Sunday, January 14, 2024

ವಿಜಯಪುರ ಜಿಲ್ಲೆಯ ಶ್ರೀ ಶ್ರೀ ಪೂಜ್ಯ ಗೋಪಾಲ ನಂದುಲಾಲ ಮಹಾರಾಜಗೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರೋಹಣ ಕಾರ್ಯಕ್ರಮಕ್ಕೆ ಆಹ್ವಾನ


ವಿಜಯಪುರ: ದಿನಾಂಕ : 22-01-2024 ರಂದು ಅಯೋಧ್ಯಾದಲ್ಲಿನ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಲ್ಲಿ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರೋಹಣಕ್ಕೆ ವಿಜಯಪುರ ಜಿಲ್ಲೆಯಿಂದ ಶ್ರೀ ಪೂಜ್ಯ ಗೋಪಾಲ ನಂದುಲಾಲ ಮಹಾರಾಜ ಅವರನ್ನು ಆಹ್ವಾಸಲಾಗಿದೆ. 

ಈ ಸಂದರ್ಭ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಬಂಜಾರ ಸಮಾಜಕ್ಕೂ ಪ್ರಾತಿನಿಧ್ಯ ನೀಡಿ ಆಹ್ವಾನ ನೀಡಿದ್ದು ಖುಷಿಯ ಸಂಗತಿ. ರಾಮ ಮಂದಿರದ ಟ್ರಸ್ಟ್ ಸಮಿತಿಯವರಿಗೆ ಗೌರವಪೂರ್ವಕವಾಗಿ ಕೃತಜ್ಞತೆಗಳನ್ನು ಸಲ್ಲಿಸುವೆ. ವಿಜಯಪುರ ಜಿಲ್ಲೆಯ ತೊರವಿ ತಾಂಡಾ ಎಲ್.ಟಿ.ನಂ.1 ರಿಂದ ಅಯೋಧ್ಯೆಗೆ ಹೋಗುತ್ತಿರುವುದು ನನ್ನ ಸೌಭಾಗ್ಯ. ಸಂತ ಸೇವಾಲಾಲ ಮಹಾರಾಜರ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆಶೀರ್ವಾದವೇ ಕಾರಣ ಎನ್ನಲು ಹೆಮ್ಮೆ ಎನಿಸುತ್ತಿದೆ. ಶ್ರೀ ರಾಮನ ದರ್ಶನಕ್ಕೆ ನಾನೂ ಕಾತರನಾಗಿದ್ದೇನೆ. ಸಮಸ್ತ ರಾಮ ಭಕ್ತರಿಗೆಲ್ಲರಿಗೂ ಮನಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಋಷಿ ಆನಂದ ಅಧಿಕಾರ ಸ್ವೀಕಾರ

 


ಈ ದಿವಸ ವಾರ್ತೆ

ವಿಜಯಪುರ : ವಿಜಯಪುರ ಜಿಲ್ಲಾ ಪಂಚಾಯತಿಯ ನೂತನ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಋಷಿ ಆನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ಶಿಂಧೆ ಅವರು ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಂಡಿರುವುದರಿಂದ ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹುದ್ದೆಗೆ ಋಷಿ ಆನಂದ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.

ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹುದ್ದೆಗೆ ವರ್ಗಾವಣೆಗೊಂಡು ಆಗಮಿಸಿದ ಋಷಿ ಆನಂದ ಅವರನ್ನು ನಿರ್ಗಮಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೇರಿದಂತೆ ಜಿಲ್ಲಾ ಪಂಚಾಯತಿಯ ವಿವಿಧ ಅಧಿಕಾರಿಗಳು, ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Saturday, January 13, 2024

ಸಮೃದ್ಧಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ವಿಜಯಪುರ: ನಗರದ ಡಾ|| ರಾಜಕುಮಾರ ಲೇಔಟನಲ್ಲಿರುವ ಸಮೃದ್ದಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದಿAದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ವಿಜೃಂಭಣೆಯಿAದ ಆಚರಿಸಿದರು. ಸಂಸ್ಥೆಯ ಮುಖ್ಯಸ್ಥ ರಮೇಶ ಮಾತನಾಡಿ, ವಿಶ್ವ ಕಂಡ ಅಪರೂಪದ ಮಹಾನ್ ಚೇತನ, ಇಡೀ ವಿಶ್ವವೇ ಭಾರತದತ್ತ ಕಣ್ಣು ತೆರೆದುನೋಡುವಂತೆ ಮಾಡಿದ ಮಹಾನ್ ಶಕ್ತಿ ಸ್ವಾಮಿ ವಿವೇಕಾನಂದರು ಎಂದು ಹೇಳಿದರು. 
ಇದೇ ಸಂದರ್ಭದಲ್ಲಿ ಮುಖ್ಯ ಗುರುಮಾತೆ ಶ್ರೀಮತಿ ಕಾಂತಾ ಬಿಂದುರಾವ ಕುಲಕರ್ಣಿ ಮಾತನಾಡಿದರು. ಈ ಒಂದು ಕಾರ್ಯಕ್ರಮದಲ್ಲಿ ಶ್ರೀಮತಿ ಸವಿತಾ ಭಜಂತ್ರಿ, ಶ್ರಿಮತಿ ಪರಿಮಳಾ ಕುಲಕರ್ಣಿ, ಶ್ರಿದೇವಿ ಶಿಂದೆ, ಜ್ಯೊತಿ ಬಸರಗಿ, ಅರಚನಾ ಕನಮಡಿ, ಕವಿತಾ ರಾಠೋಡ, ಭವಾನಿ ದೊಡ್ಡ ಪತ್ತಾರ, ವಿಶಾಲಾಕ್ಷಿ ಅಥಣಿ ಮುಂತಾದವರು ಪಾಲ್ಗೋಂಡಿದ್ದರು.

Wednesday, January 10, 2024

11-01-2024 EE DIVASA KANNADA DAILY NEWS PAPER

ಭಾರತದ ಇತಿಹಾಸದಲ್ಲೇ ಯಾವ ಸರ್ಕಾರವೂ ಇಷ್ಟು ದೊಡ್ಡ ಜನೋಪಯೋಗಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ: ಸಿಎಂ

 

ಬೆಂಗಳೂರು : ನಾವು ಸತ್ಯ ಹೇಳಿ  ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ  ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರ ಸಭೆಯಲ್ಲಿ ಅವರು ಮಾತನಾಡಿದರು.

ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರುಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು.  ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿಗಳನ್ನು ಕಾರ್ಯಕ್ರಮಗಳನ್ನು  ಜಾರಿ ಮಾಡಿಲ್ಲ. ಇದರಿಂದ  ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು , ಹಿಂದುಳಿದವರು , ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು. 

*ನಮ್ಮವರೇ ಅಪಪ್ರಚಾರ ಮಾಡುವುದನ್ನು ಬಿಡಬೇಕು.*

ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಿ. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು  ಹಣವಿಲ್ಲದೆ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದ ಸಿಎಂ, ನಮ್ಮವರೇ ಬಿಜೆಪಿಯವರ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು.  ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ ಎಂದರು.

*ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ  ತೊಂದರೆಯಾಗಿಲ್ಲ*

ಗ್ಯಾರಂಟಿ ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತಿತ್ತು. ರಾಜ್ಯದ 223 ತಾಲ್ಲೂಕುಗಳು  ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತೊಂದರೆಯಾಗಿಲ್ಲ ಎಂದರು.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ  ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಅಮಿತ್ ಷಾ ಅವರನ್ನು  ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2000 ರೂ ವರೆಗೆ  ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ಪ್ರಾರಂಭಿಸಲಾಗಿದೆ ಎಂದರು.

ಬಿಜೆಪಿಯವರು ಬರಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇವರಿಗೆ ಮರ್ಯಾದೆ ಇದೆಯೇ. 25 ಸಂಸದರು ರಾಜ್ಯದಿಂದ ಇದ್ದರೂ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15 ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆ ಮಾಡಿದರು. 1ಲಕ್ಷ  66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ  ಎಂದು ಪ್ರಶ್ನಿಸಿದರು. 2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು . 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ ಎಂದರು.
ಸೆಸ್ , ಸರ್ಚಾರ್ಜ್, ನಲ್ಲಿ ನಮಗೆ ಪಾಲಿಲ್ಲ. 4 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯದಿಂದ ಸಂಗ್ರಹ ಮಾಡುತ್ತಾರೆ. 52 ಸಾವಿರ ಕೋಟಿ ರೂ ಗಳನ್ನು ಮಾತ್ರ ಕೊಡುತ್ತಾರೆ. ಎಲ್ಲಾ ಶಾಸಕರು, ಸಂಸದರು ಇದನ್ನು ಹೇಳಬೇಕು. ಈ 10 ವರ್ಷಗಳಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಜಿಎಸ್ ಟಿ ಯಿಂದಾಗುವ  ನಷ್ಟವನ್ನು ಭರಿಸುವುದಾಗಿ ಹೇಳಿದ್ದರೂ, ನಮಗೆ ಹಣವನ್ನು ಕೊಟ್ಟಿಲ್ಲ.  ರಾಜ್ಯದ  ಸಂಸದರೂ  ತುಟಿ ಪಿಟಕ್ಕೆನ್ನದೇ ಇದ್ದಾರೆ ಎಂದರು. ಆರ್ಥಿಕವಾಗಿ ಸ್ವಲ್ಪ ಭಾರವಾದರೂ ಗ್ಯಾರಂಟಿಗಳು ಜನರಿಗೆ ಮುಂದಿನ ದಿನಗಳಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುತ್ತದೆ ಎಂದರು.

*ಪಟ್ಟಿ ಕಳಿಸಿ*
ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ  ಕಳಿಸಿಕೊಟ್ಟು ಇದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ತಲುಪಿಸಬೇಕು  ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಮೃದ್ಧಿ ಶಾಲೆಗೆ ಪ್ರಿಂಟರ್ ದೇಣಿಗೆ

ವಿಜಯಪುರ : ನಗರದ ರಾಜಕುಮಾರ ಲೇಔಟನಲ್ಲಿರುವ ಸಮೃದ್ಧಿ ಶಾಲೆಯಲ್ಲಿ ಇಂದು ಶೇಠ್ ತಾಪಿದಾಸ ತುಳಸಿದಾಸ ಮತ್ತು ವೈಜದಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ರೂ. 20000 ಮೊತ್ತದ ಪ್ರಿಂಟರ್ ಅನ್ನು ಉಚಿತವಾಗಿ ನೀಡಿದರು. ಸಂಸ್ಥೆಯ ಸಮನ್ವಯಾಧಿಕಾರಿ ಶ್ರೀಯುತ ವಿಶ್ವನಾಥ .ಎಮ್. ಸಿಂದಗಿ ಸಮೃದ್ಧಿ ಶಾಲೆಯಲ್ಲಿ ಪ್ರಿಂಟರ್ ನ್ನು ಉದ್ಘಾಟಿಸಿ ಮಾತನಾಡಿ ಈ ಒಂದು ಪ್ರಿಂಟರನ್ನು ಮಕ್ಕಳ ಉದಯೋನ್ಮುಖ ಬೆಳವಣಿಗೆಗೆ ಉಪಯೋಗಿಸಿಕೊಳ್ಳಲು ಸಲಹೆ ನೀಡಿದರು. 

ಮುಖ್ಯ ಅಥಿತಿಗಳಾದ ಶ್ರೀಯುತ ಅಂಬಾದಾಸ ಜೋಷಿ ಅವರು ಮಾತನಾಡಿ ಇಂದಿನ ತಾಂತ್ರಿಕ ಯುಗದಲ್ಲಿ ಮಹಾನ್ ದಾನಿಗಳ ಕೊಡುಗೆಯನ್ನು ಶ್ಲಾಘಿಸಿದರು.

ಈ ಒಂದು ಕಾರ್ಯಕ್ರಮದಲ್ಲಿ ಸಂಸ್ಥೆಯಮುಖ್ಯಸ್ಥರಾದ ಶ್ರಿಯುತ ರಮೇಶರವರು ಮುಖ್ಯ ಗುರುಮಾತೆ ಕಾಂತಾ ಬಿ ಕುಲಕರಣಿ, ಶ್ರೀಮತಿ ಸವಿತಾ ಭಜಂತ್ರಿ , ಶ್ರೀಮತಿ ಶ್ರೀದೇವಿ ಶಿಂದೆ , ಶ್ರೀಮತಿ ಪರಿಮಳಾ ಕುಲಕರಣಿ, ಶ್ರೀಮತಿ ಜ್ಯೋತಿ ಬಸರಗಿ , ಶ್ರೀಮತಿ ಅರಚನಾ ಕನಮಡಿ ,ಶ್ರೀಮತಿ ಕವಿತಾ ರಾಠೋಡ , ಶ್ರೀಮತಿ ಭವಾನಿ ದೊಡ್ಡ ಪತ್ತಾರ, ಶ್ರೀಮತಿ ವಿಶಾಲಾಕ್ಷಿ ಅಥಣಿ ಮುಂತಾದವರು ಪಾಲ್ಗೊಂಡಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.