Wednesday, January 14, 2026

15-01-2026 EE DIVASA KANNADA DAILY NEWS PAPER

ಜ.27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ


ವಿಜಯಪುರ: ಜ.27ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅಂತ್ಯತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷರಾದÀ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಉದ್ಯೋಗ ಮೇಳದ ಆಯೋಜನೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯುವನಿಧಿ ಸೌಲಭ್ಯ ಪಡೆಯುತ್ತಿರುವ 15000ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ವಾಟ್ಸಾಪ್ ಹಾಗೂ ಎಸ್.ಎಂ.ಎಸ್ ಮೂಲಕ ಮುಂಚಿತವಾಗಿ ತಿಳಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು.ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗದಾತರು ನೋಂದಣಿ ಕಾರ್ಯಕ್ಕೆ ಕ್ರಮವಹಿಸಬೇಕು. ಉದ್ಯೋಗಾಕಾಂಕ್ಷಿಗಳು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೋಂದಣಿಗಾಗಿ ಸೃಜಿಸಲಾದ ಪೋರ್ಟಲ್ ಅಥವಾ ಲಿಂಕ್ ಬಗ್ಗೆ ವ್ಯಾಪಕ ಪ್ರಚಾರಗೊಳಿಸಬೇಕು. ಜಿಲ್ಲಾದಾದ್ಯಂತ ಇರುವ ವಿವಿಧ ಕಾಲೇಜುಗಳಿಗೆ ಮಾಹಿತಿ ನೀಡಬೇಕು ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳಿಗೆ ಮುಂಚಿತವಾಗಿ ಹಾಗೂ ಮೇಳದ ದಿನ ನೋಂದಣಿಗೆ ಅವಕಾಶ ಕಲ್ಪಿಸಬೇಕು. 

ಉದ್ಯೋಗ ಮೇಳದ ಸ್ಥಳ,ವಿಳಾಸ ವಿವರ ಹಾಗೂ ಕೌಂಟರ್ ಸೇರಿದಂತೆ ಅಗತ್ಯ ಮಾಹಿತಿ ನೀಡಬೇಕು, ಉದ್ಯೋಗ ಮೇಳದಲ್ಲಿ ಭಾಗವಹಿಸಲು 130 ಉದ್ಯೋಗದಾತ ಕಂಪನಿಗಳು ಆಗಮಿಸುವ ಸಂಭವವಿರುವ ಹಿನ್ನೆಲೆಯಲ್ಲಿ ಆಯಾ ಕಂಪನಿಯ ಸಂದರ್ಶನ ಕೊಠಡಿ ಸೇರದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ನೋಂದಣಿ ಶುಲ್ಕ ಇಲ್ಲದೇ ಇರುವುದರಿಂದ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಸ್ಥಳೀಯ ಕಸ ವಿಲೇವಾರಿ ವಾಹನ ಮೂಲಕ, ಕರಪತ್ರ, ಬ್ಯಾನರ್ ಹಾಗೂ ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಪ್ರಚಾರ ಮಾಧ್ಯಮದ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ಸಂಧರ್ಭ ಕೌಶಲ್ಯ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ವೇತಾ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯP ಮೆಕ್ಕಳಕಿ, ಜಿಲ್ಲಾ ನಗರಾಭಿವೃÈದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ ಸೌದಾÀಗರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಉಮಾಶ್ರೀ ಕೋಳಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಮಹಾತೇಂಶ ಬಾಗೇವಾಡಿ ವಿಜಯಪುರ ಜಿಲ್ಲಾ ಕೈಗಾರಿಕೋದ್ಯಮಿಗಳ ಅಸೋಷಿಯೇಶನ್ ಅಧ್ಯಕ್ಷರಾದ ಎಸ್.ವಿ. ಪಾಟೀಲ, ಜಿಲ್ಲಾ ಸಣ್ಣ ಕೈಗಾರಿಕಾಗಳ ಅಧ್ಯಕ್ಷರಾದ ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಜಾನುವಾರು ಜಾತ್ರೆ: ತೊರವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

ವಿಜಯಪುರ : ಜಾನುವಾರ ಜಾತ್ರೆಯ ಅಂಗವಗಿ ನಗರದ ತೊರವಿಯಲ್ಲಿ ನಡೆಯುತ್ತಿರುವ ಜಾನುವಾರ ಜಾತ್ರಾ ಸ್ಥಳಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಜಾತ್ರೆಯ ಸುಸೂತ್ರ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. 

ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಜಾನುವಾರ ಜಾತ್ರೆ ಆಯೋಜಿಸಲಾಗುತ್ತಿದ್ದು, ಇದೇ ಜ.10 ರಿಂದ ಆರಂಭಗೊAಡಿದ್ದು, ಈ ಸಂದರ್ಭ ಯಾವುದೇ ಸಮಸ್ಯೆಯುಂಟಾಗದAತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವುದನ್ನು ಹಾಗೂ ಜಾತ್ರೆಗೆ ಆಗಮಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸುಗಮ ರಸ್ತೆ ಹಾಗೂ ಸಾರಿಗೆ ವ್ಯವಸ್ಥೆ, ಜಾನುವಾರಗಳಿಗೆ ಕುಡಿಯುವ ನೀರು ಒದಗಿಸುವುದು ಪಶುವೈದ್ಯಾಧಿಕಾರಿಗಳು ಜಾತ್ರೆಯ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿರುವ ಕುರಿತು ಮಾಹಿತಿ ಪಡೆದುಕೊಂಡರು.

ಆAಬುಲೆನ್ಸ್, ವೈದ್ಯಕೀಯ ಸೌಲಭ್ಯ ಸೇರಿದಂತೆ ಯಾವುದೇ ಕೊರತೆ ಉಂಟಾಗದAತೆ ಅಚ್ಚುಕಟ್ಟಾಗಿ ಜಾನುವಾರ ಜಾತ್ರೆ ವ್ಯವಸ್ಥಿತವಾಗಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ನಡೆದಿರುವ ಜಾನುವಾರುಗಳ ಬಹುಮಾನ ಆಯ್ಕೆ ಮಾನದಂಡಗಳAತೆ ಆಯ್ಕೆ ಪ್ರಕ್ರಿಯೆ ನಡೆಸುವಂತೆ ಸೂಚಿಸಿದರು. ಈ ಬಾರಿ ಜಾತ್ರೆಗೆ ಸುಮಾರು ಐದು ಸಾವಿರ ಜಾನುವಾರಗಳು ಆಗಮಿಸಿದ್ದು, ಅವುಗಳ ಪೈಕಿ ಈವರೆಗೆ 1500 ಜಾನುವಾರುಗಳು ಮಾರಾಟವಾಗಿರುವ ಹಾಗೂ ಬಹುಮಾನ ವಿತರಣೆ ಕುರಿತ ಮಾಹಿತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಅಲ್ಲಾಭಕ್ಷ ಬಿಜಾಪುರ ಮಾಹಿತಿ ನೀಡಿದರು. 

ಈ ಸಂದರ್ಭ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಗೋಣಸಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.