Wednesday, October 11, 2023
Monday, October 9, 2023
ಬಾಗೇವಾಡಿ ತಾ.ಪಂ.ಗೆ ಸಿಇಓ ರಾಹುಲ್ ಶಿಂಧೆ ಭೇಟಿ ಸಮರ್ಪಕವಾಗಿ ಕಾರ್ಯನಿರ್ವಹಣೆಗೆ ಸೂಚನೆ
ವಿಜಯಪುರ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ ಜಿಲ್ಲೆಯ ಬಸವನಬಾಗೇವಾತಿ ತಾಲೂಕಾ ಪಂಚಾಯತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರ ತಾಲೂಕಾ ಪಂಚಾಯತಿಯ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿದ ಅವರು, ಕಚೇರಿಗೆ ವಿವಿಧ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ಕಾರ್ಯಕ್ಕಾಗಿ ವಿಳಂಭ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು. ಎಲ್ಲ ಅಧಿಕಾರಿ-ಸಿಬ್ಬಂದಿಗಳು ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ನಂತರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳಾದ ಪ್ರಯೋಗಾಲಯ, ರಕ್ತ ಶೇಖರಣೆ ಕೇಂದ್ರ, ಡಯಾಲಸಿಶ, ನೋಂದಣಿ ವಿಭಾಗ, ಆಪರೇಷನ್ ಕೊಠಡಿ, ಚಿಕ್ಕಮಕ್ಕಳ ಪ್ರಸೂತಿ ಕೇಂದ್ರ, ಹೀಗೆ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮತ್ತು ಆಸ್ಪತ್ರೆಗೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳ ಕುರಿತು ಪಂಚಾಯತ ರಾಜ್ ಇಂಜಿನಿಯರ ವಿಭಾಗಕ್ಕೆ ಬೇಡಿಕೆ ಸಲ್ಲಿಸುವಂತೆ ತಾಲೂಕ ಅರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆಯಲ್ಲಿ ನೋಂದಣಿಯಾದ ರೋಗಿಗಳ ಜೊತೆ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ದಾಖಲಾದ ರೋಗಿಗಳಿಂದ ಮತ್ತು ರೋಗಿಗಳ ಪಾಲಕರೊಡನೆ ಚರ್ಚೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು. ಹಾಗೂ ಆರೋಗ್ಯ ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಯುವರಾಜ ಹನಗಂಡಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಎಸ್ ಎಸ್ ಒತಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಆಸಕ್ತರಿಗೆ ವಿಶೇಷ ಸೂಚನೆ:
ಡೆಂಗೀ ರಥ ಅಭಿಯಾನಕ್ಕೆ ಚಾಲನೆ
ವಿಜಯಪುರ : ಜಿಲ್ಲಾಡಳಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾದಿಕಾರಿಗಳ ಕಾರ್ಯಾಲಯ ವಿಜಯಪುರ ವತಿಯಿಂದ ಆಯೊಜಿಸಲಾಗಿರುವ ಡೆಂಗೀ ರಥ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡೆಂಗೀ ರೋಗ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಅತಿಮುಖ್ಯವಾಗಿದೆ. ಸಾರ್ವಜನಿಕರೂ ಸಹ ತಮ್ಮ ಅಕ್ಕ-ಪಕ್ಕದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಡೆಂಗೀ ರೋಗ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ರೋಗ ಕುರಿತು ಜಾಗೃತಿ ಮೂಡಿಸಲು ರಥ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಾದ್ಯಂತ ಸಂಚರಿಸಿ ಈ ರಥ ಜಾಗೃತಿ ಮೂಡಿಸಲಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿಗಳಾದ ಬಸವರಾಜ ಹುಬ್ಬಳ್ಳಿ ಮಾತನಾಡಿ ಡೆಂಗೀ ಜಾಗೃತಿ ರಥವು ಜಿಲ್ಲೆಯ ಎಲ್ಲ ಕಡೆ ಸಂಚರಿಸಿ ಡೆಂಗೀ ರೋಗ ಲಕ್ಷಣಗಳು ರೋಗ ಬರುವ ಕುರಿತು ರೋಗ ಬಾರದಂತೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಲಿದೆ ಸಾರ್ವಜನಿಕರು ಇದರ ಕುರಿತು ತಿಳಿದುಕೊಂಡು ಡೆಂಗೀ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕರೆ ನೀಡಿದರು.
ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾದಿಕಾರಿಗಳಾದ ಜೆಬುನ್ನಿಸಾಬೇಗಂ ಬೀಳಗಿ ಮಾತನಾಡಿ ಡೆಂಗೀ ರಥ ಅಭಿಯಾನ ಜಿಲ್ಲೆಯಾದ್ಯಂತ ಸಂಚರಿಸಿ ಆರೋಗ್ಯ ಶಿಕ್ಷಣ ನೀಡಲು ಕ್ರಿಯಾ ಯೋಜನೆ ತಯಾರಿಸಲಾಗಿದೆ ಸಾರ್ವಜನಿಕರು ಮನೆ ಹಾಗೂ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ನೀರಿನ ಸಂಗ್ರಹಕಾರಕಗಳ ಮೇಲೆ ಸೊಳ್ಳೆಗಳು ಮೊಟ್ಟಯಿಡದಂತೆ ಭದ್ರವಾಗಿ ಮುಚ್ಚಳದಿಂದ ಮುಚ್ಚುವಂತೆ ಹಾಗೂ ವಾರಕ್ಕೊಮ್ಮೆ ನೀರಿನ ಸಂಗ್ರಹಕಾರಕಗಳನ್ನು ಸ್ವಚ್ಛವಾಗಿ ತಿಕ್ಕಿ ತೊಳೆದು ನೀರನ್ನು ತುಂಬುವ ಮೂಲಕ ಎಲ್ಲ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಆರ ಸಿ ಹೆಚ್ ಅಧಿಕಾರಿಗಳಾದ ಕೆ.ಡಿ.ಗುಂಡಬಾವಡಿ ಜಿಲ್ಲಾ ಸರ್ವೆಕ್ಷಣಾಧಿಕಾರಿಗಳಾದ ಡಾ. ಕವಿತಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ವರಿ ಗೊಲಗೆರಿ ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಸಂಪತ ಗುಣಾರಿ ತಾಲೂಕಾ ಆರೋಗ್ಯಾಧಿಕಾರಿ ಪಿ.ಎ.ಹಿಟ್ನಳ್ಳಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ ಎಂ ಕೊಲೂರ ಉಪ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸುರೇಶ ಹೊಸಮನಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಆಸಕ್ತರಿಗೆ ವಿಶೇಷ ಸೂಚನೆ:
ಅ.11ರಂದು ಲೋಕಾಯುಕ್ತ ಅಧಿಕಾರಿಗಳಿಂದ ದೂರು ಸ್ವೀಕಾರ
ವಿಜಯಪುರ : ವಿಜಪುರ ಲೋಕಾಯುಕ್ತ ಪೋಲಿಸ್ ಅಧಿಕಾರಿಗಳಿಂದ ಅಕ್ಟೋಬರ್ 11 ರಂದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 10-30 ಗಂಟೆಯಿಂದ ಪೋಲಿಸ್ ಅಧೀಕ್ಷಕರು (ಮೊ:9364062528), ಪೋಲಿಸ್ ಉಪಾಧೀಕ್ಷಕರು (ಮೊ:9364062557), ಪೋಲಿಸ್ ಇನ್ಸಪೆಕ್ಟರ್-1 (ಮೊ:9364062640), ಪೋಲಿಸ್ ಇನ್ಸಪೆಕ್ಟರ್-2(ಮೊ:9364062639) ಚಡಚಣ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಮದ ಭರ್ತಿ ಮಾಡಿದ ಮತ್ತು ನೋಟರಿನಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಸ್ಥಳೀಐ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಸಂಪಾದನೆ ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರ ದೂರುಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಕಚೇರಿ ದೂ: 08352-255333, 257786, 295074 ಸಂಖ್ಯೆಗೆ ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ವಿಜಯಪುರ ಪೋಲಿಸ್ ಅಧೀಕ್ಷಕರು ತಿಳಿಸಿದ್ದಾರೆ.
ಆಸಕ್ತರಿಗೆ ವಿಶೇಷ ಸೂಚನೆ:


