Sunday, November 5, 2023
Friday, November 3, 2023
ವಿಜಯಪುರ ಜಿಲ್ಲೆಯನ್ನು ವಿಶ್ವಗುರು ಬಸವೇಶ್ವರ ಜಿಲ್ಲೆ ಅಂತ ಹೆಸರಿಡಲು ರಾಷ್ಟ್ರೀಯ ಬಸವ ಸೈನ್ಯ ಆಗ್ರಹ
ಈ ದಿವಸ ವಾರ್ತೆ
ವಿಜಯಪುರ:12ನೇ ಶತಮಾನದಲ್ಲಿ ವಚನದ ಮೂಲಕ ಸಮಾನತೆಯ ಸಾರುವುದರ ಜೊತೆಗೆ ಸಾಮಾಜಿಕ ಕ್ರಾಂತಿಯನ್ನು ಮಾಡಿದ ವಿಶ್ವಗುರು ಬಸವಣ್ಣನವರ ಜನಿಸಿದ ವಿಜಯಪುರ ಜಿಲ್ಲೆಯ ಹೆಸರನ್ನು ಬದಲಾಯಿಸಿ ಬಸವೇಶ್ವರ ಜಿಲ್ಲೆಯನ್ನಾಗಿ ಮಾಡಬೇಕೆಂಬುದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ ಆಗ್ರಹಿಸಿದರು ಇಂದು ವಿಜಯಪುರ ಜಿಲ್ಲಾಧಿಕಾರಿಗಳಿಗೆ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಗೆ ಬಸವೇಶ್ವರ ಚೆಲ್ಲಿ ಅಂತ ಮರುನಾಮಕರಣ ಮಾಡಲು ಮನವಿ ಸಲ್ಲಿಸಿ ಮಾತನಾಡಿದ ಅವರು
ನಾಡಿನ ಜನತೆಯ ಬಹುದಿನದ ಬೇಡಿಕೆ ಆಗಿದ್ದು ಈಗ ಕರ್ನಾಟಕ ಘನ ಸರ್ಕಾರ ವಿಜಯಪುರ ಜಿಲ್ಲೆಯನ್ನು ಬಸವೇಶ್ವರ ಜಿಲ್ಲೆ ಅಂತ ಹೆಸರಿಡಲು ತೀರ್ಮಾನಿಸಿದ್ದು ಸ್ವಾಗತ ಮಾಡುತ್ತೇವೆ ಹೆಸರು ಬದಲಾವಣೆ ಮಾಡುವುದರಿಂದ ವಿಶ್ವಗುರು ಬಸವಣ್ಣನವರು ಯಾರು ಅವರು ಮಾಡಿದ ಸಮಾನತೆಯ ಕ್ರಾಂತಿ. ವಚನ ಸಾಹಿತ್ಯ. ಕಾಯಕ ದಾಸೋಹದ ಪರಿಚಯವನ್ನು ಇಡೀ ಜಗತ್ತಿಗೆ ತಿಳಿಸಿದಂತೆ ಆಗುತ್ತದೆ ಈಗಾಗಲೇ ದೇಶದ ಅನೇಕ ನಗರಗಳ ಹೆಸರುಗಳನ್ನು ಬದಲಾವಣೆ ಮಾಡಿದ್ದಾರೆ ಉದಾಹರಣೆಗೆ ಮಹಾರಾಷ್ಟ್ರದ ಔರಂಗಾಬಾದ್ ಮರುನಾಮಕರಣಗೊಂಡು ಛತ್ರಪತಿ ಸಾಮಾಜಿನಗರವಾಗಿದೆ ಬಿಹಾರದ ಒಂದು ಜಿಲ್ಲೆಗೆ ಗೌತಮ ಬುದ್ಧರ ಹೆಸರನ್ನು ನಾಮಕರಣ ಮಾಡಲಾಗಿದೆ ಈ ನಿಟ್ಟಿನಲ್ಲಿ ಸರಕಾರ ತೆಗೆದುಕೊಂಡ ನಿರ್ಧಾರವನ್ನು ಬಸವ ನಾಡಿನ ಜನರು ಸ್ವಾಗತಿಸುತ್ತೇವೆ
ಅದೇ ರೀತಿ ಬಸವ ಜನ್ಮ ಸ್ಥಳ ಬಸವನಬಾಗೇವಾಡಿ ಪ್ರತೇಕ ಅಭಿರುದ್ಧಿ ಪ್ರಾದಿಕಾರ ರಚನೆ ಮಾಡಿ ಸಮಸ್ತ ಬಸವನಬಾಗೇವಾಡಿ ಅಭಿರುದ್ದಿ ಪಡಿಸಬೇಕು.ಬಸವ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ನವದೆಹಲಿಯ ಅಕ್ಷರಧಾಮ ಮಾದರಿಯಲ್ಲಿ ಬಸವಣ್ಣನವರ ಜೀವನ ಸಂದೇಶಗಳನ್ನು ಸಾರುವ ಬೃಹತ್ ಮ್ಯೂಸಿಯಂ ನಿರ್ಮಾಣ ಮಾಡಬೇಕು,ರಾಮಜನ್ಮಭೂಮಿ ಅಯೋಧ್ಯಾ ಮಾದರಿಯಲ್ಲಿ ವಿಶೇಷ ಅನುಧಾನ ಬಿಡುಗಡೆ ಮಾಡಿ ದೇಶ ವಿದೇಶದಿಂದ ಪ್ರವಾಶಿಗರು ಬಸವ ಜನ್ಮಸ್ಥಳಕ್ಕೆ ಬರುವುಹಾಗೆ ಮಾಡಲು ಸರ್ಕಾರ ವಿಶೇಷ ಕಾಳಜಿ ವಹಿಸಬೇಕು ಬಸವನಬಾಗೇವಾಡಿ ಪಟ್ಟಣದಲ್ಲಿ ಪ್ರವಾಸೋದ್ದಮ ಇಲಾಖೆಯಿಂದ ತ್ರೀ ಸ್ಟಾರ್ ಹೋಟೆಲ ನಿರ್ಮಾಣ ಮಾಡಬೇಕು. ಬಸವ ಜಯಂತಿಯಂದು ರಾಷ್ಟ್ರೀಯ ಬಸವೋತ್ಸವವನ್ನು ಪ್ರತಿ ವರ್ಷ ಸರ್ಕಾರ ಕಡ್ಡಾಯವಾಗಿ ಬಸವನಬಾಗೇವಾಡಿಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋಗೆ ಬಸವೇಶ್ವರ ಮೆಟ್ರೋ ಅಂತ ಹೆಸರಿಡಬೇಕು ಸರ್ಕಾರವನ್ನು ಎಂದು ಸರಕಾರಕ್ಕೆ ಅಗ್ರಹಿಸುತ್ತೇವೆ ಎಂದು ಹೇಳಿದರು
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ಸಂಚಾಲಕರಾದ ಶ್ರೀಕಾಂತ್ ಕೊಟ್ರಶೆಟ್ಟಿ ಮನ್ನನ್ ಶಾಬಾದಿ ದಯಾನಂದ್ ಜಾಲಗೇರಿ ಪ್ರಶಾಂತ್ ಮುಂಜಾನೆ ನಿಂಗನಗೌಡ ಸೋಲಾಪುರ್ ಸಂತೋಷ್ ಬಿರಾದಾರ್ ವಿಶ್ವನಾಥ್ ಹಾರಿವಾಳ ಶಿವಪ್ರಸಾದ್ ಮಿಂಚಿನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
Thursday, November 2, 2023
ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ: ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯ
ಹೊಸಪೇಟೆ, ನವೆಂಬರ್ 2 : ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅವರು ಇಂದು ಹೊಸಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಗಣಿಗಾರಿಕೆಗೆ ಸಂಬಂಧಿಸಿದ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತದೆ. ಯಾವುದೇ ವರ್ಗದ ಗಣಿಗಾರಿಕೆ ಕಾನೂನುಬದ್ಧವಾಗಿ ಪರವನಾಗಿ ತೆಗೆದುಕೊಂಡಲ್ಲಿ, ಎಲ್ಲ ಸಂಬಂಧಪಟ್ಟ ಇಲಾಖೆಗಳಿಂದ ಸಂಪೂರ್ಣ ಸಹಕಾರ ದೊರೆಯಲಿದೆ ಎಂದರು.
ಅರಣ್ಯ ಇಲಾಖೆಯೊಂದಿಗೆ ಈ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದ್ದು, ಎ,ಬಿ, ಸಿ ಅಥವಾ ಯಾವುದೇ ವರ್ಗದ ಗಣಿಗಾರಿಕೆಗೆ ತೊಂದರೆ ನೀಡದಂತೆ ಸೂಕ್ತ ನಿರ್ದೇಶನ ನೀಡಲಾಗಿದೆ. ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಪರ್ಯಾಯ ಕ್ರಮಗಳ ಬಗ್ಗೆಯೂ ತಿಳಿಸಲಾಗಿದೆ. ನಾವು ಹಿಂದೆ ಅಕ್ರಮ ಗಣಿಗಾರಿಕೆ ಬಗ್ಗೆ ಹೋರಾಟ ನಡೆಸಿದ್ದೆವು. ಅಕ್ರಮ ಗಣಿಗಾರಿಕೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.
ಮಹಿಳಾ ಪದವಿ ಕಾಲೇಜು ಮತ್ತು ಮಹಿಳಾ ಪೊಲೀಸ್ ಠಾಣೆ-ಪರಿಶೀಲಿಸಿ ಕ್ರಮ:
ಹೊಸಪೇಟೆಯ ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಗ್ರಂಥಾಲಯ ಕಟ್ಟಡಗಳು ಸೇರಿದಂತೆ ಒಟ್ಟು 36 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಾಗಿದೆ. ಸುಸಜ್ಜಿತ ವ್ಯವಸ್ಥೆಗಳುಳ್ಳ ಈ ಕಟ್ಟಡಗಳಿಂದ ಸುಮಾರು 3 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈ ಕಾಮಗಾರಿಯನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೈಗೊಳ್ಳಲಾಗಿದೆ ಎಂದರು. ವಿಜಯನಗರ ಜಿಲ್ಲೆಗೆ ಮಹಿಳಾ ಪದವಿ ಕಾಲೇಜು ಹಾಗೂ ಮಹಿಳಾ ಪೊಲೀಸ್ ಠಾಣೆಯ ಅವಶ್ಯಕತೆಯಿರುವ ಬಗ್ಗೆ ಮಾಧ್ಯಮದವರು ತಿಳಿಸಿದ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡುತ್ತಾ, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರ ಪತನಗೊಳಿಸುವ ಬಿಜೆಪಿಯವರ ವ್ಯರ್ಥ ಪ್ರಯತ್ನ:
ಶಾಸಕ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ಗೆಲ್ಲಿಸಿ ಬಹುಮತ ನೀಡಿದ್ದಾರೆ. ಐದು ವರ್ಷ ಕಾಂಗ್ರೆಸ್ ಸರ್ಕಾರವೇ ಆಡಳಿತ ಇರುತ್ತದೆ. ನಾನೇ ಐದುವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಒಮ್ಮೆ ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಯಶಸ್ವಿಯಾಗಿದ್ದರಿಂದ, ಈಗ ಮತ್ತೆ ಆ ಪ್ರಯತ್ನಕ್ಕೆ ಕೈಹಾಕಬಹುದು ಎಂದುಕೊಂಡಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಲಿದೆ ಎಂದರು.
ಹೈಕಮಾಂಡ್ ನಿರ್ಧಾರ :
ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳು ಇರಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರಾದೇಶಿಕ ಪಕ್ಷ ಅಲ್ಲ. ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ಹಂಪಿ ಉತ್ಸವ:
ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಕಳೆದ ಸಾಲಿನಲ್ಲಿ ಜನವರಿ ಮಾಹೆಯಲ್ಲಿ ಹಂಪಿ ಉತ್ಸವ ಆಚರಿಸಲಾಗಿದ್ದಂತೆ , ಈ ಸಾಲಿನಲ್ಲಿಯೂ ಜನವರಿ ಮಾಹೆಯಲ್ಲಿ ಆಚರಿಸಲಾಗುವುದು ಎಂದರು.
ಸಕ್ಕರೆ ಕಾರ್ಖಾನೆ :
ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಬಗ್ಗೆ ತಮ್ಮ ಅಭಿಪ್ರಾಯ ನೀಡುತ್ತಾ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನ:
ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನದ ಕೊರತೆಯಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿ, ಹಂಪಿ ವಿಶ್ವವಿದ್ಯಾಲಯವು ಅನುದಾನ ಕೋರಿದ ಮೇರೆಗೆ ಅನುದಾನವನ್ನು ಕೂಡಲೇ ಒದಗಿಸಲಾಗುವುದು ಎಂದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

