Monday, July 1, 2024
Saturday, June 29, 2024
ಪರಿಸರ ಕಾಳಜಿ ಯುವಕರ ಆಶಯವಾಗಲಿ: ವಿಜಯಪುರ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಕಲ್ಲನಗೌಡ ಪಾಟೀಲ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ಚಡಚಣ: ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಚಡಚಣದ ರಾಷ್ಟೀಯ ಸೇವಾ ಯೋಜನಾ ಘಟಕವು ಚಡಚಣ ತಾಲೂಕಿನ ಜಿಗಜೇವಣಿ ಗ್ರಾಮದಲ್ಲಿ ಏಳು ದಿನಗಳ ವಿಶೇಷ ವಾರ್ಷಿಕ ಶಿಬಿರದ ಉದ್ಘಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು.
ಎನ್ ಎಸ್ ಎಸ್ ಶಿಬಿರದ ಉದ್ಘಾಟನಾ ಸಮಾರಂಭವನ್ನು ಶ್ರೀ ಸಿದ್ದರಾಮೇಶ್ವರ ಪಟ್ಟದ ದೇವರುವರು (ಬೋರಚಿಂಚೋಳ್ಳಿ) ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವಿಠ್ಠಲ ಬಿರಾದಾರ (ಗ್ರಾಂ ಪ ಅಧ್ಯಕ್ಷರು) ವಹಿಸಿಕೊಂಡಿದ್ದರು. ಉದ್ಘಾಟನೆಯನ್ನು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಗೌರವಾನ್ವಿತ ಕಾರ್ಯದರ್ಶಿಗಳಾದ ಶ್ರೀ ವಿ ಎಸ್ ಗಿಡವಿರ ನೆರವೆರಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ವಿಜಯಪುರ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಕಲ್ಲನಗೌಡ ಪಾಟೀಲ ಸ್ವಯಂ ಸೇವಕರಲ್ಲಿ ಪ್ರಾಮಾಣಿಕತೆ ಇರಬೇಕು. ದೇಶದ ಭದ್ರತೆ ಮತ್ತು ಅಭಿವೃದ್ದಿ ದೃಷ್ಟಿಕೊನದಲ್ಲಿರಿಸಿಕೊಂಡು ಸೇವೆಯನ್ನು ಇವತ್ತಿನ ಯುವಕರು ಮಾಡಬೇಕು. ಯಾವುದೇ ಸ್ವಚ್ಛತೆಯೇ ಈ ಶಿಬಿರದ ಮೂಲ ತತ್ವವಾಗಲಿ. ಪರಿಸರ ಕಾಳಜಿ ಯುವಕರ ಆಶಯವಾಗಲಿ ಎಂದು ತಿಳಿಸಿದರು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್ ಬಿ ರಾಠೋಡ ಪ್ರಾಸ್ತಾವಿಕ ಮಾತನಾಡುತ್ತಾ ನಾಡಿನ ಭವಿಷ್ಯ ಯುವಕರ ಕೈಯಲ್ಲಿ ಇದೆ. ಸಂಸ್ಕಾರ ಮತ್ತು ಸಭ್ಯತೆಗಳನ್ನು ಕಲಿಯುವುದರ ಮೂಲಕ ಸ್ವಯಂ ಸೇವಕರು ಸಾಧನೆಯನ್ನು ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರೊ.ಎಂ ಕೆ ಬಿರಾದಾರ್, ಪ್ರೊ.ಎ ಎಸ್ ಪಾಟೀಲ್, ಎಸ ಎಸ್ ಪಾಟೀಲ್ ,ಪ್ರೊ. ಬಸವರಾಜ ಯಳ್ಳೂರು, ಪ್ರೊ.ಎಸ್ ಎಸ್ ಅವಟಿ, ಪ್ರೊ.ಪೂಜಾ ಬುರುಡ, ಪ್ರೊ.ಬಿ ಎಮ್ ಧೈವಾಡಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮದ ಹಿರಿಯರು ಮಹಾವಿದ್ಯಾಲಯದ ಸ್ವಯಂ ಸೇವಕರು ಉಪಸ್ಥಿತರಿದ್ದರು. ಕಾರ್ಯಕ್ರಮ ಅಧಿಕಾರಿಗಳಾದ ಮಹಾಂತೇಶ ಜನವಾಡ ಸ್ವಾಗತಿಸಿದರು ಡಾ.ಎಸ್ ಎಸ್ ದೇಸಾಯಿ ವಂದಿಸಿದರು. ಕು. ಅಕ್ಷತಾ ಉಮರಾಣಿ ನಿರೂಪಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ನವದೆಹಲಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.
ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.
ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.
ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.
ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.
ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್ ಷಾ ಅವರನ್ನು ಕೋರಲಾಯಿತು.
ಪೊಲೀಸ್ ಕ್ಯಾಂಟೀನ್ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಜಾಕ್ವೆಲ್‌ಗಳ ನಿರ್ವಹಣೆಗೆ ಸಕಾಲಕ್ಕೆ ಹಣ ಒದಗಿಸಲು ಆಗ್ರಹ
ವಿಜಯಪುರ : ಲಾಲಬಹಾದ್ದೂರ ಜಲಾಶಯದ ಬಳೂತಿ ಜಾಕ್ವೆಲ್ ಸೇರಿದಂತೆ ಉಳಿದ ಜಾಕ್ವೆಲ್‌ಗಳ ನಿರ್ವಹಣೆಗೆ ಸರಕಾರ ಸಕಾಲಕ್ಕೆ ಹಣ ಬಿಡುಗಡೆ ಗೊಳಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಶನಿವಾರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಇವರ ಮುಖಾಂತರ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಯಂತ್ರೋಪಕರಣ ಕಾರ್ಯನಿರ್ವಹಣೆ ರಿಪೇರಿ ಸೇರಿದಂತೆ ಇನ್ನೂಳಿದ ನಿರ್ವಹಣೆಗಾಗಿ ಸರಕಾರ ಪ್ರತಿವರ್ಷ ಹಣ ಒದಗಿಸಬೇಕು. ಆದರೆ ಈ ವರ್ಷ ಹಣ ಒದಗಿಸುವಲ್ಲಿ ವಿಳಂಬನೀತಿ ಅನುಸರಿಸುತ್ತದೆ. ಇದರಿಂದ ಯಂತ್ರೋಪಕರಣಗಳ ರಿಪೇರಿ ಹಾಗೂ ಇನ್ನೂಳಿದ ಕೆಲಸಗಳು ಕುಂಠಿತಗೊಳುತ್ತಿದೆ. ಒಂದು ವೇಳೆ ಸಕಾಲಕ್ಕೆ ಹಣ ಒದಗಿಸದಿದ್ದಲ್ಲಿ. ಯಂತ್ರೋಪಕರಣಗಳ ದುರಸ್ತಿ ಕಾರ್ಯ ಹಾಗೂ ಅದಕ್ಕೆ ಆಯಿಲಿಂಗ್ ಹಾಗೂ ಗ್ರಿಸ್ ಸೇರಿದಂತೆ ಉಳಿದ ರಿಪೇರಿಗಳು ಸಕಾಲಕ್ಕೆ ಮಾಡದಿದ್ದರೆ ಮೋಟರುಗಳು ಹಾಳಾಗುತ್ತವೆ. ಒಂದು ವೇಳೆ ಯಂತ್ರೋಪಕರಗಳು ಕೆಟ್ಟು ನಿಂತಲ್ಲಿ ಕಾಲುವೆಗಳಿಗೆ ನೀರು ಹರಿಸಲು ಕಷ್ಟವಾಗುತ್ತದೆ. ರೈತರಿಗೆ ಯಾವ ಸಂದರ್ಭದಲ್ಲಿ ನೀರು ಅಗತ್ಯವಿರುತ್ತದೆ ಎಂಬುದು ಹೇಳಲಾಗುವುದಿಲ್ಲ ಅಂತಹ ಸಂದರ್ಭದಲ್ಲಿ ಯಂತ್ರೋಪಕರಣಗಳು ಕೆಟ್ಟರೆ ರೈತರಿಗೆ ತೊಂದರೆಯಾಗುತ್ತದೆ. ಮತ್ತು ಹೊಸ ಮೋಟಾರಗಳ ಬೆಲೆ ಅಂದಾಜು ಒಂದುಕೋಟಿ ಹಣಕ್ಕಿಂತಲೂ ಮೇಲ್ಪಟ್ಟಿವೆ. ಒಂದೇ ಮೋಟಾರು ಕೆಟ್ಟರೂ ಕೋಟಿಗಿಂತಲೂ ಹೆಚ್ಚು ಹಣ ಹಾಳಾಗುತ್ತದೆ. ಈ ಮೊದಲು ಜಾಕ್ವೆಲ್‌ಗಳ ನಿರ್ಮಾಣ ಮಾಡಿದ ಮೆಗಾ ಕಂಪನಿಯವರ ನಿರ್ವಹಣಾ ಅವಧಿ ಮುಕ್ತಾಯಗೊಂಡಿದ್ದು, ಈಗ ಸರಕಾರವೇ ನಿರ್ವಾಹಣ ವೆಚ್ಚ ಭರಿಸಬೇಕಾಗಿದೆ. ಆದರಿಂದ ಪ್ರತಿ ವರ್ಷವೂ ಸಕಾಲಕ್ಕೆ ಅದಕ್ಕೆ ತಗುಲುವ ನಿರ್ವಹಣೆ ವೆಚ್ಚವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಮನವಿ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಬ.ಬಾಗೇವಾಡಿ ಪ್ರ.ಕಾರ್ಯದರ್ಶಿ ಪ್ರಹ್ಲಾದ ನಾಗರಾಳ, ತಾ.ಉಪಾಧ್ಯಕ್ಷ ಹೊನ್ನಕೇರಪ್ಪ ತೆಲಗಿ, ಚನ್ನಬಸಪ್ಪ ಸಿಂದೂರ, ಶಿವಪ್ಪ ಸುಂಟ್ಯಾನ, ದಾವಲಸಾಬ ನಧಾಪ್, ರಾಜೇಸಾಬ ವಾಲೀಕಾರ, ಪ್ರಭು ದಸ್ತವಾಡ, ಸಿದ್ದಪ್ಪ ಕಲಬೀಳಗಿ, ರೇವಣಸಿದ್ದ ಕೊಂಡಗೂಳಿ, ರಮೇಶ ಕೆಂಪವಾಡ, ಶ್ರೀನಿವಾಸ ಭತಗುಣಕಿ, ಎಸ್.ಜಿ. ಸಂಗೋAದಿಮಠ, ಎನ್.ಕೆ. ಮನಗೊಂಡ, ಬಸವರಾಜ ಬಾಡಗಿ ಮತ್ತಿತರರು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


.jpg)