ತದೆ. ತನ್ನ ಅಣ್ಣಂದಿರ ಸಾವಿಗೆ ತಾನೇ ಕಾರಣನಾದೇ ಎಂದು ಆ ಕನ್ನಿಕೆ, ದೇವರ ಇದಿರಿನಲ್ಲಿ ಶಿರಚ್ಛೇದನಕ್ಕೆ ಮುಂದಾದಾಗ, ನಾರಾಯಣನು ವಾಸುಕಿಗೆ ಆ ಸತ್ತ ಹುಡುಗರನ್ನು ಬದುಕಿಸಲು ಹೇಳುತ್ತಾನೆ. ಈ ರೀತಿ ಪುನಃ ಅಣ್ಣಂದಿರ ಜೀವವನ್ನು ಮರಳಿ ಪಡೆದುಕೊಳ್ಳುವಲ್ಲಿ ಆ ಕನ್ನಿಕೆ ಯಶಸ್ವಿಯಾದ ದಿನವೇ ನಾಗರ ಪಂಚಮಿ ಹಬ್ಬ   ನಮ್ಮ ಅಣ್ಣ ತಮ್ಮ ಹಾಗೂ ಕುಟುಂಬದವರಿಗೆ ನಾಗಪ್ಪನ ಆಶೀರ್ವಾದದಿಂದ ಒಳ್ಳೆದಾಗಲಿ ಎಂದು ಹೇಳುತ್ತಾ ಈ ಸಂಪ್ರಧಾಯನ್ನು ಹೀಗೆ ಮುನ್ನಡೆಸಿಕೊಂಡು ಹೋಗೋಣ ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು. 

ಶಿಲ್ಪಾ ಚವ್ಹಾಣ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, July 25, 2025

ದೋಷರಹಿತ-ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಕ್ರಮ -ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ

ವಿಜಯಪುರ  : ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರ ಮಾರ್ಗದರ್ಶನದಲ್ಲಿ ಈಗಾಗಲೇ ಇರುವ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಇರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ದೋಷರಹಿತ, ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷರಾದ ಮಾಜಿ ಶಾಸಕ ಸೈಯ್ಯದ ಅಜೀಮಪೀರ ಎಸ್.ಖಾದಿ ಅವರು ಹೇಳಿದರು.

 ನಗರದ ಬಿಡಿಎ ಕಚೇರಿಯ ಹತ್ತಿರವಿರುವ ಹೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಹೆಸ್ಕಾಂ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.

 ಕಳೆದ 2023ನೇ ಸಾಲಿನವರೆಗೆ 10 ಸಾವಿರ ರೂ. ಹಣ ತುಂಬಿ ಆರ್.ಆರ್.ನಂಬರ್ ಪಡೆದ 15200 ರೈತರಿಗೆ ಪಂಪಸೆಟ್‌ಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದ್ದು, 50 ರೂ. ಹಣ ತುಂಬಿ ಆರ್.ಆರ್.ನಂಬರ್ ಪಡೆದ 23 ಸಾವಿರ ರೈತರಿಗೆ ಐಪಿ ಸೆಟ್ ಕಲ್ಪಿಸುವ ಟೆಂಡರ್ ಪ್ರಗತಿಯಲ್ಲಿದೆ. ಗೃಹ ಜ್ಯೋತಿ ಸೇರಿದಂತೆ ರೈತರು, ಸಾರ್ವಜನಿಕರಿಗೆ ಸಮರ್ಪಕವಾಗಿ ವಿದ್ಯುತ್ ಒದಗಿಸಲಾಗುವುದು ಎಂದು ತಿಳಿಸಿದ ಅವರು, ರೈತರ ಬೇಡಿಕೆಯಂತೆ ಗ್ರಾಮೀಣ ಭಾಗದಲ್ಲಿ ಹಗಲು ವೇಳೆಯಲ್ಲಿ 7 ಗಂಟೆ ನಿರಂತರ ತ್ರಿಫೇಸ್ ವಿದ್ಯುತ್ ಪೂರೈಕೆ ಕಾರ್ಯಕ್ಕೆ ಈಗಾಗಲೇ ರಾಜ್ಯದ ದೊಡ್ಡಬಳ್ಳಾಪುರ ಹಾಗೂ ಗದಗ ಜಿಲ್ಲೆಯ ಮೂಸಿಗೆರಿಯಲ್ಲಿ ಜಿಲ್ಲೆಯಲ್ಲಿ ಕುಸುಮಸಿಯಡಿಯಲ್ಲಿ ಚಾಲನೆ ನೀಡಲಿದ್ದು, ಶೀಘ್ರದಲ್ಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಸಹ ಸೋಲಾರದಿಂದ ಉತ್ಪಾದಿಸಲಾದ ವಿದ್ಯುತ್ ಪಡೆದುಕೊಂಡು ಹಗಲು ವೇಳೆಯಲ್ಲಿ 7 ಗಂಟೆ ವಿದ್ಯುತ್ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. 

ವಿಜಯಪುರಗೆ ಭೂಗರ್ಭ ಕೇಬಲ್ ಅಳವಡಿಕೆ ಮಂಜೂರಾತಿ : ವಿಜಯಪುರ ನಗರದಲ್ಲಿ ಭೂಗರ್ಭ (ಅಂಡರ್‌ಗ್ರೌAಡ್ ಕೇಬಲ್ ಅಳವಡಿಕೆ) ಕೇಬಲ್ ಅಳವಡಿಕೆಗೆ ಇಂಧನ ಇಲಾಖೆಯಿಂದ ಮಂಜೂರಾತಿ ದೊರೆತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು. ಕಳೆದ 20 ರಿಂದ 30 ವರ್ಷ ಹಳೆಯದಾದ ಅಪಾಯಕಾರಿಯಾದ ವಿದ್ಯುತ್ ಕಂಬಗ್‌ಗಳಿAದ ಯಾವುದೇ ಅಪಘಾತಗಳು ಸಂಭವಿಸದAತೆ ನೋಡಿಕೊಳ್ಳಲು ಈಗಾಗಲೇ ಇಂತಹ ಪೋಲ್ಸ್ಗಳನ್ನು ಗುರುತಿಸಿ ತೆರವುಗೊಳಿಸಿ ಬದಲಿ ಕಂಬಗಳÀ ಅವಳಡಿಕೆ ಹಾಗೂ ಅಪಾಯಕಾರಿಯಾದ ವಿದ್ಯುತ್ ಟ್ರಾನ್ಸ್ಫಾರ್ಮರ್‌ಗಳಿದ್ದಲ್ಲಿ ಇದನ್ನು ಶಿಫ್ಟ್ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಹೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದಲ್ಲಿ ತಕ್ಷಣವೇ ಹೆಸ್ಕಾಂ ಅಧಿಕಾರಿಗಳು ಸ್ಪಂದಿಸಿ ಅಗತ್ಯ ಕ್ರಮ ವಹಿಸಲಿದ್ದಾರೆ ಎಂದು ಅವರು ಹೇಳಿದರು. 

 ಸ್ಮಾರ್ಟ್ ಮೀಟರ್ ಅಳವಡಿಕೆಗೆ ಚೆಸ್ಕಾಂ ಹಾಗೂ ಬೆೆಸ್ಕಾಂನಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಭಾಗದಲ್ಲಿ ಸ್ಮಾರ್ಟ್ ಮಿಟರ್ ಅಳವಡಿಸುವ ಪ್ರಸ್ತಾವನೆ ಇದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಲಾಗುವುದು. ಹೆಸ್ಕಾಂ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ 350 ಲೈನ್‌ಮನ್ ನೇಮಕಾತಿ ಪ್ರಕ್ರಿಯೆಯಲ್ಲಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಮೆರಿಟ್ ಹಾಗೂ ಕೌನ್ಸಿಲಿಂಗ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿ, ನೇಮಕಾತಿಯಾದವರಿಗೆ ಅಗತ್ಯವಿರುವ ಕಡೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು. 

 ಪತ್ರಿಕಾಗೋಷ್ಠಿಯಲ್ಲಿ ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ಧಪ್ಪ ಬಿಂಜಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಕ್ಕಳ ಆರೋಗ್ಯ ಕಡೆ ಹೆಚ್ಚಿನ ನಿಗಾ ವಹಿಸಿ - ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ

 ವಿಜಯಪುರ  : ಯುವಕರಲ್ಲಿ ಹೃದಯ ಸಂಬAಧಿ ಕಾಯಿಲೆಗಳು ಹೆಚ್ಚುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಮಕ್ಕಳ ಆರೋಗ್ಯ ಕಡೆ ಹೆಚ್ಚು ನಿಗಾ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಹೇಳಿದರು.

 ಇಂದು ನಗರದ ಅಲ್ಪ ಸಂಖ್ಯಾತರ ವಸತಿ ಶಾಲೇಜು, ಎಸ್.ಎಸ್. ಪಿ.ಯು ಕಾಲೇಜು ಹಾಗೂ ಸೇಂಟ್ ಜೊಸೆಪ್ ಶಾಲೆಗಳಿಗೆ ಅನಿರೀಕ್ಷವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಠಕ್ಕೆ ಹತ್ತಿರ ವಿರುವ ಅಲ್ಪ ಸಂಖ್ಯಾತರ ವಸತಿ ಕಾಲೇಜಿಗೆ ಭೇಟಿ ನೀಡಿ ಆವರಣದಲ್ಲಿರುವ ಹೆಣ್ಣು ಮಕ್ಕಳ ವಾಸಿಸುವ ಕೊಠಡಿಯಲ್ಲಿ ಅವಶ್ಯಕ್ಕಿಂತ ಹೆಚ್ಚು ಮಕ್ಕಳ ವಾಸಿಸುತ್ತಿರುವುದನ್ನು ಕಂಡು ಹೆಚ್ಚುವರಿ ಮಕ್ಕಳಿಗೆ ಪರ್ಯಾಯ ವ್ಯವಸ್ಥ ಕಲ್ಪಿಸಬೇಕು, ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ಉತ್ತಮ ಆಹಾರ ಹಾಗೂ ಸುವ್ಯವಸ್ಥಿತ ವಸತಿ ಕಲ್ಪಿಸುವಂತೆ ಹಾಗೂ ಸ್ವಚ್ಚತೆಗೆ ಹೆಚ್ಚು ಗಮನ ಹರಿಸಬೇಕು ಎಂದು ಅವರು ಹೇಳಿದರು. 

 ಯುವಕರಲ್ಲಿ ಹೆಚ್ಚು ಹೃದಯಕ್ಕೆ ಸಂಬAಧಿತ ಕಾಯಿಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಶಿಕ್ಷಣದೊಂದಿಗೆ ಯೋಗ, ಪಿಜಿಕಲ್ ಎಜುಕೇಶನ್ ಮೇಲಿಂದ ಮೇಲೆ ನೀಡಬೇಕು, ಪ್ರತಿ ವಾರ ಮಕ್ಕಳ ಆರೋಗ್ಯ ತಪಾಸನೆ ಕೈಗೊಳ್ಳಬೇಕು, ಮಕ್ಕಳಿಗೆ ಕನ್ನಡ ಬಾಷೆಯೊಂದಿಗೆ ಇಂಗ್ಲೀಷ ಬಾಷೆಯನ್ನು ಕಲಿಸಿದಲ್ಲಿ ಮುಂದಿನ ದಿನಗಳಲ್ಲಿ ಸ್ಪರ್ದಾತ್ಮಕವಾಗಿ ಪರೀಕ್ಷೆಗಳನ್ನು ಬರೆಯಲು ಹೆಚ್ಚು ಅನುಕೂಲವಾಗಲಿದೆ. ವಸತಿ ನಿಲಯ, ಶಾಲಾ ಕಾಲೇಜುಗಳಲ್ಲಿ ಚೈಲ್ಡ್ ಪ್ರೊಟಕ್ಷನ್ ಪಾಲಸಿ ಕಾಯಿದೆ 2016 ಕುರಿತು ಜಾಗೃತಿ ಮೂಡಿಸಬೇಕು. ಮಕ್ಕಳ ಸಹಾಯವಾಣಿ, ಸಲಹಾ ಪೆಟ್ಟಿಗೆ ಕಡ್ಡಾಯ ಅಳವಡಿಸಿರಬೇಕು ಮಕ್ಕಳ ಸುರಕ್ಷತೆ ಕುರಿತು ಸಮಿತಿಗಳನ್ನು ರಚಿಸಿರಬೇಕು, ಮೇಲಿಂದ ಮೇಲೆ ಪಾಲಕರ ಸಭೆಗಳನ್ನು ಕರೆದು ಪಾಲಕರ ಹಾಗೂ ಮಕ್ಕಳ ಅಭಿಪ್ರಾಯ ತಿಳಿಯಬೇಕು. 500 ಶಾಲಾ ಮಕ್ಕಳಿರುವಲ್ಲಿ ಓರ್ವ ಕೌನ್ಸಿಲರಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಅದರಂತೆ ನಗರದ ಎಸ್.ಎಸ್. ಪಿ.ಯು ಕಾಲೇಜು ಹಾಗೂ ಸೇಂಟ್ ಜೊಸೆಪ್ ಶಾಲೆಗಳಿಗೆ ಪರಿಶೀಲನೆ ನಡೆಸಿದ ಅವರು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಯಾವುದೇ ತರಹದ ತೊಂದರೆಗಳಿದ್ದಲ್ಲಿ ಪತ್ರ ಮುಖಾಂತರ ತಿಳಿಸಿದಲ್ಲಿ ಆಯೋಗವು ಈ ಕುರಿತು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. 

 ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ ಚವ್ಹಾಣ, ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳಾದ ಆರ್.ವಿ. ಹೊಸುರ, ಎಸ್.ಎಸ್ ಕಾಲೇಜಿನ ಪ್ರಾಚಾರ್ಯರಾದ ಡಾ. ಡಿ.ಬಿ ಅಕಮಂಚಿ, ಸೇಂಟ್ ಜೊಸೆಪ್ ಕಾಲೇಜಿನ ಪ್ರಾಚಾರ್ಯರಾದ ಆನ್ವಿಸಾ ಬೋಸ್ಕೋ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, July 24, 2025

ಜು.28 ಕ್ಕೆ ಹಿರಿಯ ಹೋರಾಟಗಾರ ಕಾಂ. ಭೀಮಶಿ ಕಲಾದಗಿ ಮೂರ್ತಿ ಪ್ರತಿಷ್ಠಾಪನೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ರೈತ ಮುಖಂಡ, ಹೋರಾಟಗಾರ ಕಾಂ. ದಿ.ಭೀಮಶಿ ಕಲಾದಗಿ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ನೆನಪು ಕಾರ್ಯಕ್ರಮ ಜುಲೈ 28 ರಂದು ಬೆಳಿಗ್ಗೆ 11ಕ್ಕೆ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ನಡೆಯಲಿದೆ. ಸಚಿವ ಶಿವಾನಂದ ಪಾಟೀಲ ಅವರು ಕಲಾದಗಿ ಅವರ ಪುತ್ಥಳಿಯನ್ನು ಅನಾವರಣ ಮಾಡಲಿದ್ದಾರೆ. ಕಾರ್ಮಿಕ ಮುಖಂಡ ವಿ.ಜಿ.ಕೆ.ನಾಯರ್,  ಹಿರಿಯ ಹೋರಾಟಗಾರರಾದ ಅಣ್ಣಾರಾಯ ಈಳಗೇರ, ವಕೀಲ ಶ್ರೀಧರ ಕುಲಕರ್ಣಿ, ರೈತ ಮುಖಂಡ ಪಂಚಪ್ಪ ಕಲಬುರ್ಗಿ, ಮಲ್ಲಿಕಾರ್ಜುನ ಯಂಡಿಗೇರಿ, ರಿಯಾಜ್ ಫಾರೂಕಿ, ಡಿ.ಜಿ.ಬಿರಾದಾರ, ಸೋಮನಾಥ ಕಳ್ಳಿಮನಿ,  ಮುಖಂಡ ಬಿ.ಡಿ.ಪಾಟೀಲ ಸೇರಿದಂತೆ ಅಪಾರ ಅಭಿಮಾನಿಗಳು ಸೇರಿದಂತೆ ಮತ್ತಿತರರು ಅಪಾಲ್ಗೊಳ್ಳುವರು ಎಂದು ಭೀಮಶಿ ಅವರ ಸುಪುತ್ರ ಸುರೇಶ ಕಲಾದಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.