Sunday, August 31, 2025

ಡಾ. ಸುಧಾರಾಣಿ ಮಣೂರವರ ಕೃತಿ ಬಿಡುಗಡೆಗೊಳಿಸಿದ ಗುರುಮಹಾಂತ ಶ್ರೀಗಳು ಮಕ್ಕಳ ಸಾಹಿತ್ಯ ಅವಲೋಕನ ಕೃತಿ ; ಮಕ್ಕಳ ಸಾಹಿತ್ಯದಲ್ಲಿ ಕೃಷಿಮಾಡುವವರಿಗೆ ದಿಕ್ಸೂಚಿ

 ವಿಜಯಪುರ: ಡಾ. ಸುಧಾರಾಣಿ ಮಣೂರ ಅವರು ‘ಮಕ್ಕಳ ಸಾಹಿತ್ಯ ಅವಲೋಕನ' ಕೃತಿ ಯುವ ಬರಹಗಾರರಿಗೆ ಆಕರ ಗ್ರಂಥವಾಗಿದೆ. ಮಕ್ಕಳ ಸಾಹಿತ್ಯದಲ್ಲಿ ಕೃಷಿಮಾಡುವವರಿಗೆ ದಿಕ್ಸೂಚಿಯಾಗಿದೆ ಎಂದು ಇಲಕಲ್ ಚಿತ್ತರಗಿ ಮಹಾಂತಮಠದ ಪೂಜ್ಯರಾದ ಮನಿಪ್ರ ಶ್ರೀ ಗುರುಮಹಾಂತ ಮಹಾಸ್ವಾಮಿಗಳು ಹೇಳಿದರು.

 ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ಸಾಹಿತಿ ಪ.ಗು.ಸಿದ್ದಾಪುರ ಅವರ ಮನೆಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಡಾ. ಸುಧಾರಾಣಿ ಮಣೂರ ಅವರು ರಚಿಸಿದ ಮಕ್ಕಳ ಸಾಹಿತ್ಯ ಅವಲೋಕನ ಗ್ರಂಥವನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು. 

 ಡಾ. ಸುಧಾ ರಾಣಿ ಮಣೂರ ಅವರು ‘ಮಕ್ಕಳ ಸಾಹಿತ್ಯ ಅವಲೋಕನ' ಕೃತಿಯಲ್ಲಿ ಮಕ್ಕಳ ಸಾಹಿತ್ಯದಲ್ಲಿ ಕೃಷಿ ಮಾಡಿದ ಹಿರಿಯ ಮಕ್ಕಳ ಸಾಹಿತಿಗಳ ಕೃತಿಗಳನ್ನು ವಿಮರ್ಶೆ ಮಾಡಿದ್ದಾರೆ. ಮಕ್ಕಳ ಸಾಹಿತ್ಯದ ಕುರಿತು ವಿಶೇಷ ಲೇಖನಗಳನ್ನು ಬರೆದಿದ್ದಾರೆ ಎಂದರು. 

 ಈ ಸಂದರ್ಭ ಬಸವರಾಜ ಸಿದ್ದಾಪುರ, ಅರವಿಂದಕುಮಾರ ಸಿದ್ದಾಪುರ, ಶಿವಪ್ಪ ಮಣೂರ, ಡಾ.ಸುಧಾರಾಣಿ ಮಣೂರ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, August 30, 2025

ಡೋಣಿ ನದಿ ಪಾತ್ರದಲ್ಲಿನ ಬೆಳೆ ನಷ್ಟ ಕುರಿತು ಜಂಟಿ ಸಮೀಕ್ಷೆ ಶೀಘ್ರದಲ್ಲೇ ಪೂರ್ಣ ಸಮೀಕ್ಷೆ ವರದಿಯಾಧಾರಿಸಿ ಬೆಳೆ ಪರಿಹಾರಕ್ಕೆ ಕ್ರಮ : ಜಿಲ್ಲಾಧಿಕಾರಿ ಡಾ.ಆನಂದ ಕೆ.


 ವಿಜಯಪುರ: ಮುಂಗಾರು ಮಳೆ ಹಿನ್ನಲೆಯಲ್ಲಿ ಡೋಣಿ ನದಿ ತೀರದ ಪ್ರದೇಶದಲ್ಲಿನ ಕೃಷಿ ಭೂಮಿ ಪ್ರವಾಹಕ್ಕೊಳಗಾಗಿ ಅಂದಾಜು 5500 ಹೆಕ್ಟೇರ್ ಜಮೀನು ಮುಳುಗಡೆಯಾಗಿ ಬೆಳೆಗಳು ಹಾನಿಯಾಗಿದ್ದು, ಈ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಶೀಘ್ರದಲ್ಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಲಿದ್ದು, ವರದಿಯನುಸಾರ ಬೆಳೆ ನಷ್ಟವಾಗಿರುವ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ತಿಳಿಸಿದರು. 

 ಡೋಣಿ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡ, ದದಾಮಟ್ಟಿ, ಉಕುಮನಾಳ ಹಾಗೂ ಎಂಬತ್ನಾಳ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಮಾತನಾಡಿದರು. 

 ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಈಗಾಗಲೇ ಸ್ಥಳೀಯ ರೈತರು ಕೆಲವು ಬೇಡಿಕೆಗಳನ್ನು ಸಲ್ಲಿಸಿದ್ದು, ಇವರ ಬೇಡಿಕೆಯನ್ವಯ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾಗುವ ಅನುದಾನ, ಸೂಕ್ತ ಯೋಜನೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು. 

 ಡೋಣಿ ನದಿಯ ಪ್ರವಾಹ ನಿಯಂತ್ರಣಕ್ಕಾಗಿ ಅಂದಾಜು 7.5 ಕೋಟಿ ರೂ.ಗಳ ವಿಪತ್ತು ನಿರ್ವಹನಾ ಉಪಶಮನ ನಿಧಿಯಡಿ ಈಗಾಗಲೇ ಪಂಚಾಯತ್ ರಾಜ್ ಇಂಜಿನೀಯರಿAಗ್ ವಿಭಾಗದಿಂದ ಸೇತುವೆ ಮುಂಭಾಗ ಹಾಗೂ ಹಿಂಭಾಗದಲ್ಲಿನ ಒಂದು ಕಿ.ಮೀ. ಅಂತರದಲ್ಲಿ ಹೂಳೂ ತೆಗೆಯುವುದು, ಗಿಡಗಂಟಿಗಳನ್ನು ತೆರವುಗೊಳಿಸುವುದು ಹಾಗೂ ಪಕ್ಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ಅರಣ್ಯೀಕರಣ ಕಾಮಗಾರಿ ಸೇರಿದಂತೆ ಪ್ರವಾಹ ನಿಯಂತ್ರಣಕ್ಕಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ನವೆಂಬರ್ ಅಂತ್ಯದಲ್ಲಿ ಹೂಳು ತೆಗೆಯುವುದು, sಸೇತುವೆ ಪಾತ್ರದಲ್ಲಿ ಅರಣ್ಯೀಕರಣ ಕಾಮಗಾರಿ ಸಹ ಆರಂಭವಾಗಲಿದ್ದು, ಡೋಣಿನದಿ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಆದ್ಯತೆಯಾಗಿ ತೆಗೆದುಕೊಂಡು ಡೋಣಿ ನದಿಯಿಂದಾಗುವ ಸಮಸ್ಯೆಗಳನ್ನು ಅವಲೋಕಿಸಿ ಅದಕ್ಕೆ ಸಂಬAಧಿಸಿದ ಕಾಮಗಾರಿಗಳನ್ನು ಹಂತ ಹಂತವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. 

 ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ,ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಭಾವಿದೊಡ್ಡಿ,ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ ತಹಶಿಲ್ದಾರರಾದ ಶ್ರೀಮತಿ ಶಾಂತಲಾ ಚಂದನ, ರೈತರಾದ ಭೀಮಸೇನ, ಮಲ್ಲಿಕಾರ್ಜುನ ಭಟಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕ್ರೀಡೆ ಕೇವಲ ಆಟವಲ್ಲ, ಜೀವನದ ಶಿಸ್ತು, ಮೌಲ್ಯಗಳ ಪಾಠ – ಡಾ.ರವಿ ಗೋಲಾ

ವಿಜಯಪುರ: ಹಾಕಿಯ ಜಾದುಗಾರ ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ ಹಾಗೂ ಶಿಸ್ತುಪರ ವ್ಯಕ್ತಿತ್ವದ ಮಾದರಿ ಎಂದು ಸಿಂದಗಿ ಪೊರವಾಲ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರವಿ ಗೋಲಾ ಅವರು ಹೇಳಿದರು.

“ನಗರದ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣಾ ಕಾರ್ಯಕ್ರಮದಲ್ಲಿ, ಭಾರತದ ಹಾಕಿ ದಂತಕಥೆ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.”

ಅವರ ಅದ್ಭುತ ಆಟದ ಬಗ್ಗೆ ಮಾತನಾಡಿ, ಹಿಟ್ಲರ್ ಕೂಡ ಧ್ಯಾನಚಂದರನ್ನು ಮೆಚ್ಚಿಕೊಂಡಿದ್ದ ಘಟನೆ ಪ್ರಸ್ತಾಪ ಮಾಡಿದರು. ಒಲಿಂಪಿಕ್ ಕ್ರೀಡಾಕೂಟದಲ್ಲಿ ನೀಡಿದ ಶ್ರೇಷ್ಠ ಪ್ರದರ್ಶನದಿಂದ ಧ್ಯಾನಚಂದ ವಿಶ್ವದ ಗಮನ ಸೆಳೆದಿದ್ದರು. ಹಿಟ್ಲರ್ ಅವರಿಗೂ ಆಶ್ಚರ್ಯ ಹುಟ್ಟಿದಂತಹ ಕ್ರೀಡಾ ಪ್ರತಿಭೆ ಅವರದ್ದಾಗಿತ್ತು. ಧ್ಯಾನಚಂದರ ಸಾಧನೆಗಳು ಇಂದಿಗೂ ಪ್ರತಿಯೊಬ್ಬ ಕ್ರೀಡಾಭಿಮಾನಿಗೆ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು. 

ವಿವಿಯ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ವಿದ್ಯಾರ್ಥಿಗಳೊಂದಿಗೆ ರಸಪ್ರಶ್ನೆ ನಡೆಸಿ ನಗದು ಬಹುಮಾನ ವಿತರಿಸಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಭೋದಿಸಿ, ಮಕ್ಕಳಿಗೆ ಕ್ರೀಡೆಯ ಮಹತ್ವವನ್ನು ಮನದಟ್ಟು ಮಾಡಿಕೊಟ್ಟರು. ಕ್ರೀಡೆಯ ಮೂಲಕ ಶಿಸ್ತು, ಆರೋಗ್ಯ ಹಾಗೂ ಸಹಕಾರ ಮನೋಭಾವವನ್ನು ಬೆಳೆಸಿಕೊಳ್ಳಬಹುದೆಂದು ಅವರು ವಿದ್ಯಾರ್ಥಿಗಳಿಗೆ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ವಿಜಯಾ ಕೋರಿಶೆಟ್ಟಿ ಮಾತನಾಡಿ, ಕ್ರೀಡೆಯ ಮೂಲಕ ಅನೇಕ ಸಾಮಾಜಿಕ ಹಾಗೂ ನೈತಿಕ ಗುಣಗಳನ್ನು ಬೆಳೆಸಿಕೊಳ್ಳಬಹುದು. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ವೃದ್ಧಿಯಾಗುವುದರೊಂದಿಗೆ, ಸೋಲು–ಗೆಲುವುಗಳನ್ನು ಸಮಾನ ಮನೋಭಾವದಿಂದ ಸ್ವೀಕರಿಸುವ ಗುಣ ಬೆಳೆಯುತ್ತದೆ ಎಂದು ವಿದ್ಯಾರ್ಥಿನಿಯರಿಗೆ ತಿಳಿಸಿದರು.

ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ ಮಾತನಾಡಿ, ವಿದ್ಯಾರ್ಥಿನಿಯರಿಗೆ ದೈಹಿಕ ಚಟುವಟಿಕೆಗಳ ಮಹತ್ವವನ್ನು ವಿವರಿಸಿದರು. ನಿತ್ಯದ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಿಂದ ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಶಕ್ತಿ, ಆತ್ಮವಿಶ್ವಾಸ ಮತ್ತು ಶಿಸ್ತು ಕೂಡ ಬೆಳೆಸಿಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ಶ್ರೀನಿವಾಸ, ಡಾ.ಕಿರಣ ಜಿ.ಎನ್, ಪ್ರೊ.ಜ್ಯೋತಿ ಉಪಾದ್ಯೆ, ಡಾ.ರಮೇಶ ಸೋನಕಾಂಬ್ಳೆ, ಡಾ.ವಿಶ್ವನಾಥ ನಡಕಟ್ಟಿ, ಮತ್ತು ಸ್ನಾತಕ, ಸ್ನಾತಕೋತ್ತರ ಹಾಗೂ ಬೊಧಕ ಮತ್ತು ಬೊಧಕೇತರ ಸಿಬ್ಬಂದಿಗಳು ಮತ್ತಿತರಿದ್ದರು. ಕ್ರೀಡಾ ನಿರ್ದೇಶಕ ಪ್ರೊ. ಹನುಮಂತಯ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೊ.ಜ್ಯೋತಿ ಉಪಾದ್ಯೆಯವರು ನಿರೂಪಿಸಿದರು, ಡಾ.ಕಿರಣ ಜಿ.ಎನ್ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, August 29, 2025

ರೈತರು ಕೃಷಿಯೊಂದಿಗೆ ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಿ - ಡಾ.ಆನಂದ.ಕೆ

ವಿಜಯಪುರ : ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಹೇಳಿದರು.

 ಶುಕ್ರವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಹಾಗೂ ಕೆಪೆಕ್ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆಯ ಯೋಜನೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಜಿಲ್ಲೆಯಲ್ಲಿ ಸ್ವಸಹಾಯ ಗುಂಪು ಚಟುವಟಿಕೆಗಳ ಕಾರ್ಯವ್ಯಾಪ್ತಿ ವಿಸ್ತರಿಸುವ ದೃಷ್ಟಿಯಿಂದ ಸಣ್ಣ ಉದ್ದಿಮೆ ಆಹಾರ ಸಂಸ್ಕರಣಾ ಘಟಕಗ¼ನ್ನು ಸ್ಥಾಪಿಸುವ ಮೂಲಕ ಸಿಗುವ ಸಾಲ-ಸೌಲಭ್ಯ ಪಡೆದುಕೊಂಡು ಪ್ರಗತಿ ಸಾಧಿಸುವಂತೆ ತಿಳಿಸಿದ ಅವರು, ಈ ಬಗ್ಗೆ ಸಂಬAಧಿಸಿದ ಇಲಾಖೆಗಳು ಪೂರಕ ಮಾಹಿತಿ ಒದಗಿಸುವಂತೆ ಬ್ಯಾಂಕಗಳು ಅರ್ಹರಿಗೆ ಸಾಲ ಸೌಲಭ್ಯ ಒದಗಿಸಿ ಈ ಯೋಜನೆಯ ಲಾಭ ಅರ್ಹರಿಗೆ ತಲುಪಿಸುವಂತೆ ಅವರು ಹೇಳಿದರು. 

ಜಿಲ್ಲೆಯಲ್ಲಿ ದ್ರಾಕ್ಷಿ, ದಾಳಿಂಬೆ, ಲಿಂಬೆ, ಬಿಳಿಜೋಳ ಹಾಗೂ ವಾಣಿಜ್ಯ ಬೆಳೆಗಳು ಸೆರಿದಂತೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ರೈತರು ತಮ್ಮ ವ್ಯವಸಾಯದೊಂದಿಗೆ ಕಿರು ಆಹಾರ ಧಾನ್ಯ ಘಟಕಗಳ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಉದ್ದಿಮೆದಾರರಾಗಿ ತಾವುಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಿದ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ಕುರಿತು ಚಿಂತನೆ ಅಗತ್ಯ ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಒಂದು ಉತ್ತಮ ಯೋಜನೆಯಾಗಿದೆ. ಫಲಾನುಭವಿಗಳಿಗೆ ಜಿಲ್ಲೆಯ ರೈತರು, ಸ್ವಸಹಾಯ ಗುಂಪುಗಳು, ವೈಯಕ್ತಿಕ ಉದ್ದಿಮೆದಾರರು, ಮಾಲಿಕತ್ವ ಸಂಸ್ಥೆಗಳು, ಪಾಲುದಾರಿಕೆ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಇದರಿಂದ ರೈತರಿಗೂ, ಬ್ಯಾಂಕುಗಳಿಗೂ ಹಾಗೂ ಮಹಿಳಾ ಸಂಘಗಳಿಗೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಬೆಂಗಳೂರಿನ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್.ಶಿವಪ್ರಕಾಶ ಮಾತನಾಡಿ 18 ವರ್ಷ ಮೇಲ್ಪಟ್ಟವರು ಈ ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ. ಈ ಯೋಜನೆಗೆ ಯಾವುದೇ ವಿದ್ಯಾರ್ಹತೆ ಅವಶ್ಯಕತೆ ಇಲ್ಲ. ತಾವು ಬೆಳೆದ ಬೆಳೆಗಳÀನ್ನು ಸಂಸ್ಕರಿಸಿ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸಿ ಒಂದು ಉದ್ದಿಮೆಯಾಗಿ ಮಾರ್ಪಡಿಸಿದಲ್ಲಿ ಹೆಚ್ಚು ಲಾಭ ಪಡೆಯಬಹುದು. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಸಿರಿಧಾನ್ಯ, ಎಣ್ಣೆಗಾಣ, ಬೆಲ್ಲದ ಘಟಕಗಳು, ಮಸಾಲೆ ಪದಾರ್ಥಗಳಂತಹ 3 ರಿಂದ 4 ಕಿರು ಆಹಾರ ಸಂಸ್ಕರಣೆಗಳ ಘಟಕಗಳನ್ನು ಸ್ಥಾಪಿಸುವುದರಿಂದ ಉದ್ಯೋಗ ಲಭಿಸಲಿವೆ. ಆದ್ದರಿಂದ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಕುರಿತು ಜನರಿಗೆ ಜಾಗೃತಿ ಮೂಡಿಸಬೇಕು ಹಾಗೂ ಪ್ರತಿಯೊಬ್ಬರಿಗೂ ಈ ಯೋಜನೆ ಮಾಹಿತಿ ಲಭಿಸುವಂತಾಗಬೇಕು ಎಂದು ಅವರು ಹೇಳಿದರು.

ಕೃಷಿ ಮಹಾವಿದ್ಯಾಲಯದ ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಕಾಶಿಬಾಯಿ ಖ್ಯಾಡಗಿ ಮಾತನಾಡಿ, ಜಿಲ್ಲೆಯ ಇಂಡಿ ತಾಲೂಕಿನಾದ್ಯಂತ ರೈತರು ಹೆಚ್ಚು ಲಿಂಬೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಲಿಂಬೆಯಿAದ ಪರ್ಯಾಯವಾಗಿ ಜ್ಯೂಸ್, ಉಪ್ಪಿನಕಾಯಿ ಉಪಉತ್ಪದಾನೆಗಳಲ್ಲಿ ತೊಡಗಿದಲ್ಲಿ ಹೆಚ್ಚು ಆದಾಯ ಮೂಲವಾಗಬಲ್ಲದು ಲಿಂಬೆ ಸಿಪ್ಪೆಗಳಲ್ಲಿ ವೈಜ್ಞಾನಿಕವಾಗಿ ಔಷಧೀಯ ಗುಣ ಹೊಂದಿದ್ದು ಅದರಿಂದ ವಿವಿಧ ಬಗೆಯ ಕ್ಯಾಂಡಿ, ಸ್ವೀಟ ಕ್ಯಾಂಡಿ ಹಾಗೂ ಪೌಡರಗಳನ್ನು ತಯಾರಿಸಬಹುದಾಗಿದೆ. ಇದರಿಂದ ಪೌಷ್ಟಿಕತೆ ಹೆಚ್ಚುತ್ತದೆ ಹಾಗೂ ಮೌಲ್ಯವರ್ಧಿತ ಗುಣಗಳನ್ನು ಹೊಂದಿದೆ. ಯಾವುದೇ ಉತ್ಪನ್ನಗಳನ್ನು ತಯಾರಿಸುವಲ್ಲಿ ಸ್ವಚ್ಚತೆಗೆ ಹೆಚ್ಚು ಗಮನ ನೀಡಬೇಕು ಎಂದು ಅವರು ತಿಳಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಮಾತನಾಡಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಸ್ವಂತ ಉದ್ಯೋಗ ಹೊಂದಲು ಬಹಳ ಅನುಕೂಲವಾಗಲಿದೆ. ರೈತರು ಬೆಳೆದಂತಹ ವಸ್ತುಗಳನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡಿದಲ್ಲಿ ಒಳ್ಳೆಯ ಲಾಭ ಸಿಗಲಿದೆ. ರೈತರು, ಮಹಿಳಾ ಸ್ವಸಹಾಯ ಗುಂಪುಗಳು, ಉದ್ದಿಮೆದಾರರು ಹೆಚ್ಚು ಪಾಲ್ಗೊಳ್ಳುವುದರೊಂದಿಗೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಕಾರ್ಯಕ್ರಮದ ಮುಂಚೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ವಿವಿಧ ಬಗೆಯ ಆಹಾರ ಉತ್ಪನ್ನಗಳ ಮಳಿಗೆಯನ್ನು ವೀಕ್ಷಿಸಿದರು. ಕಾರ್ಯಾಗಾರದಲ್ಲಿ ಕೆಪೆಕ್ ಸಂಸ್ಥೆ ಸಮಾಲೋಚಕರಾದ ವಿಘ್ನೇಶ ಗಾಯತೊಂಡೆ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಅಗ್ರಣೀಯ ಬ್ಯಾಂಕ ವ್ಯವಸ್ಥಾಪಕರಾದ ಬಿ.ಸಿದ್ದಯ್ಯ ಯೋಜನೆಯಡಿ ಸಾಲ ಸೌಲಭ್ಯಗಳ ಅವಕಾಶಗಳ ಕುರಿತು ವಿವರಣೆ ನೀಡಿದರು. ಉಪ ಕೃಷಿ ನಿರ್ದೇಶಕ ಚಂದ್ರಕಾAತ ಪವಾರ ಸ್ವಾಗತಿಸಿದರು. ಉಪ ಕೃಷಿ ನಿರ್ದೇಶಕರಾದ ಶರಣಗೌಡ ರಂಗನಗೌಡ ವಂದಿಸಿದರು. ಜಿಲ್ಲೆಯ ವಿವಿಧ ಗ್ರಾಮಗಳ ಉದ್ದಿಮೆದಾರರು, ಸ್ವಸಹಾಯ ಗುಂಪಿನ ಸದಸ್ಯರು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.