Friday, October 6, 2023
ಬೆಂವಿವಿ: ತತ್ವಶಾಸ್ತ್ರ ವಿಭಾಗದಿಂದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಇಂದು
ಈ ದಿವಸ ವಾರ್ತೆ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿರುವ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆಂದು ಕಾರ್ಯಕ್ರಮದ ನಿರ್ದೇಶಕ ಡಾ.ಎಂ. ಗೋವಿಂದರಾಜು ರವರು ತಿಳಿಸಿದ್ದಾರೆ.
"ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ ತಾತ್ವಿಕ ಚಿಂತನೆಗಳು" ಎಂಬ ವಿಷಯದ ಮೇಲೆ ಈ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.
ಜ್ಞಾನಭಾರತಿ ಆವರಣದಲ್ಲಿರುವ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸೆಮಿನಾರ್ ಹಾಲ್ ನಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಅಕ್ಟೋಬರ್ 07 ಬೆಳಗ್ಗೆ 10 ಗಂಟೆಗೆ ಉದ್ಘಾಟನೆಯಾಗಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಬೆಂವಿವಿಯ ಸೆಂಟರ್ ಫಾರ್ ರೂರಲ್ ಡೆವಲಪ್ಮೆಂಟ್ ಸ್ಟಡೀಸ್ ನ ನಿರ್ದೇಶಕ ಪ್ರೊ.ಟಿ.ಎಚ್.ಮೂರ್ತಿ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಕೃಷಿ ಎಂಜಿನಿಯರ್ ಶ್ರೀ ಎಸ್. ಸಿದ್ದಯ್ಯ ಅವರಿಂದ ವಿಚಾರ ಮಂಡನೆ ಮಾಡಲಿದ್ದಾರೆ. ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಟಿ.ರಾಜೇಂದ್ರ ಪ್ರಸಾದ್ ರವರು ವಹಿಸಿಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಮತ್ತಿತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ನಿರ್ದೇಶಕರು ಶ್ರೀ ಡಾ. ಎಂ. ಗೋವಿಂದರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರಿಗೆ ವಿಶೇಷ ಸೂಚನೆ:ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
ಮೊ: 7204279187/
9900378892
ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.
Thursday, October 5, 2023
Wednesday, October 4, 2023
ಅ.5 ರಂದು ವಿದ್ಯುತ ವ್ಯತ್ಯಯ

ಈ ದಿವಸ ವಾರ್ತೆ
ವಿಜಯಪುರ: ದಿನಾಂಕ 3.10.2023 ರ ಸಾಯಂಕಾಲ ಸುಮಾರು 6.30 ಘಂಟೆಗೆ 220 ಕೆ.ವಿ ವಿದ್ಯುತ್ ಪ್ರಸರಣ ಕೇಂದ್ರ ವಿಜಯಪುರದಿಂದ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ವಿಜಯಪುರಕ್ಕೆ ಬರುವ ಮೇನ್ ಟವರ್ ಮೇಲೆ ತುಂಡಾಗಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸುವ ಕಾಮಗಾರಿಯು ಮುಂದುವರೆದಿರುವ ಪ್ರಯುಕ್ತ 05.10.2023 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.00 ಗಂಟೆವರೆಗೆ 110 ಕೆ. ವಿ. ವಿಜಯಪುರ ಹಾಗೂ 110 ಜುಮನಾಳ ವಿದ್ಯುತ್ ವಿತರಣಾ ಕೇಂದ್ರಗಳಿಂದ ಎಲ್ಲಾ 11 ಕೆ. ವಿ ವಿದ್ಯುತ್ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಕಾರಣ, ಗ್ರಾಹಕರು ಹೆಸ್ಕಾಂ ಜೊತೆ ಸಹಕರಿಸಬೇಕೆಂದು , ವಿಜಯಪುರದ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಮನವಿ ಮಾಡಿರುತ್ತಾರೆ.
ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
ಮೊ: 7204279187/
9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.
Tuesday, October 3, 2023
ಅ.4ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಈ ದಿವಸ ವಾರ್ತೆ
ವಿಜಯಪುರ: ನಗರ ಸೇರಿದಂತೆ ತಾಲೂಕಿನ ಜುಮನಾಳ ಗ್ರಾಮದ ವ್ಯಾಪ್ತಿಯಲ್ಲಿ ಅ.4ರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
220 ಕೆ.ವಿ ವಿದ್ಯುತ್ ಪ್ರಸರಣ ಕೇಂದ್ರದಿಂದ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ವಿಜಯಪುರಕ್ಕೆ ಬರುವ ಮೇನ್ ಟವರ್ ಮೇಲೆ ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆಯಲ್ಲಿ 110 ಕೆ ವಿ ವಿಜಯಪುರ ಹಾಗೂ 110 ಜುಮನಾಳ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಎಲ್ಲಾ 11 ಕೆ. ವಿ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಗ್ರಾಹಕರು ಸಹಕರಿಸುವಂತೆ ವಿಜಯಪುರದ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
ಮೊ: 7204279187/
9900378892
ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


