Thursday, November 30, 2023
ಪುರಂದರದಾಸರು ಹಾಗೂ ಕನಕದಾಸರು ದಾಸ ಸಾಹಿತ್ಯದ ಎರಡು ಕಣ್ಣುಗಳು
ಈ ದಿವಸ ವಾರ್ತೆ
ವಿಜಯಪುರ:
ವಿಜಯನಗರ ಅರಸರ ಪರವಾಗಿ ಯುದ್ಧದಲ್ಲಿ ಭಾಗವಹಿಸಿ, ಸೋಲನ್ನು ಅನುಭವಿಸಿ, ಅನೇಕ ಸಾವು- ನೋವುಗಳನ್ನು ನೋಡಿದ ದಾಸ ಶ್ರೇಷ್ಠ ಕನಕದಾಸರು ವೈರಾಗ್ಯ ಹೊಂದಿ, ಸಂಸಾರವನ್ನು ತ್ಯಾಗ ಮಾಡಿದರು. ದೇಶ ಸಂಚಾರ ಮಾಡುತ್ತ, ತಮ್ಮ ಕೀರ್ತನೆಗಳ ಮೂಲಕ ಜಾತಿ, ಮತ, ಪಂಥ, ಅಸಮಾನತೆ, ಅನ್ಯಾಯ, ಮೌಡ್ಯತೆಗಳನ್ನು ಹೋಗಲಾಡಿಸಲು ನಿರಂತರ ಶ್ರಮಿಸಿದರು. ತಿಮ್ಮಪ್ಪ ನಾಯಕನೆಂದು ಕರೆಸಿಕೊಳ್ಳುತ್ತಿದ್ದ ಇವರು ಗುರುಗಳಾದ ವ್ಯಾಸರಾಯರಿಂದ ಕನಕದಾಸರೆಂದು ಮರುನಾಮಕರಣ ಹೊಂದಿದರು. ತಮ್ಮ ಆರಾಧ್ಯ ದೈವ ‘ಕಾಗಿನೆಲೆ ಆದಿ ಕೇಶವರಾಯ’ ಎಂಬ ಹೆಸರಿನಿಂದ ಹಲವಾರು ಕೀರ್ತನೆಗಳನ್ನು ರಚಿಸಿ, ಸಮಾಜವನ್ನು ಸುಧಾರಣೆ ಮಾಡಲು ಅವಿರತ ಪ್ರಯತ್ನ ಮಾಡಿದರು ಎಂದು ಕನ್ನಡ ಹಿರಿಯ ಉಪನ್ಯಾಸಕರಾದ ಪ್ರೊ. ಸಿದ್ದು ಸಾವಳಸಂಗ ತಮ್ಮ ಉಪನ್ಯಾಸ ನೀಡುತ್ತಾ ಹೇಳಿದರು.
ಇಂದು ಕನಕದಾಸರ ಜಯಂತಿ ಪ್ರಯುಕ್ತ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜು, ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅವರು ಹಾವೇರಿ ಜಿಲ್ಲೆಯ ಬಾಡ ಎನ್ನುವಂತ ಚಿಕ್ಕ ಗ್ರಾಮದಲ್ಲಿ ಕ್ರಿ.ಶ.೧೫೦೮ ರಲ್ಲಿ ಬೀರಪ್ಪ ನಾಯಕ ಹಾಗೂ ಬಚ್ಚಮ್ಮ ದಂಪತಿಗಳ ಮಗನಾಗಿ ಕನಕದಾಸರು ಜನಿಸಿದರು. ಅವರ ಪೂರ್ವನಾಮ ತಿಮ್ಮಪ್ಪನಾಯಕ. ಮುಂದೆ ವಿಜಯನಗರ ಅರಸರಿಂದ ೭೮ ಗ್ರಾಮಗಳನ್ನು ಪಡೆದು ಅವರು ನಾಯಕರಾಗಿದ್ದರು.
ಆನಂತರ ಯುದ್ಧದ ಸಾವು ನೋವುಗಳನ್ನು ಅರಿತು ಸಂಸಾರ ತ್ಯಾಗ ಮಾಡಿ ಸಂತರಾದರು.
ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನ್ನೇನಾದರೂ ಬಲ್ಲಿರಾ ಬಲ್ಲಿರಾ
ಎಂದು ಜಾತಿ-ಮತಗಳ ವಿರುದ್ಧ ದನಿಯೆತ್ತಿದರು. ಹಾಗೆಯೇ ‘ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಎಂದು ಇನ್ನೊಂದು ಕೀರ್ತನೆಯಲ್ಲಿ ಹೇಳುತ್ತಾರೆ. ಪುರಂದರದಾಸರು ಹಾಗೂ ಕನಕದಾಸರು ದಾಸ ಸಾಹಿತ್ಯದ ಎರಡು ಕಣ್ಣುಗಳು ಎಂದು ಪ್ರೊ. ಸಿದ್ದು ಸಾವಳಸಂಗ ಹೇಳಿದರು.
ಇನ್ನೋರ್ವ ಹಿರಿಯ ಉಪನ್ಯಾಸಕರಾದ ಪ್ರೊ. ಎಸ್. ಆರ್. ಬಿರಾದಾರ ಮಾತನಾಡುತ್ತಾ ಶ್ರೇಷ್ಠ ಸಂತನಾದ ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿ, ಅವುಗಳನ್ನು ಹಾಡುತ್ತಾ ದೇಶ ಸಂಚಾರ ಮಾಡಿ, ಜನರಲ್ಲಿ ಜಾಗೃತಿಯನ್ನು ಮೂಡಿಸಿದರು. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅತ್ಯಂತ ಅವಿಸ್ಮರಣೀಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸಿ.ಬಿ . ನಾಟೀಕಾರ ಮಾತನಾಡುತ್ತಾ ತಮ್ಮ ಭಕ್ತಿಯಿಂದ ಉಡುಪಿಯ ಶ್ರೀ ಕೃಷ್ಣನನ್ನು ಒಲಿಸಿಕೊಂಡಿರುವ ಸಂತ ಕನಕದಾಸರು ಸಮಾಜಕ್ಕೆ ಹಾಗೂ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆಯನ್ನು ನಾವು ಮರೆಯುವಂತಿಲ್ಲ. ಕೇವಲ ಕಾಟಾಚಾರಕ್ಕಾಗಿ ಅವರ ಜಯಂತಿಯನ್ನು ಆಚರಿಸದೆ, ಅವರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ನಾವು ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ದಾಸ ಶ್ರೇಷ್ಠ ಸಂತನಾದ ಕನಕದಾಸರ ಭಾವಚಿತ್ರಕ್ಕೆ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾಲೇಜಿನ ವಿದ್ಯಾರ್ಥಿನಿಯರು ಕನಕದಾಸರ ಕುರಿತು ಮಾತನಾಡಿದರು. ಕಾಲೇಜಿನ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
ಸಮೃದ್ದಿ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಭಕ್ತ ಕನಕದಾಸರ ಜಯಂತಿ
ಈ ದಿವಸ ವಾರ್ತೆ
ವಿಜಯಪುರ: ನಗರದ ಡಾ. ರಾಜಕುಮಾರ ಲೇಔಟನಲ್ಲಿರುವ ಸಮೃದ್ದಿ ಶಾಲೆಯ ವಿದ್ಯಾಥಿ ಗಳು ಹಾಗೂ ಶಿಕ್ಷಕವೃಂದದಿಂದ ಸಂತ ಭಕ್ತ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದರು. ಸಂಸ್ಥೆಯ ಮುಖ್ಯಸ್ಥರಾದ ರಮೇಶ ಅವರು ಮಾತನಾಡಿ , ಸಂತ ಭಕ್ತ ಕನಕದಾಸರ ಜೀವನ ಹಾಗೂ ಅವರು ನಡೆದು ಬಂದ ದಾರಿ ಜೀವನದಲ್ಲಿ ಅಳವಡಿಸಿಕೊಂಡ ಮಾನವವೀಯ ಮೌಲ್ಯಗಳನ್ನು ಇಡೀ ಮಾನವ ಕುಲಕೋಟಿಗೆ ಸಾರಿ ಸಾರಿ ಹೇಳಿದ ಮಹಾನ್ ಸಂತ ಎಂದರು.
ಮುಖ್ಯ ಗುರುಮಾತೆ ಶ್ರೀಮತಿ ಕಾಂತಾ ಬಿಂದುರಾವ ಕುಲಕರ್ಣಿ ಮಾತನಾಡಿ ಭಕ್ತ ಕನಕದಾಸರು ಉಡುಪಿಯ ಶ್ರೀ ಕೃಷ್ಣನ ದಶ ನ ಪಡೆದ ಮಹಾನ ಘಟನೆಯನ್ನು ತುಂಬಾ ಸ್ವಾರಸ್ಯಕರವಾಗಿ ಮಕ್ಕಳ ಮನ ಮುಟ್ಟುವಂತೆ ತಿಳಿಸಿದರು. ಶ್ರೀಮತಿ ಸುನಂದಾ ಕುಲಕರ್ಣಿ ಭಾಗವಹಿಸಿದ್ದರು. ಹಾಗೆ ಈ ಒಂದು ಶುಭ ಕಾರ್ಯಕ್ರಮದಲ್ಲಿ ಶ್ರೀಮತಿ ರೇಖಾ ಶಿರೋಳಕರ ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಬಿಳ್ಕೋಡಲಾಯಿತು .
ಈ ಒಂದು ಕಾರ್ಯಕ್ರಮದಲ್ಲಿ ಸಹಶಿಕ್ಷಕಿಯರಾದ ಸವಿತಾ ಭಜಂತ್ರಿ ರೇಖಾ ಶಿರೋಳಕರ , ಅರಚನಾ ಕನಮಡಿ ,ಭವಾನಿ ಪತ್ತಾರ, ಕವಿತಾ ರಾಠೋಡ, ಮಾಧವಿ ಗಡದಾನಿ, ವಿಷಾಲಾಕ್ಷಮಿ ಅಥಣಿ, ಮುಂತಾದವರು ಪಾಲ್ಗೊಂಡಿದ್ದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
Tuesday, November 28, 2023
ಮೂಲ ಜಾನಪದ ಕಲೆಗಳನ್ನು ಪ್ರೊತ್ಸಾಹಿಸಬೇಕು : ಸಿ.ಬಿ.ನಾಟೀಕಾರ
ಇಂದು ನಗರದ ಬಾಲಕೀಯರ ಸರ್ಕಾರಿ ಪದವ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸಂಭ್ರಮ-50 ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದ ಅವರು, ಜನಪದರು ತಮ್ಮ ದೈನಂದಿನ ಬದುಕಿನಲ್ಲಿ ಜಾನಪದ ಸೊಗಡನ್ನು ಮೈಗೂಡಿಸಿಕೊಂಡಿದ್ದು, ಅವುಗಳಲ್ಲಿ ಪ್ರಮುಖವಾಗಿ ಲಾವಣಿ, ಹಂತಿ ಪದ, ಸಂಪ್ರದಾಯ ಪದ ಸೇರಿದಂತೆ ಅನೇಕ ಜಾನಪದ ಕಲೆಗಳೊಂದಿಗೆ ಸ್ವಚ್ಛಂದದ ಬದುಕನ್ನು ರೂಪಿಸಿಕೊಂಡಿದ್ದಾರೆ. ನಮ್ಮ ಜನಪದರ ಇಂತಹ ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಇಂದಿನ ಯುವ ಜನತೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಗುರುತರ ಹಿರಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಾಂಸ್ಕೃತಿಕÀ ನೆಲಗಟ್ಟಿನ ಬೆಸುಗೆ ಬೆಸೆಯುವ ಅತ್ಯಮೂಲ್ಯವಾದ ಕಲೆಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಉಳಿಸಿಕೊಳ್ಳಬೇಕು ನಶಿಸಿ ಹೋಗುತ್ತಿರುವ ಕಲೆಗಳನ್ನು ಮುಂದಿನ ಯುವ ಪೀಳಿಗೆಗೆ ಕೊಂಡೊಯ್ಯಬೇಕು ಯುವ ಜನತೆಯಲ್ಲಿನ ಸೃಜನಾತ್ಮಕ ಕಲೆಗಳ ಪ್ರಸ್ತುತಪಡಿಸಲು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಇಂತಹ ವೇದಿಕೆ ಕಲ್ಪಿಸಿಕೊಡಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಾಟಕಕಾರರಾದ ಡಿ.ಎಚ್ ಕೊಲ್ಹಾರ ಮಾತನಾಡಿ, ಇಂದಿನ ಯುವಕರು ತಾಂತ್ರಿಕತೆಯೊAದಿಗೆ ಯುವಕರು ನಮ್ಮ ಕಲೆ, ಸಂಸ್ಕೃತಿ ಹಾಗೂ ಪಂರಪರೆ ಉಳಿಯುವಿಕೆಗೆ ಇಂತಹ ಕಾರ್ಯಕ್ರಮ ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸಬೇಕು. ನಮ್ಮ ಪೂರ್ವಜರು ಕಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದರು ಈಗಲೂ ಅದು ಮುಂದುವರೆಯಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದ ಮುಂಚೆ ಗಾಂಧೀ ವೃತ್ತದಿಂದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ವರೆಗೆ ಗೊಂಬೆ ಹಾಗೂ ಡೊಳ್ಳು ಕುಣಿತದೊಂದಿಗೆ ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕುಮಾರಿ ರಕ್ಷಂದ ತಿಳಗೊಳ ಅವರಿಂದ ಸುಗಮ ಸಂಗೀತ, ಕುಮಾರಿ ದಿವ್ಯಾ ಭಿಸೆ ಮತ್ತು ದೀಕ್ಷಾ ಭಿಸೆ ಸಮೂಹ ನೃತ್ಯ, ವಿನೋದ ಕಟಗೇರಿ ಜಾನಪದ ಗೀತೆ, ಕುಮಾರಿ ಶುಭನಂ ದಂದರಗಿ ಮತ್ತು ಸಂಗಡಿಗರಿAದ ಕರುಳಿನ ಕೂಗು ನಾಟಕ, ಬಬಲೇಶ್ವರದ ರಾಕೇಶ ಮಾಳಪ್ಪಗೋಳ ಹಾಗೂ ಸಂಗಡಿಗರಿAದ ಗೊಂಬೆ ಕುಣಿತ ಹಾಗೂ ಬಬಲೇಶ್ವರದ ಕಾಶಿಲಿಂಗ ಲೋಕೂರಿ ಅವರಿಂದ ಡೊಳ್ಳು ಕುಣಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ವೇದಿಕೆ ಮೇಲೆ ಉಪನ್ಯಾಸಕಾದ ಎಸ್. ಲೇಸನ್ನವರ, ಮೇತ್ರಿ ಕಲಾವಿದರಾದ ವೀರೇಶ ವಾಲಿ, ಕಾಲಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರದ ಬಿ. ನಾಗರಾಜ ಸ್ವಾಗತಿಸಿ ವಂದಿಸಿದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರ : ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ
ವಿಜಯಪುರ : ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಕಾನೂನು ಬದ್ಧವಾಗಿ ಅಗತ್ಯ ದಾಖಲಾತಿಗಳೊಂದಿಗೆ ದತ್ತು ಸ್ವೀಕಾರ ಕೇಂದ್ರ ಸಂಪರ್ಕಿಸಿ ದತ್ತು ಪಡೆದುಕೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಭವನ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಆಯೋಜಿಸಲಾದ ಅಂತರರಾಷ್ಟಿçÃಯ ದತ್ತು ಮಾಸಾಚರಣೆ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಂಡಿತ ಜವಾಹರಲಾಲ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಜವಾಬ್ದಾರಿ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಸೃಜನಾತ್ಮಕ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು. ಮಕ್ಕಳ ಸುಂದರ ಬಾಲ್ಯವನ್ನು ರೂಪಿಸುವ ಹೊಣೆ ಪ್ರತಿ ಪೋಷಕ-ಪಾಲಕರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರಿಗೆ ದೇಶದ ಆಸ್ತಿಯನ್ನಾಗಿಸಬೇಕು. ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು. ದೇಶದ ಸಂಪದ್ಭರಿತ ಸಂಸ್ಕೃತಿ ಹಿರಿಮೆ ಗರಿಮೆ ಕುರಿತು ಬಾಲ್ಯದಿಂದಲೇ ಮಕ್ಕಳಲ್ಲಿ ಬೆಳೆಸಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟಲು ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಅರಿವು ಮತ್ತು ಜಾಗೃತಿ ಅಭಿಯಾನ ಹಲವು ಇಲಾಖೆಗಳ ಮೂಲಕ ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರತಿಯೊಬ್ಬರು ಆದ್ಯತೆ ನೀಡಬೇಕು. ಹೆಣ್ಣು-ಗಂಡು ಎಂಬ ಭೇಧ ಮಾಡದೇ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಸರ್ಕಾರವು ಸಹ ಹಲವು ಯೋಜನೆಗಳನ್ನು ಜಾರಿಗೊಳಿಸಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಮಕ್ಕಳ ಕಲ್ಯಾಣಕ್ಕಾಗಿ, ಹಕ್ಕಳ ಹಕ್ಕುಗಳ ರಕ್ಷಣೆಗಾಗಿ ವಿವಿಧ ಸಂಘ-ಸAಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಕಾನೂನಾತ್ಮಕ ದತ್ತು ಪ್ರಕ್ರಿಯೆ ಸಾರ್ವಜನಿಕರು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ. ಬಾಲ ನ್ಯಾಯ ಕಾಯ್ದೆ 2015 ಸೆಕ್ಷನ್ 81ರನ್ವಯ 5 ವರ್ಷಗಳವರೆಗೆ ಸೆರೆಮನೆ ವಾಸದೊಂದಿಗೆ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾಗಿದ್ದಲ್ಲಿ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ ಮಾಡಬಹುದಾಗಿದ್ದು, ಕಾನೂನು ಬಾಹಿರವಾಗಿ ಮಕ್ಕಳನ್ನು ಸಾಕಿಕೊಳ್ಳುವುದು ಅಥವಾ ಮಾರಾಟ ಮಾಡುವುದು ಕಂಡು ಬಂದಲ್ಲಿ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಅವರು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಇಂಡಿಯಾ ವರ್ಲ್ಡ ರೆಕಾರ್ಡ್ ಪ್ರಶಸ್ತಿ ಪಡೆದ ಯಂಗ್ ಸೂಪರ್ ಟ್ಯಾಲೆಂಟೆಡ್ ಧಿತಿ ಹಣಮಂತ ಶಿರಶ್ಯಾಡ ಅವರಿಗೆ ಸನ್ಮಾನಿಸಲಾಯಿತು. 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಾಲಮಂದಿರದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ವಿಕಲಚೇತನರ ಅಧಿಕಾರಿ ರಾಜಶೇಖರ ಧೈವಾಡಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಬಸವರಾಜ ಜಗಳೂರ, ವಿಜಯಪುರ ಗ್ರಾಮೀಣ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮ್ಯಾಗೇರಿ, ನಗರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ದೀಪಾಕ್ಷಿ ಜಾನಕಿ, ಚಡಚಣ ಶಿಶು ಅಭಿವೃದ್ದಿ ಯೋಜನಾಧಿಕಾರಿ ಅನೀಲ, ಮುದ್ದೇಬಿಹಾಳ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಉಪಸ್ಥಿತರಿದ್ದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
ಡಾ.ಬಾಬುರಾಜೇಂದ್ರ ನಾಯಿಕ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ವಿಜಯಪುರ: ನಗರದ ವೈದ್ಯ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರ ಆಶ್ರಯದಲ್ಲಿ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಹಮ್ಮಿಕೊಂಡ 68 ನೇ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವೈದ್ಯಕೀಯ ಕ್ಷೇತ್ರದ ಸಾಧನೆಗೆ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಸ್ಟೀಸ್ ಸಂತೋಷಕುಮಾರ ಹೆಗಡೆ, ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಡಾ.ಸಿ ಎನ್ ಮಂಜುನಾಥ್, ನಿವೃತ್ತ ಪೊಲೀಸ್ ಅಧಿಕಾರಿ ಟೈಗರ್ ಅಶೋಕ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದ ಸಂಘಟಕರು ಶ್ರವಣ ಲಕ್ಷ್ಮಣ ಹಾಗೂ ಇನ್ನಿತರ ಪ್ರಮುಖರು ಇದ್ದರು.