Saturday, September 5, 2026

ಎಂ.ಎಸ್. ಖೇಡ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ವಿಜಯಪುರ: ನಗರದ ಎಂ.ಎಸ್. ಖೇಡ್ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಸಂಸ್ಥೆಯ ಖಜಾಂಚಿ ವಿನೋದ ಎಂ. ಖೇಡ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಕ್ಷರ ಕಲಿಸಿ ಜ್ಞಾನವನ್ನು ನೀಡುವವರು ಶಿಕ್ಷಕರು; ಜ್ಞಾನ ನೀಡಿ ಬದುಕಿನ ದಾರಿಯನ್ನು ತೋರಿಸುವವರು ಗುರುಗಳು” ಎಂದು ಶಿಕ್ಷಕರ ಮಹತ್ವವನ್ನು ವಿವರಿಸಿದರು. ನಮ್ಮ ಬದುಕಿಗೆ ದಾರಿದೀಪವಾಗಿ, ಜ್ಞಾನದ ಬೆಳಕನ್ನು ಹರಿಸಿ, ಉತ್ತಮ ಭವಿಷ್ಯ ರೂಪಿಸುವ ಗೌರವಾನ್ವಿತ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವೇ ಶಿಕ್ಷಕರ ದಿನಾಚರಣೆ ಎಂದು ತಿಳಿಸಿದರು. ಇದೇ ವೇಳೆ ಶಿಕ್ಷಕ ಸಮುದಾಯಕ್ಕೆ ಮತ್ತೊಮ್ಮೆ ಶಿಕ್ಷಕರ ದಿನದ ಶುಭಾಶಯಗಳನ್ನು ಕೋರಿದರು.

ಶಾಲೆಯ ಮುಖ್ಯಗುರು ಸೀತಾ ಲಮಾಣಿ ಅವರು ಮಾತನಾಡಿ, “ಮುಗ್ಧ ಮನದಲ್ಲಿ ಅಕ್ಷರ ಬಿತ್ತಿ, ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ, ಸುಂದರ ನಾಡು ಕಟ್ಟುವ ಅದ್ಭುತ ಶಿಲ್ಪಿಗಳು ಶಿಕ್ಷಕರು” ಎಂದು ಶಿಕ್ಷಕರ ಸೇವೆ ಹಾಗೂ ಜವಾಬ್ದಾರಿಯನ್ನು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಶ್ರೀದೇವಿ ಸೊನ್ನದ ಹಾಗೂ ಗಂಗೂಬಾಯಿ ಹಂಗರಗಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಜಯಪುರ ಜಿಲ್ಲೆಯ 13 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಜೆಡಿಎಸ್ ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಮಳೆ ಅಭಾವದಿಂದ ತೀವ್ರ ಬರಪರಿಸ್ಥಿತಿ ನಿರ್ಮಾಣವಾಗಿದ್ದು, ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ತಕ್ಷಣವೇ ‘ಬರಪೀಡಿತ ತಾಲೂಕುಗಳು’ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಜೆಡಿಎಸ್ ಜಿಲ್ಲಾ ಅಧ್ಯಕ್ಷರಾದ ಮಲ್ಲಿಕಾರ್ಜುನ ಯಂಡಿಗೇರಿ ಅವರ ನೇತೃತ್ವದಲ್ಲಿ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಮೆರವಣಿಗೆ ಮೂಲಕ ರೈತ ಮುಖಂಡರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಧರಣಿಗೆ ಬೆಂಬಲ ಸೂಚಿಸಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ತೀವ್ರವಾಗಿ ಹದಗೆಟ್ಟಿದ್ದು, ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ಯಾವುದೇ ವಿಳಂಬವಿಲ್ಲದೆ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

13 ತಾಲೂಕುಗಳಿಗೂ ಬರಪೀಡಿತ ಸ್ಥಾನಮಾನ: ಮಳೆ ಕೊರತೆ ಹಾಗೂ ಬೆಳೆ ನಷ್ಟದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ತಕ್ಷಣ ಅಧಿಕೃತವಾಗಿ ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು. ಬೆಳೆ ಪರಿಹಾರ ಬಿಡುಗಡೆ: ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಬೆಳೆ ಪರಿಹಾರಧನವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ಕುಡಿಯುವ ನೀರು ಮತ್ತು ಮೇವಿನ ವ್ಯವಸ್ಥೆ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಅಗತ್ಯ ಮೇವು ಲಭ್ಯವಾಗುವಂತೆ ತಾಲೂಕುವಾರು ಮೇವಿನ ಬ್ಯಾಂಕ್‌ಗಳನ್ನು ತೆರೆಯಬೇಕು. ಸಾಲ ವಸೂಲಾತಿ ತಡೆ: ಬರಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಕೃಷಿ ಸಾಲ ವಸೂಲಾತಿಯನ್ನು ತಕ್ಷಣ ತಡೆಹಿಡಿದು, ಸಾಲ ಮರುಪಾವತಿಗೆ ಸೂಕ್ತ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಬಿ.ಜಿ. ಪಾಟೀಲ, ಮುಖಂಡರಾದ ಸೋಮವಾರ ಪಾಟೀಲ, ಪಂಚಪ್ಪ ಕಲಬುರ್ಗಿ, ಖಾದ್ರಿ ಇನಾಂದಾರ್, ರಾಜು ಹಿಪ್ಪರಗಿ, ಅಪ್ಸರಾ ಬೇಗಂ ಚಪ್ಪರಬಂದ, ಮಾದೇವಿ ಪಾಟೀಲ, ಶಾಂತಾ ಲಮಾಣಿ, ಪ್ರಕಾಶ ಹಿರೇಕುರುಬರ, ಗುರುನಗೌಡ ಪಾಟೀಲ, ಭಾಗಾಯತ್ ರಾಜು ಹಿರೇಮಠ, ಶಂಕರ್ ಹಾಲಹಳ್ಳಿ, ಮಲ್ಲು ತೊರವಿ, ಮುತ್ತು ಜಂಗಮಶೆಟ್ಟಿ, ಶರಣಗೌಡ ಪಾಟೀಲ, ಬಸವರಾಜ ಹೊನವಾಡ, ಪ್ರಶಾಂತ್ ಕಿನಗಿ ಹಾಗೂ ಪೀರ್ ಗಚ್ಚಿನಮಲ್, ಎಂ ಎನ್ ಪಾಟೀಲ್, ಹುಸೇನ್ ಬಾಗಾಯತ್, ರೇವಣಸಿದ್ಧ ಕುಮಟೆ, ಶಿವಾಜಿ ಸಿಂಗಾಡಿ, ಸೇರಿದಂತೆ ಜೆಡಿಎಸ್ ಪಕ್ಷದ ಜಿಲ್ಲಾ ಮಟ್ಟದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 24, 2026

ಖರ್ಗೆಯವರು ಸಾರ್ವಜನಿಕವಾಗಿ ಮಾತನಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಲು ದಸಂಸ ಅಂಬೇಡ್ಕರ್‌ವಾದ ಆಗ್ರಹ

ವಿಜಯಪುರ : ಎಐಸಿಸಿ ರಾಷ್ಟಿçÃಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳನ್ನು ದೇಶದಿಂದ ಗಡಿಪಾರು ಮಾಡಲು ಒತ್ತಾಯಿಸಿ ದಸಂಸ ಅಂಬೇಡ್ಕರ್ ವಾದ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರ ಮೂಲಕ ಗೌರವಾನ್ವಿತ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗೀಯ ಸಂಚಾಲಕರಾದ ಸಂಜು ವೈ ಕಂಬಾಗಿ ಮಾತನಾಡಿ, ಉತ್ತರಾಖಂಡದ ರಾಮಲೀಲಾ, ಮೈದಾನದಲ್ಲಿ ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸ್ಥಳವನ್ನು ಅಲ್ಲಿಯ ಆರ್.ಎಸ್.ಎಸ್. ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಚ್ಚಗೊಳಿಸಿರುವುದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕ್ವಾದ ಜಿಲ್ಲಾ ಸಮಿತಿಯು ಉಗ್ರವಾಗಿ ಖಂಡಿಸುತ್ತದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ರವರು 1956 ಅಕ್ಟೋಬರ್ 14 ರಂದು ಮನುವಾದದ ವಿರುದ್ಧವಾಗಿ ನಾನು ಹಿಂದು ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂ ಧರ್ಮದಲ್ಲಿ ಸಾಯುವುದಿಲ್ಲ ಎಂದು ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮತ್ತು ಬಾಬಾಸಾಹೇಬ ಅಂಬೇಡ್ಕ್ರ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕು ನೀಡಿದ್ದಾರೆ. ಹಾಗೆಯೇ ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ ಅವರಿಗೆ ಈ ರೀತಿ ಮನುವಾದಿಗಳು ನಡೆಸಿಕೊಳ್ಳುತ್ತಿದ್ದಾರೆ ಇನ್ನು ದೇಶದಲ್ಲಿ ಸಾಮಾನ್ಯರ ಪರಿಸ್ಥಿತಿ ಹೇಗಿದೆ ಎಂಬುವುದು ತಾವು ಅರಿತುಕೊಂಡು ಮಲ್ಲಿಕಾರ್ಜುನ ಖರ್ಗೆಯವರು ಸಾರ್ವಜನಿಕವಾಗಿ ಮಾತನಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶಿವು ಮೇಲಿಮನಿ, ಸವಿತಾ ವಗ್ಗರ, ಚೇತನ ತೊರವಿ, ಮಹಾಂತೇಶ ರಾಠೋಡ, ಸಂಗಮೇಶ ಇರಸೂರ, ಶಶಿಧರ ನಾಯ್ಕೋಡಿ, ಬಸೀರ ತಾಂಬೋಳಿ, ರಾಜು ಮೇತ್ರಿ, ಸುಭಾಸ ಹೊನ್ನಕಂಠಿ, ಸಿದ್ದು ಕಾಂಬಳೆ, ಸುನಂದಾ ದೊಡ್ಡಮನಿ, ಸಾಯಬಣ್ಣ ದಳಪತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, August 18, 2026

ಇಂಡಿ ಶಾಸಕ ಯಶವಂತರಾಯಗೌಡರಿಗೆ 371(ಜೆ ) ಹೋರಾಟ ಸಮಿತಿ ಸದಸ್ಯರ ಮನವಿ


 ಇಂಡಿ :ವಿಜಯಪುರ ಜಿಲ್ಲಾ 371(ಜೆ ) ಹೋರಾಟ ಸಮಿತಿ ಸದಸ್ಯರು ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರಿಗೆ  371(ಜೆ) ಮೀಸಲಾತಿಗೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಸಂವಿಧಾನದ 371(ಜೆ ) ಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆ ಸೇರಿಸಲು ಮುಖ್ಯಮಂತ್ರಿಗಳ ಮನ ಒಲಿಸಿ   ರಾಜ್ಯ ಸರ್ಕಾರದಿಂದ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಿಕೊಡಬೇಕು ಹಾಗೂ ಮೀಸಲಾತಿಗೆ ಸೇರ್ಪಡೆಯಾಗುವವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸೌಲಭ್ಯಗಳನ್ನು ವಿಜಯಪುರ ಜಿಲ್ಲೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ಮನವಿ ಸ್ವೀಕರಿಸಿದ  ಶಾಸಕರು ಹೋರಾಟ ಸಮಿತಿ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ 371(ಜೆ) ಮೀಸಲಾತಿ  ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಯುವಕರಿಗೆ ನೇಮಕಾತಿಯಲ್ಲಿ ಮೀಸಲಾತಿ,ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಗುವ ವಿಶೇಷ ಅನುದಾನ ಸೌಲಭ್ಯ ಸೇರಿದಂತೆ ಜಿಲ್ಲೆಯ 25 ಲಕ್ಷ ಜನರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ 371(ಜೆ) ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಹೋರಾಟಗಾರರು ಇದೆ ಸಂದರ್ಭದಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ, ಸಂಜೀವಗೌಡ ಪಾಟೀಲ(ಕನ್ನೂರ) ಮಲ್ಲನಗೌಡ ಪಾಟೀಲ (ಬರಟಗಿ) ಲಾಯಪ್ಪ ಇಂಗಳೆ ಚಂದ್ರಶೇಖರ ಹೊಸಮನಿ,ಸೇರಿದಂತೆ
ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 17, 2026

ನೇಕಾರ ಸಮ್ಮಾನ್ ಯೋಜನೆಗೆ: ಅರ್ಜಿ ಆಹ್ವಾನ

ವಿಜಯಪುರ : 2026-27ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯ ಅರ್ಹ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ಹಾಗೂ ನೇಕಾರಿಕೆಗೆ ಸಂಬAಧಿಸಿದ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ರೂ.5 ಸಾವರ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದೆ.

ಪ್ರಸ್ತುತ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಹಾಗೂ ಪಿಎಂಜೆಜೆಬಿವೈ-ಪಿಎAಎಸ್‌ಬಿವೈ ಯೋಜನೆಯಡಿ ನೋಂದಣಿಯಾಗಿರುವ ಅರ್ಹ ನೇಕಾರರು ಸೌಲಭ್ಯ ಪಡೆಯಲು ಅರ್ಹರಾಗಿದ್ದು, ಕಳೆದ ಸಾಲಿನಲ್ಲಿ ನೋಂದಣಿಯಾಗದ ಅರ್ಹ ನೇಕಾರರು ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸುವವರು ಆಧಾರ್, ರೇಷನ್ ಕಾರ್ಡ್, ನೇಕಾರ ಸಮ್ಮಾನ್ ಐಡಿ ಅಥವಾ ಪೆಹಚಾನ್ ಕಾರ್ಡ್, ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಪಾಸ್‌ಬುಕ್, ನೇಕಾರರ ಗುರುತಿನ ಚೀಟಿ, ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ಫೋಟೋ ಹಾಗೂ ಪಿಎಂಜೆಜೆಬಿವೈ-ಪಿಎAಎಸ್‌ಬಿವೈ ನೋಂದಣಿ ದಾಖಲೆಗಳ ಪ್ರತಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.9538114434 ,9611297674 ಹಾಗೂ ಅರ್ಹ ನೇಕಾರರು ಸ್ಥಳೀಯ ಕೈಮಗ್ಗ ಅಭಿವೃದ್ಧಿ ನಿಗಮ ಅಥವಾ ನೇಕಾರ ಸಹಕಾರ ಸಂಘಗಳ ಮೂಲಕ, ಇಲ್ಲವೇ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಡಿ.ಐ.ಸಿ. ಕಂಪೌAಡ್, ಶಿಖಾರಖಾನೆಯಲ್ಲಿರುವ ಕಚೆರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಮದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, August 14, 2026

ನಿವೃತ್ತ ಬಿಎಸ್‌ಎನ್‌ಎಲ್ ಸಿಬ್ಬಂದಿ, ರೈತ ಡಿ. ಶ್ರೀ ಶಂಕರಗೌಡ ಗೌಡಪ್ಪಗೌಡ ಬಿರಾದಾರ ನಿಧನ


ವಿಜಯಪುರ: ನಗರದ ನಿವಾಸಿ, ನಿವೃತ್ತ ಟೆಲಿಕಾಂ–ಬಿಎಸ್‌ಎನ್‌ಎಲ್ ಸಿಬ್ಬಂದಿ ಹಾಗೂ ಪ್ರಸಿದ್ಧ ರೈತರಾದ ಡಿ. ಶ್ರೀ ಶಂಕರಗೌಡ ಗೌಡಪ್ಪಗೌಡ ಬಿರಾದಾರ ಅವರು ಶುಕ್ರವಾರ, ಆಗಸ್ಟ್ 14, 2026ರಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು 1953ರ ಜೂನ್ 1ರಂದು ಜನಿಸಿದ್ದರು.

ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸರಳ, ಸಜ್ಜನ ಸ್ವಭಾವದವರಾಗಿ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಸಮಾಜದವರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ನಿಧನದಿಂದ ಕುಟುಂಬ ಹಾಗೂ ಬಂಧುಬಳಗದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಮೃತರ ಅಂತ್ಯಕ್ರಿಯೆ ಶನಿವಾರ, ಆಗಸ್ಟ್ 15ರಂದು ಬೆಳಿಗ್ಗೆ ನಡೆಯಲಿದ್ದು, ವಿಜಯಪುರದ ಶಿವನಗಿ ರಸ್ತೆಯ ಸ್ವಗೃಹದಿಂದ ಅಂತಿಮ ಯಾತ್ರೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಹೆಗಡಿಹಾಳದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಬಂಧುಗಳು, ಸ್ನೇಹಿತರು ಮತ್ತು ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.