Tuesday, December 26, 2023

ಸಚಿವ ಸತೀಶ ಜಾರಕಿಹೊಳಿ ಅವರಿಂದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಶೀಘ್ರವೇ ಕಾಮಗಾರಿ ಪೂರ್ಣಗೊಂಡು ವಿಮಾನಗಳ ಹಾರಾಟದ ಭರವಸೆ


ವಿಜಯಪುರ : ವಿಜಯಪುರ ನಗರದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಲೋಕೋಪಯೋಗಿ ಖಾತೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಟರ್ಮಿನಲ್ ಕಟ್ಟಡ, ನಿಲ್ದಾಣದ ರನವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿAಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕಾö್ಯನರ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಳು ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಡರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವುದನ್ನು ಒಳಗೊಂಡAತೆ ಎಲ್ಲ ಭೌತಿಕ ಕಾಮಗಾರಿಗಳು ಶೇ.90ರಷ್ಟು ಪೂರ್ಣಗೊಂಡಿದ್ದು, ಶೀಘ್ರವೇ ಎಲ್ಲ ಕಾಮಗಾರಿಗಳು ಪೂರ್ಣಗೊಂಡು ವಿಮಾನಗಳ ಹಾರಾಟ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಜನವರಿಯಲ್ಲಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ (ಡಿಜಿಸಿಎ) ಪರಿವೀಕ್ಷಣೆಗೆ ಆಗಮಿಸಿ ಪರಿವೀಕ್ಷಣೆ ನಡೆಸಲಿದ್ದಾರೆ ಎಂದು ಅವರು ಹೇಳಿದರು. 

ನೈಟ್ ಲ್ಯಾಂಡಿAಗ್ ವ್ಯವಸ್ಥೆ ಸೇರಿದಂತೆ ಬಾಕಿ ಇರುವ ಎಲ್ಲ ಲೋಕೋಪಯೋಗಿ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕೈಗೊಂಡು ಪೂರ್ಣಗೊಳಿಸಲು ಸೂಚಿಸಲಾಗಿದೆ. ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದ ನಂತರ ಈ ಭಾಗದ ಸರ್ವಾಂಗೀಣ ಬೆಳವಣಿಗೆಗೆ ಅನುಕೂಲವಾಗಲಿದ್ದು, ವಿಮಾನಗಳ ಹಾರಾಟದಿಂದ ಸಮಯದ ಉಳಿತಾಯದೊಂದಿಗೆÀ ಪ್ರಮುಖ ವಾಣಿಜ್ಯ ಬೆಳೆಯಾದ ದ್ರಾಕ್ಷಿ ಸೇರಿದಂತೆ ಇತರ ಕೃಷಿ ಉತ್ಪನ್ನಗಳ ರಫ್ತಿಗೂ ಅನುಕೂಲವಾಗಲಿದೆ. ವ್ಯಾಪಾರ ವಹಿವಾಟಕ್ಕೂ ಉತ್ತೇಜನ ದೊರೆಯಲಿದ್ದು, ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು. 

ಎರಡನೇ ಹಂತದ 125.00 ಕೋಟಿ ರೂ.ಗಳಲ್ಲಿ ಪುನ: ಎರಡು ಉಪ ಕಾಮಗಾರಿಗಳಾಗಿ ವಿಂಗಡಿಸಲಾಗಿದೆ. ಸಿವಿಲ್ ಕಾಮಗಾರಿಗಾಗಿ 105.60 ಕೋಟಿ ರೂ.ಗಳು ಹಾಗೂ ಏವಿಯೋನಿಕ್ಸ/ಸೆಕ್ಯೂರಿಟಿ ಉಪಕರಣಳ ಕಾಮಗಾರಿಗಾಗಿ 19.40 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಈ ಸಿವಿಲ್ ಕಾಮಗಾರಿಯು 105.60. ಕೋಟಿಗಳಲ್ಲಿ 86.20 ಕೋಟಿಗಳ ಮೊತ್ತದಲ್ಲಿ ಟರ್ಮಿನಲ್ ಕಟ್ಟಡ, ಎಟಿಸಿ ಟಾವರ್, ಸಿ.ಎಪ್.ಆರ್. ಕಟ್ಟಡ, ಕಂಪೌAಡ್ ಗೋಡೆ ಹಾಗೂ ಇತರೆ ಕಾಮಗಾರಿಗಳನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದು ಅವರು ಹೇಳಿದರು. 

ಸಿವಿಲ್ ಉಪಕಾಮಗಾರಿಗಳಲ್ಲಿ ಉಳಿದ ಮೊತ್ತ 19.40 ಕೋಟಿಗಳಲ್ಲಿ ವಿವಿಧ ಉಪಕಾಮಗಾರಿಗಳಿದ್ದು, ಮೊದಲನೇಯದಾಗಿ ರೂ.1.39 ಕೋಟಿ ಮೊತ್ತದಲ್ಲಿ ವಿಮಾನ ನಿಲ್ದಾಣ ಆವರಣದಲ್ಲಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವುದನ್ನು ಪರಿಗಣಿಸಲಾಗಿದ್ದು ಕಾಮಗಾರಿ ಪೂರ್ಣಗೊಂಡಿದೆ. 5.94 ಕೋಟಿ ರೂ. ಮೊತ್ತದಲ್ಲಿ ವಿಮಾನ ನಿಲ್ದಾಣಕ್ಕೆ 24/7 ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ. 3.65 ಕೋಟಿ ರೂ. ಮೊತ್ತದ ವಿಮಾನ ನಿಲ್ದಾಣಕ್ಕೆ 2000 ಕಿ.ಲೋ.ವ್ಯಾಟ್ ನಿರಂತರ ವಿದ್ಯುತ್ ಸರಬರಾಜು ಕಾಮಗಾರಿ ಪ್ರಗತಿಯಲ್ಲಿದ್ದು, ಉಳಿದ ಮೊತ್ತದ ಕಾಮಗಾರಿಯ ಮೇಲ್ವಿಚಾರಣೆ ಮಾಡುವ ತಾಂತ್ರಿಕ ಸಂಸ್ಥೆಗೆ ಶುಲ್ಕ ಪಾವತಿ ಮಾಡುವುದು ಹಾಗೂ ಇತರೆ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ, ಸಿ.ಎಸ್.ನಾಡಗೌಡ, ಅಶೋಕ ಮನಗೂಳಿ, ಮಾಜಿ ಶಾಸಕ ರಾಜು ಆಲಗೂರ, ಲೋಕೋಪಯೋಗಿ ಇಲಾಖೆಯ ಧಾರವಾಡ ಉತ್ತರ ವಲಯದ ಮುಖ್ಯ ಅಭಿಯಂತರ ಎಚ್.ಸುರೇಶ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಕಾರ್ಯನಿರ್ವಾಹಕ ಅಭಿಯಂತರ ರಾಜುಕೃಷ್ಣ ಮುಜುಮದಾರ, ಗುತ್ತಿಗೆದಾರ ಎಸ್.ಎಸ್.ಆಲೂರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎA.ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

27-12-2023 EE DIVASA KANNADA DAILY NEWS PAPER

Monday, December 25, 2023

ವ್ಯವಸ್ಥೆ ಹಾಳು ಮಾಡುವ ಹುನ್ನಾರ ನಡೆಯದು; ಶಾಸಕ ಯತ್ನಾಳ

 


ಈ ದಿವಸ ವಾರ್ತೆ

ವಿಜಯಪುರ: ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುಗಮ ಸಂಚಾರ, ಸ್ವಚ್ಛತೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೆಲವರು ವ್ಯವಸ್ಥೆ ಕೆಡಿಸುವ ಹುನ್ನಾರ ನಡೆಸಿದ್ದು, ಯಾವುದೇ ಕಾರಣಕ್ಕೂ ಅದು ನಡೆಯದು ಎಂದು ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಹೇಳಿದರು.

ನಗರದಲ್ಲಿ ಸೋಮವಾರ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆಯಲ್ಲಿನ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಬೀದಿ ದೀಪ ಅಳವಡಿಕೆ ಮಾಡಲಾಗಿದೆ, ಸ್ವಚ್ಛತೆಗೂ ಆದ್ಯತೆ ನೀಡಲಾಗಿದೆ. ದೇಶದಲ್ಲಿ ವಿಜಯಪುರ ಅತ್ಯುತ್ತಮ ವಾತಾರಣ ನಗರಗಳ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿರುವುದೇ ಸಾಕ್ಷಿ ಎಂದು ತಿಳಿಸಿದರು.

ಮುಂದೆ ಕೂಡ ಸ್ವಚ್ಛತೆಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಲು, ಪ್ರತಿ ನಾಲ್ಕೈದು ಅಂಗಡಿಗಳ ಮಧ್ಯ ಕಸದ ಡಬ್ಬಿ ಇಟ್ಟು, ಎರಡು ದಿನಕ್ಕೊಮ್ಮೆ ತೆಗೆದುಕೊಂಡು ಹೋಗಲು ಪಾಲಿಕೆ ಅಧಿಕಾರಿಗಳಿಗೆ ತಿಳಿಸಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ, ಸೂಕ್ತವಾದ ನಿಗದಿತ ಸ್ಥಳಾವಕಾಶ ಕಲ್ಪಿಸಿ, ಅಂಗಡಿಕಾರರಿಗೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಸುಮಾರು 35 ಕಡೆ ಕಾಯಿಪಲ್ಲೆ ಮಾರುಕಟ್ಟೆ ಮಾಡಿದ್ದರಿಂದ ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆ ಆಗಿದ್ದು, ಸಂಚಾರಕ್ಕೆ ಅಡೆತಡೆ ಆಗುತ್ತಿಲ್ಲ. ನಗರದ ಸುತ್ತಮುತ್ತಲಿನ ರೈತರು ಕಾಯಿಪಲ್ಲೆ ಮಾರಾಟ ಮಾಡಲು ಹಾಗೂ ಸಾರ್ವಜನಿಕರಿಗೆ ತಾಜಾ ಮತ್ತು ಸಮೀಪಲ್ಲೇ ಕಾಯಿಪಲ್ಲೆ ಸಿಗುವಂತಾಗಿದೆ ಎಂದು ಹೇಳಿದರು.

ಬಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಗೋಕುಲ ಮಹಿಂದ್ರಕರ ಮಾತನಾಡಿ, ಶಾಸಕ ಬಸನಗೌಡ ಪಾಟೀಲ ಯತ್ನಾಳರ ಅಭಿವೃದ್ಧಿ ಕಾಳಜಿಯಿಂದ ನಿರೀಕ್ಷೆ ಮೀರಿ ನಗರದ ಅಭಿವೃದ್ಧಿಗೊಂಡಿದೆ. ಕ್ರಮೇಣ ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಅದಕ್ಕೆ ಅನುಗುಣವಾಗಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರ ಸಂಚಾರಕ್ಕೆ ಅಡೆತಡೆ ಆಗುವುದನ್ನು ಸರಿಪಡಿಸಬೇಕು. ಬೀದಿ ಬದಿ ವ್ಯಾಪಾರಿಗಳಿಂದ ಅಂಗಡಿಕಾರರಿಗೆ ಆಗುತ್ತಿರುವ ಸಮಸ್ಯೆ ಸರಿಪಡಿಸಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

ಮಹಾನಗರ ಪಾಲಿಕೆ ಸದಸ್ಯರು, ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು, ವ್ಯಾಪಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, December 24, 2023

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ವಿಷಯದ ಫೊನ್ ಇನ್ ಕಾರ್ಯಕ್ರಮ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡ ವಿದ್ಯಾರ್ಥಿಗಳು : ಡಿಡಿಪಿಐ


ಈ ದಿವಸ ವಾರ್ತೆ

ವಿಜಯಪುರ: ಇಂಗ್ಲೀಷ್ ವಿಷಯದ ವ್ಯಾಕರಣ ಮತ್ತು ಪತ್ರಲೇಖನ ಪ್ಯಾರಾಗ್ರಾಫ್, ಪ್ರಬಂಧ ಬರವಣ ಗೆ ಹಾಗೂ ವಿಷಯ ಕರಗತ ಮಾಡಿಕೊಳ್ಳುವುದೂ ಸೇರಿದಂತೆ ತಮ್ಮ ಶೈಕ್ಷಣ ಕ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಸಂಪನ್ಮೂಲ ಶಿಕ್ಷಕರಿಂದ ಪರಿಹಾರ ಪಡೆದುಕೊಂಡರು. ಶಿಕ್ಷಕರು ವಿಷಯ ಸಮಸ್ಯೆ ಸೂಚಿಸುವುದರ ಜೊತೆಗೆ ಆತ್ಮವಿಶ್ವಾಸದ ಪಾಠ ಮಾಡಲಾಯಿತು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರ ತಿಳಿಸಿದ್ದಾರೆ. 

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಜಿಲ್ಲೆಯ ಎಸ್ಸೆಸ್ಸೆಲ್ಸಿಯ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಸಂಜೆ 6 ರಿಂದ ರಾತ್ರಿ 8.30ರವರೆಗೆ ಇಂಗ್ಲೀಷ್ ವಿಷಯದ ಕುರಿತಾಗಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ 2 ಗಂಟೆಗಳ ಅವಧಿಯಲ್ಲಿ 325 ವಿದ್ಯಾರ್ಥಿಗಳು ಕೇಳಿದ 458 ಪ್ರಶ್ನೆಗಳಿಗೆ ವಿಷಯ ಶಿಕ್ಷಕರು ಪರಿಹಾರ ಸೂಚಿಸಿದರು.

ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಂದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಹಂಬಲ ಹೆಚ್ಚಾಗುತ್ತಿದೆ. ಕೆಲ ಸಣ್ಣ ಪುಟ್ಟ ಸಮಸ್ಯೆಗಳಿಗೆ ಪರಿಹಾರ ಬೋಧನೆಯಿಂದ ಮತ್ತಷ್ಟು ವಿಷಯ ಕರಗತವಾಗಿ ಅವರ ಕಲಿಕಾ ಮಟ್ಟ ಹೆಚ್ಚಾಗುತ್ತದೆ. ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಯಶಸ್ವಿ ಕಾರ್ಯಕ್ರಮವೆನಿಸಿದೆ. ಈಗಾಗಲೇ ವಿಜ್ಞಾನ ವಿಷಯದಲ್ಲಿ 438, ಗಣ ತದಲ್ಲಿ 425 ವಿದ್ಯಾರ್ಥಿಗಳು ಫೋನ್ ಇನ್ ಕಾರ್ಯಕ್ರಮದ ಮೂಲಕ ತಮ್ಮ ಸಮಸ್ಯಗೆಳಿಗೆ ಪರಿಹಾರ ಕಂಡುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಈ ಕಾರ್ಯಕ್ರಮದಲ್ಲಿ ಪಿ. ಕುಂಬಾರ್, ಆರ್. ವಿ. ಕುಲಕಣ ð ಶ್ರೀಮತಿ ಆರ್.ಎಸ್.ಕೊರೆಗೊಳ್, ಎಸ್.ಎ ಕಮತಗಿ, ಪಿ. ಬಿ. ಕುಲಕಣ ð, ವಿ. ಎಸ್. ಬಶೆಟ್ಟಿ, ಪಿ. ಎಮ್ ಪಾಟೀಲ್ ಹಾಗೂ ಎಸ್.ವೈ ನಾಯಕ ಅವರೂ ಸೇರಿದಂತೆ 9 ಜನ ಶಿಕ್ಷಕರು ಇಂಗ್ಲೀಷ್ ವಿಷಯದ ಸಂಪನ್ಮೂಲ ವ್ಯಕ್ತಿಗಳು, ಹಾಗೂ ಇಂಗ್ಲೀಷ್ ವಿಷಯದ ಫೋನ್ ಇನ್ ಕಾರ್ಯಕ್ರಮದ ಸಂಯೋಜಕರೂ ಆದ ಬಸವನ ಬಾಗೇವಾಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ,ಇಂಗ್ಲೀಷ್ ವಿಷಯ ಪರಿವೀಕಕ್ಷರಾದ ಪಿ.ಕೆ.ರಾದಾರ, ವಿಜ್ಞಾನ ವಿಷಯ ಪರಿವೀಕ್ಷಕರಾದ ಎಸ್.ಎಸ್. ತಳ್ಳಳ್ಳಿ, ಉರ್ದು ಶಿಕ್ಷಣ ಸಂಯೋಜಕರಾದ ಝಡ್.ಎ.ಸತಾರೇಕರ, ಬಸವರಾಜ ನಾಗೂರ ಸೇರಿದಂತೆ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.