Wednesday, April 24, 2024

25-04-2024 EE DIVASA KANNADA DAILY NEWS PAPER

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಶ್ರೀಶೈಲ ಮುಳಜಿ ನೇಮಕ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ವಿಜಯಪರ ನಗರದ ಯುವ ನ್ಯಾಯವಾದಿ ಹಾಗೂ ಹೋರಾಟಗಾರ ಶ್ರೀಶೈಲ ಮುಳಜಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಆದೇಶ ಹೊರಡಿಸಿದ್ದಾರೆ.

ಶ್ರೀಶೈಲ ಮುಳಜಿ ಅವರು ಕನ್ನಡಪರ, ಜನಪರ ಚಳುವಳಿಯಲ್ಲಿ ಹಲವಾರು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಶ್ರೀಶೈಲಮುಳಜಿಯವರು ಕರ್ನಾಟಕ ರಕ್ಷಣಾ ವೇದಿಕೆಯ ತತ್ವ-ಸಿದ್ಧಾಂತ ಮತ್ತು ನೀತಿ-ನಿಯಮಗಳನ್ನು ಒಪ್ಪಿ ಬಸವಾದಿ ಶರಣರ ನೆಲವಾದ ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯನ್ನು ಬಲಪಡಿಸಲು ಮುಂದೆ ಬಂದಿದ್ದಾರೆ. ಮುಳಜಿಯವರ ಕನ್ನಡಪರವಾದ ಕೆಲಸವನ್ನು ಮೆಚ್ಚಿ ವಿಜಯಪುರ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಈ ನೇಮಕಾತಿ ಪತ್ರವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶ್ರೀಯುತರಿಗೆ ನೀಡಿರುವ ಈ ಗುರುತರ ಜವಾಬ್ದಾರಿಯನ್ನು ಅತ್ಯಂತ ಶ್ರದ್ದೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ 'ಸಮಗ್ರ ಕರ್ನಾಟಕದ ಅಭಿವೃದ್ಧಿಯೇ ನಮ್ಮ ಗುರಿ' ಎಂಬ ಕರ್ನಾಟಕ ರಕ್ಷಣಾ ವೇದಿಕೆಯ ಉದ್ದೇಶವನ್ನು ಈಡೇರಿಸಲಿದ್ದಾರೆಂದು ನೇಮಕ ಪತ್ರದಲ್ಲಿ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, April 22, 2024

23-04-2024 EE DIVASA KANNADA DAILY NEWS PAPER

ಲೋಕಸಭಾ ಚುನಾವಣೆ 2024 ಅಂತಿಮ ಕಣದಲ್ಲಿ 8 ಅಭ್ಯರ್ಥಿಗಳು

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಗಿದ್ದು, ಒಟ್ಟಾರೆ 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಳ್ಳುವ ಮೂಲಕ ಅಂತಿಮ ಕಣದಲ್ಲಿ  8 ಅಭ್ಯರ್ಥಿಗಳು ಇದ್ದಾರೆ. 

ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ, ಹಾಗೂ ಬಾಬುರಾಜೇಂದ್ರ ನಾಯಿಕ, ಭಾರತೀಯ ಜವಾನ್ ಕಿಸಾನ್ ಪಕ್ಷದ ಕುಲಪ್ಪಾ ಬಿ ಚವ್ಹಾಣ, ಬಿಎಸ್‌ಪಿ ಪಕ್ಷದ ಮಲ್ಲು ಹಾದಿಮನಿ ತಮ್ಮ ಉಮೇದುವಾರಿಕೆಯನ್ನು ಏ.22 ರಂದು ಹಿಂಪಡೆದಿದ್ದಾರೆ. 

ಅಂತಿಮ ಕಣದಲ್ಲಿ ಭಾರತೀಯ ಜನತಾ ಪಕ್ಷದ ರಮೇಶ ಜಿಗಜಿಣಗಿ, ಕಾಂಗ್ರೇಸ್‌ನ ರಾಜು ಆಲಗೂರ, ಕಾರ್ನಾಟಕ ರಾಷ್ಟç ಸಮಿತಿ ಪಕ್ಷದ ಗಣಪತಿ ಲಾಲಸಿಂಗ ರಾಠೋಡ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಪಕ್ಷದ ಜಿತೇಂದ್ರ ಅಶೋಕ ಕಾಂಬ್ಲೆ, ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ನಾಗಜ್ಯೋತಿ. ಬಿ. ಎನ್,  ರಾಷ್ಟಿçಯ ಸಮಾಜ ಪಕ್ಷದ ರಾಜಕುಮಾರ್ ಅಪ್ಪಣಾ ಹೋನ್ನಕಟ್ಟಿ, ನಕಿ ಭಾರತೀಯ ಏಕತಾ ಪಕ್ಷದ ರಾಮಜಿ ಹರಿಜನ್, ಪಕೇತರ ಅಭ್ಯರ್ಥಿ ತಾರಾಬಾಯಿ ಬೋವಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಾಗಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, April 20, 2024

ಬಲಿಷ್ಠ ಹಾಗೂ ಸುಸ್ಥಿರ ದೇಶ ಕಟ್ಟಲು ಮತ ಚಲಾಯಿಸಿ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಿಶಿ ಆನಂದ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ನಾವು ಚಲಾವಣೆ ಮಾಡುವ ಮತ ಬಲಿಷ್ಠ ಹಾಗೂ ಸುಸ್ಥಿರ ದೇಶ ಕಟ್ಟಲು ಸಹಾಯ ಮಾಡುತ್ತದೆ. ಯಾವುದೇ ಆಸೆ ಆಮಿಷಕ್ಕೆ ಬಲಿಯಾಗದೆ ಮತ ಚಲಾಯಿಸಿ ಎಂದು ಜಿಲ್ಲಾ ಸ್ವೀಪ್ ಸಮಿತಿ ಅದ್ಯಕ್ಷರು ಹಾಗೂ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಿಶಿ ಆನಂದ ಹೇಳಿದರು.

ವಿಜಯಪುರ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವಿಜಯಪುರ ಇವರ ಸಹಯೋಗದಲ್ಲಿ ನವ ಸ್ಪೂರ್ತಿ ಸಂಘ, ಮಾಜಿ ದೇವದಾಸಿ ಪುನರ್ವಸತಿ ಯೋಜನೆ, ಏಡ್ಸ್ ಜಾಗೃತಿ ಮಹಿಳಾ ಸಂಘ ವಿಜಯಪುರ ಸಹಯೋಗದಲ್ಲಿ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 “ಮತದಾನ ಜಾಗೃತಿ ಅಭಿಯಾನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾವು ಚುನಾಯಿಸುವ ಜನಪ್ರತಿದಿಗಳು ಆಯ್ಕೆಯಾದ ಮೇಲೆ ಆರೋಗ್ಯ, ಶಿಕ್ಷಣ, ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಯೋಜನೆಗಳನ್ನು ಹಾಕಿಕೊಂಡು ಸಮಾಜದ ಸಮಸ್ಯೆಗಳನ್ನು ನಿವಾರಿಸುತ್ತಾರೆ. ಈ ನಿಟ್ಟಿನಲ್ಲಿ ಸದೃಢ ರಾಷ್ಟç ನಿರ್ಮಾಣಕ್ಕೆ ತೊಡಗಿಸಿ ಕೊಳ್ಳುತ್ತಾರೆ. ಹಾಗಾಗಿ ಎಚ್ಚರಿಕೆ ಹಾಗೂ ಸೂಕ್ತ ರೀತಿಯಲ್ಲಿ ಉತ್ತಮ ಆಡಳಿತ ನಿರ್ಮಾಣ ಮಾಡಲು ಮತ ಚಲಾಯಿಸಿ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿಗಳಾದ ಸಿ. ಆರ್. ಮುಂಡರಗಿ ಮಾತನಾಡಿ, ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮತದಾನ ಮಾಡುವುದೂ ಸಹ ನಿಮ್ಮೆಲ್ಲರ ಹಕ್ಕು. ಮತದಾನದಲ್ಲಿ ಸಣ್ಣ ವ್ಯಕ್ತಿ ಹಾಗೂ ದೊಡ್ಡ ವ್ಯಕ್ತಿ ಎಂದು ವ್ಯತ್ಯಾಸ ಇಲ್ಲ. ಎಲ್ಲರ ಮತದಾನವು ಸಮಾನವಾಗಿರುತ್ತದೆ. ಮತಗಟ್ಟೆಗಳಲ್ಲಿ ಸಾರ್ವಜನಿಕರಿಗೆ ಎಲ್ಲ ಮೂಲಭೂತ ಸೌಲಭ್ಯಗಳಾದ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಸರತಿ ಸಾಲಿನ ವ್ಯವಸ್ಥೆ, ಹಿರಿಯ ನಾಗರಿಕರಿಗೆ ಆದ್ತೆ ನೀಡುವುದು, ವಿಶೇಷ ಚೇತನರಿಗೆ ವ್ಹೀಲ್ ಛೇರ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾರೂ ಭಯಭೀತರಾಗದೆ ಆಸೆ-ಆಮಿಷಗಳಿಗೆ ಒಳಗಾಗದಂತೆ ಪ್ರತಿಯೊಬ್ಬರೂ ಸಹ ಮತದಾನ ಮಾಡಬೇಕು ಎಂದರು.

ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು. ಆದ್ದರಿಂದ ಎಲ್ಲರೂ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಜಿಲ್ಲೆಯ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸಹಕರಿಸಬೇಕು. ಈ ನಿಟ್ಟಿನಲ್ಲಿ ಯಾರು ಮತದಾನದಿಂದ ಹೊರಗುಳಿಯಬಾರದು. ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಿ ಮತದಾನ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು. ವಿಶೇಷವಾಗಿ ಜಿಲ್ಲೆಯ ಪ್ರತಿ ಮತಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಮಹಿಳೆಯರಿಗೋಸ್ಕರ ಮಹಿಳಾ ಸ್ನೇಹಿ ಮತಗಟ್ಟೆ(ಪಿಂಕ್/ಸಖಿ ಬೂತ್)ಗಳನ್ನು ಅಲಂಕರಿಸಲಾಗಿದೆ. ಆದ್ದರಿಂದ ಎಲ್ಲ ಮಹಿಳೆಯರು ನಿರ್ಭೀತಿಯಿಂದ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿ ಎಂದರು.

ನAತರ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ ರವರು ಮಾತನಾಡಿದರು. , ರಾಯಭಾರಿ ಸಹನಾ ಕುಡಿಗನೂರ ರವರು ಎಲ್ಲರಿಗೂ ಮತದಾನ ಜಾಗೃತಿಯ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಇನ್ನೋರ್ವ ರಾಯಭಾರಿ ಸಾಕ್ಷಿ ಹಿರೇಮಠರವರು ಮತದಾನ ಜಾಗೃತಿ ಗೀತೆಗಳನ್ನು ಹಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳಾದ ಬಿ. ಎಸ್ ಮೂಗನೂರಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ. ಕೆ. ಚವ್ಹಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ರಾಜಶೇಖರ್ ಹೆಚ್ ದೈವಾಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಬಸವರಾಜ ಜಿಗಳೂರ, ಇನ್ನೋರ್ವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಸ್. ಸಿ ಮ್ಯಾಗೇರಿ, ಜಿಲ್ಲಾ ಪಂಚಾಯತಿಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯ

ನೇಹಾ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಜಂಗಮ ಸಮಾಜ ಮುಖಂಡರಿAದ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನೇಹಾ ಹಿರೇಮಠ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಿ, ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಜಂಗಮ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಂಗಮ ಸಮಾಜ ಮುಖಂಡ ಸಂಜೀವ ಹಿರೇಮಠ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಸಾವಳಗಿಮಠ ಮಾತನಾಡಿ, ನೇಹಾ ಹತ್ಯೆ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ಭಯ ಹುಟ್ಟಿಸಿದೆ. ಹಾಡು ಹಗಲೇ ಕಾಲೇಜಿನ ಆವರಣದಲ್ಲಿ 9 ಸಲ ಚಾಕುವಿನಿಂದ ಇರಿದು ಕ್ರೂರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್‌ಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಫಯಾಜ್ ಮಾಡಿರುವ ಹೀನ ಕೃತ್ಯದಲ್ಲಿ ಆತನ ಇನ್ನೂ ನಾಲ್ಕು ಸಹಪಾಠಿಗಳ ಕೈವಾಡವೂ ಇರುವುದು ತಿಳಿದು ಬಂದಿದೆ. ಹಾಗಾಗಿ ಎಲ್ಲರನ್ನೂ ಬಂಧಿಸಿ ಸರಿಯಾಗಿ ವಿಚಾರಣೆ ನಡೆಸಬೇಕು. ಅಲ್ಲದೇ ಆರೋಪಿಗಳಿಗೆ ಜಾಮಿನು ಸಿಗದಂತೆ ಪೊಲೀಸ್ ಅಧಿಕಾರಿಗಳು ಎಚ್ಚರಿಕೆಯಿಂದ ವಿಚಾರಣೆ ನಡೆಸಿ 1 ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಿ ಗರಿಷ್ಠ ಮಟ್ಟದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ವಿರಳ ಪ್ರಕರಣಗಳಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸುಗ್ರಿವಾಜ್ಞೆ ಮೂಲಕ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಸಾದ ವಸ್ತçದ, ಹಿಂದೂ ಮಹಾಸಭಾದಿಂದ ಪೂರ್ಣಿಮಾ ಬದ್ನೂರ, ಭುವನೇಶ್ವರಿ ಕೋರವಾರ, ಮಾಯಾ ಚೌಧರಿ ಮಾತನಾಡಿ, ಈ ಕೊಲೆಯಲ್ಲಿ ರಾಜಕಾರಣ ಮಾಡದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ಅದರಂತೆ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಸಯ್ಯ ಚಿನ್ನಕಾಳಿಮಠ, ಡಾ.ಬಸವರಾಜ ನಂದಿಕೋಲಮಠ, ವಿಶ್ವನಾಥ ಹಿರೇಮಠ ಕಾಖಂಡಕಿ, ರಾಚಯ್ಯ ಮಠಪತಿ, ಗುರಸಿದ್ದಯ್ಯ ಹಿರೇಮಠ, ಗುರಯ್ಯ ಯಾದವಾಡಮಠ, ಜೆಡಿಎಸ್ ಮುಖಂಡ ರಾಜು ಹಿಪ್ಪರಗಿ, ವಿಶ್ವನಾಥ ಹಿರೇಮಠ, ಮಲ್ಲಯ್ಯ ಹಿರೇಮಠ, ಪುಷ್ಪಾ ಗಚ್ಚಿನಮಠ, ಸುರೇಖಾ ಹಿರೇಮಠ, ಶೈಲಜಾ ನಂದಿಕೋಲಮಠ, ಸುನೀತಾ ಹಿರೇಮಠ, ವೀಣಾ ಹಿರೇಮಠ, ಚೈತ್ರಾ ಮಹಾಂತಮಠ, ಪೂಜಾ ಹಿರೇಮಠ, ಮೀನಾಕ್ಷಿ ಮಠ ಇದ್ದರು.