Thursday, August 1, 2024
ಆಗಷ್ಟ್ 3 ರಂದು ನವರಸ ಪ್ರದರ್ಶಕ ಕಲೆಗಳ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭ
ವಿಜಯಪುರ : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರಿಂದ ಮಾನ್ಯತೆ ಪಡೆದುಕೊಂಡಿರುವ ಉತ್ತರ ಕರ್ನಾಟಕದ ಹೆಮ್ಮೆಯ ಸಂಸ್ಥೆ ಖ್ಯಾತ ಅಂತಾರಾಷ್ಟಿçÃಯ ನೃತ್ಯ ಕಲಾವಿದ ದಂಪತಿಗಳಾದ ಶ್ರೀ ರಂಗನಾಥ ಹಾಗೂ ಸುನಂದಾ ಬತ್ತಾಸಿ ದಂಪತಿಗಳ ಸಾರಥ್ಯಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ವಿಜಯಪುರ ನಗರದ ನವರಸ ಪ್ರದರ್ಶಕ ಕಲೆಗಳ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭ ಶನಿವಾರ ದಿನಾಂಕ : 03-08-2024 ರಂದು ಸಂಜೆ 5 ಗಂಟೆಗೆ ವಿಜಯಪುರದ ಜಲನಗರ ಕಾಲೋನಿಯ ಬುದ್ಧ ವಿಹಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನವರಸ ನೃತ್ಯ ಕಲಾ ಸಂಸ್ಥೆಯ, ನವರಸ ಪ್ರದರ್ಶಕ ಕಲೆಗಳ ಮಹಾವಿದ್ಯಾಲಯ ವಿಜಯಪುರ ಸಂಸ್ಥಾಪಕ ಹಾಗೂ ನಿರ್ದೇಶಕರಾದ ರಂಗನಾಥ ವಿ ಬತ್ತಾಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಟಿ. ಭೂಬಾಲನ್ ಉದ್ಘಾಟಿಸಲಿದ್ದಾರೆ. ಪ್ರೊ. ಬಿ.ಕೆ. ತುಳಸಿಮಾಲ ಅಧ್ಯಕ್ಷತೆ ವಹಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿದೂಶಿಲತಾ ಜಹಾಗಿರದಾರ, ಡಾ. ಹರೀಶ ಹೆಗಡೆ ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ನವರಸ ನೃತ್ಯ ಕಲಾ ಸಂಸ್ಥೆ (ರಿ) ವತಿಯಿಂದ ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಹಾಗೂ ತಬಲಾ ವಾದನ, ಕಥಕ್, ಭರತನಾಟ್ಯ ಹಾಗೂ ನಾಟಕ ಪ್ರದರ್ಶನ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Wednesday, July 31, 2024
"ವ್ಯಸನ ಮುಕ್ತಕ್ಕಾಗಿ ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ ಮಾಡಿದ ಡಾ. ಮಹಾಂತ ಶಿವಯೋಗಿ ಅಜ್ಜನವರು"
ದೇಶಾದ್ಯಂತ ವ್ಯಸನ ಮುಕ್ತ ಜಾಗೃತಿ ಮೂಡಿಸಿದ ಶ್ರೀಗಳು| ಆಗಸ್ಟ್ 1 ವ್ಯಸನ ಮುಕ್ತ ದಿನಾಚರಣೆ
ಸಮಾಜದಲ್ಲಿ ಯಾವೊಬ್ಬ ವ್ಯಕ್ತಿಯೂ ವ್ಯಸನಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆದುಕೊಂಡು ನೆಮ್ಮದಿಯ ಜೀವನ ನಡೆಸಬೇಕೆನ್ನುವ ಆರೋಗ್ಯಕರ ಸಮಾಜದ ಪರಿಕಲ್ಪನೆ ಇಟ್ಟುಕೊಂಡು ವ್ಯಸನ ಮುಕ್ತ ಸಮಾಜಕ್ಕಾಗಿ 'ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ' ಮೂಲಕ ಸಂಚರಿಸಿ, ವ್ಯಸನ ಹಾಗೂ ದುಷ್ಚಟಗಳ ಬಗ್ಗೆ ಜಾಗೃತಿ ಮೂಡಿಸಿ, ಜನರಲ್ಲಿ ಮನ ಪರಿವರ್ತಿಸಿದ ಲಿಂಗೈಕ್ಯ ಡಾ. ಮಹಾಂತ ಶಿವಯೋಗಿ ಅಜ್ಜನವರು.
ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ 01 ಆಗಸ್ಟ್ 1930 ರಲ್ಲಿ ಜನಿಸಿದ ಡಾ. ಮಹಾಂತ ಶಿವಯೋಗಿಗಳು. ತಮ್ಮ 10 ನೇ ವಯಸ್ಸಿನಲ್ಲೇ ಸನ್ಯಾಸಿ ಜೀವನವನ್ನು ಸ್ವೀಕರಿಸಿ, ಸವದಿಯ ವಿರಕ್ತ ಮಠದ ಚಿಕ್ಕ ಸ್ವಾಮಿಜಿಗಳಾದರು.
ಇವರು ಕಾಶಿಯಲ್ಲಿ ಸಂಸ್ಕೃತ, ಹಿಂದಿ ಯೋಗ, ಶಾಸ್ತ್ರೀಯ ಸಂಗೀತ, ಆಧ್ಯಾತ್ಮಿಕ ಪ್ರವಚನ ಹೀಗೆ ನಾನಾ ವಿಷಯಗಳಲ್ಲಿ ಪರಿಣಿತಿಯನ್ನು ಪಡೆದಿದ್ದರು.
*ವ್ಯಸನ ಮುಕ್ತ ಸಮಾಜಕ್ಕೆ ಶ್ರೀಗಳ ಕೊಡುಗೆ:* 1970 ರಲ್ಲಿ ಇಳಕಲ್ (ಚಿತ್ತರಗಿ) ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19 ನೇ ಪೀಠಾಧಿಕಾರಿಗಳಾದ ಡಾ. ಮಹಾಂತ ಶಿವಯೋಗಿ ಅಜ್ಜನವರು. ಬಳಿಕ ಉತ್ತರ ಕರ್ನಾಟಕದಿಂದ 'ವ್ಯಸನ ಮುಕ್ತ'ಕ್ಕಾಗಿ ದೃಢ ಸಂಕಲ್ಪ ತೊಟ್ಟು,1975 ಕ್ಕೆ ಆರಂಭಿಸಿದ 'ಮಹಾಂತ ಜೋಳಿಗೆ ಕಾರ್ಯಕ್ರಮ'ದಡಿ ದೇಶಾದ್ಯಂತ ಅಷ್ಟೇ ಅಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ಸಂಚರಿಸಿದ ಶ್ರೀಗಳು 42 ವರ್ಷಗಳ ಕಾಲ ಮಾದಕ ಸೇವನೆ ಹಾಗೂ ದುಷ್ಚಟಗಳಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿ, ತಮ್ಮ ಜೋಳಿಗೆ ಹಿಡಿದು ಜನರಲ್ಲಿನ ದುಶ್ಚಟಗಳ ಭಿಕ್ಷೆ ಬೇಡಿದರು.
*ಬಹು ಸಮಾಜಮುಖಿ ಕೊಡುಗೆಯ ಜೋಳಿಗೆ ಹರಿಕಾರ:* ನಿರಂತರ ಅನ್ನ ದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ ಸ್ಥಾಪನೆ, ನಿಸರ್ಗ ಚಿಕಿತ್ಸೆ, ಯೋಗ ಕೇಂದ್ರ ಸ್ಥಾಪನೆ, ಶಾಖಾ ಮಠಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ನೂರಾರು ಎಕರೆ ಜಮೀನು ಆಯಾ ಗ್ರಾಮಗಳ ರೈತರಿಗೆ ಕೃಷಿ ಮಾಡಿ ಬದುಕಲು ಅನುಕೂಲ ನೀಡಿದರು. ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಎದುರಾದಾಗ ನಾನಾ ಗ್ರಾಮಗಳಲ್ಲಿ ಗಂಜಿ ಕೇಂದ್ರ ತೆರೆಯುವ ಜತೆಗೆ ಹಲವಾರು ಬಹು ಸಮಾಜಮುಖಿ ಕಾರ್ಯಗಳನ್ನು ಮಾಡಿದರು.
*ಮಹಾಂತ ಜೋಳಿಗೆ ಕಾರ್ಯಕ್ರಮಕ್ಕೆ ಕಾರಣ:* ವಿಪರೀತ ಮದ್ಯಪಾನ ಸೇವನೆಯಿಂದ ಯುವಕನೊಬ್ಬ ಸಾವನ್ನಪ್ಪಿದ ಸುದ್ದಿ ತಿಳಿದು ಕುಟುಂಬಕ್ಕೆ ಸಾಂತ್ವಾನ ಹೇಳಲು ಅವನ ಕೇರಿಗೆ ತೆರಳಿದ್ದ ಶ್ರೀಗಳು. ಅಲ್ಲಿ ಮೃತ ಯುವಕನ ಧರ್ಮಪತ್ನಿ ಹಾಗೂ ಮಕ್ಕಳು ಉಪವಾಸದಿಂದ ಕಣ್ಣಿರು ಹಾಕುತ್ತಿರುವುದು ಕಂಡರು. ಇದೇ ರೀತಿ ಸಾವಿರಾರು ಕುಟುಂಬಗಳಲ್ಲಿ ಗಂಡಂದಿರು ಮದ್ಯಪಾನ ಸೇವನೆ ಹಾಗೂ ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಸಾವಿಗಿಡಾಗುತ್ತಿದ್ದಾರೆ. ಇದರಿಂದ ಹೆಂಡತಿ, ಮಕ್ಕಳು ಸೇರಿ ಕುಟುಂಬಸ್ಥರು ಬೀದಿ ಪಾಲಾಗುತ್ತಿದ್ದಾರೆ. ಇಂತಹ ದುಷ್ಚಟಗಳಿಗೆ ಜೀವನ ಹಾಳಾಗಿಸಿಕೊಳ್ಳುತ್ತಿರುವದನ್ನು ನಿರ್ಮೂಲನೆ ಮಾಡಲು 'ಮಹಾಂತ ಜೋಳಿಗೆ' ಆರಂಭಿಸಿದರು.
ಮಹಾಂತ ಸ್ವಾಮಿಜಿಯವರು ಕೆಂಪು ಬಟ್ಟೆಯ ಜೋಳಿಗೆ ಹಿಡಿದುಕೊಂಡು ಕುಡಿತ ಚಟದಿಂದ ಸಾವಿಗಿಡಾದ ಯುವಕನ ಕೇರಿಯ ಗುಡಿಸಲು ಮನೆಗಳಿಗೆ ತೆರಳಿ, ಜನರು ಮದ್ಯಪಾನ, ತಂಬಾಕು, ಗುಟ್ಕಾ ಸೇರಿದಂತೆ ದುಷ್ಚಟಗಳನ್ನು ತಮ್ಮ ಜೋಳಿಗೆಗೆ ಹಾಕಲು ಭಿಕ್ಷೆ ರೂಪದಲ್ಲಿ ಬೇಡಿದರು.
ಹೀಗೆ ವ್ಯಸನ ಮಕ್ತ ಸಮಾಜದ ಪರಿಕಲ್ಪನೆಯೊಂದಿಗೆ ಜನರಲ್ಲಿ ವ್ಯಸನದಿಂದ ಸಂಭವಿಸುವ ಕ್ಯಾನ್ಸರ್ ನಂತಹ ಆರೋಗ್ಯ ಹಾನಿ ಕುರಿತು ಮನಸ್ಸಿಗೆ ಮುಟ್ಟುವಂತೆ ತಿಳುವಳಿಕೆಯ ಮಾತನ್ನು ಹೇಳಿದರು. ಜತೆಗೆ ವೈದ್ಯರು, ಸಾಹಿತಿಗಳು, ಕವಿಗಳು, ಧರ್ಮಗಳು ಹೀಗೆ ಪ್ರಖ್ಯಾತ ಮನಪರಿವರ್ತಿಸುವ ಜಾಗೃತಿ ಕಾರ್ಯಕ್ರಮ ಮುಂದುವರೆಸಿದರು.
*ಶ್ರೀಗಳಿಗೆ ಸಂದ ಗೌರವ ಹಾಗೂ ಪ್ರಶಸ್ತಿಗಳು:* 1967 ರಲ್ಲಿ ಹಾವೇರಿಯ ಹುಕ್ಕೇರಿ ಮಠದಿಂದ 'ಅಭಿನವ ಚನ್ನಬಸವಣ್ಣ', 1968 ರಲ್ಲಿ ದಾವಣಗೆರೆಯ ಗಾನಯೋಗಿ ಪುಟ್ಟರಾಜ ಗವಾಯಿಗಳ ಪುರಾಣ ಸಮಿತಿಯಿಂದ 'ಕಾಯಕನಿಷ್ಠ ಶಿವಯೋಗಿ', 1969 ರಲ್ಲಿ ಬಾಗಲಕೋಟೆಯ ನಾಗರಿಕರಿಂದ 'ಪ್ರವಚನ ಪ್ರವೀಣ', 1990 ರಲ್ಲಿ ಚಿತ್ತರಗಿ-ಇಳಕಲ್ಲ ಸದ್ಭಕ್ತರಿಂದ 'ಶಿವಾನುಭವ ಚರವರ್ಯ', 1971ರಲ್ಲಿ ರಾವೂರ(ಚಿತ್ತಾಪುರ) ಭಕ್ತರಿಂದ 'ವೀರಶೈವ ತತ್ವವೆತ್ತ ಸಮಾಜ ಸಂಘಟಕ ಪ್ರಶಸ್ತಿ'ಗಳು ಸಂದಿವೆ.
ಅಲ್ಲದೆ, 1976 ರಲ್ಲಿ ಚಿತ್ತರಗಿ ಪೀಠದ ಭಕ್ತರಿಂದ 'ಮಹಾಂತ ಜೋಳಿಗೆಯ ಶಿವಶಿಲ್ಪಿ', 1981 ರಲ್ಲಿ ಧಾರವಾಡದ ಶ್ರೀ ಮುರುಘಾಮಠದಿಂದ 'ಲಿಂಗವಂತ ಧರ್ಮ ಪ್ರಚಾರ ಧುರೀಣ', 1992 ರಲ್ಲಿ ಅಥಣಿ ತಾಲೂಕು ಯೂಥ್ ಫೆಡರೇಶನ್‌ದಿಂದ 'ಅರಿವಿನ ಮೂರ್ತಿ ಹಾಗೂ ಸವದಿ ಭಕ್ತರಿಂದ ಸವದಿಯ ಸಿರಿ', 1995 ರಲ್ಲಿ ಚಿತ್ರದುರ್ಗದ ಶ್ರೀ ಮುರುಘಾಮಠದಿಂದ 'ಕಾಯಕಯೋಗಿ', 1998 ರಲ್ಲಿ ಭಾಲ್ಕಿಯ ಹಿರೇಮಠ ಸಂಸ್ಥಾನದಿಂದ 'ದಲಿತೋದ್ಧಾರ ಮಹಾಂತ', 2001ರಲ್ಲಿ ಚಿತ್ರದುರ್ಗದ ಶ್ರೀ ಮುರುಘಾಮಠದಿಂದ 'ಸಮಾಜ ಸುಧಾರಕ', 2002 ರಲ್ಲಿ ಅಥಣಿಯ ವಿಮೋಚನಾ ಸಂಸ್ಥೆಯಿಂದ 'ಹೇ ಅಮೃತ ನಿಧಿ', 2003 ರಲ್ಲಿ ಇಂಡಿಯನ್ ಸೈಕಿಯಾಟ್ರಿಕ್ ಸೊಸೈಟಿಯಿಂದ 'ಸ್ಪಂದನ ಪ್ರಶಸ್ತಿ', 2006 ರಲ್ಲಿ ಗದಗ-ಬೆಟಗೇರಿಯ ಅಂಬಿಗೇರ ಪ್ರತಿಷ್ಠಾನದಿಂದ 'ಗಣಾಚಾರ ಪ್ರಶಸ್ತಿ', ಅಥಣಿಯ ಕನಕದಾಸ ಸಾಹಿತ್ಯ-ಸಂಸ್ಕೃತಿ ವೇದಿಕೆಯಿಂದ 'ಕನಕಶ್ರೀ ಪ್ರಶಸ್ತಿ', 2007 ರಲ್ಲಿ ಬಾಗಲಕೋಟೆ ಬಸವೇಶ್ವರ ವಿದ್ಯಾವರ್ಧಕ ಸಂಘದಿಂದ 'ನಾಡಿನ ಪುಣ್ಯದ ಶಿವಯೋಗಿ ಪ್ರಶಸ್ತಿ', 2018 ರಲ್ಲಿ ಟಿವಿ9 ವಾಹಿನಿಯಿಂದ 'ಯೋಗರತ್ನ ಪ್ರಶಸ್ತಿ' ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಹಾಗೂ ಮಠಮಾನ್ಯಗಳಿಂದ ಹಲವಾರು ಪ್ರಶಸ್ತಿಗಳಿಗೆ ಮಹಾಂತ ಶ್ರೀಗಳು ಭಾಜರಾಗಿದ್ದರು.
ವ್ಯಸನ ಮುಕ್ತ ವ್ಯಕ್ತಿ, ಗ್ರಾಮ ಸೇರಿದಂತೆ ಇಡೀ ಮಾನವ ಸಮಾಜವೇ ದುಷ್ಚಟಗಳಿಂದ ಮುಕ್ತರಾಗಬೇಕು. ಎಲ್ಲ ಜನರು ಉತ್ತಮ ಆರೋಗ್ಯ ಪಡೆಯಬೇಕು ಎನ್ನುವ ಬಹು ಸಮಾಜಮುಖಿ ಉದ್ದೇಶದಿಂದ ಶ್ರಮಿಸಿದ ಡಾ. ಮಹಾಂತ ಶಿವಯೋಗಿ ಅಜ್ಜನವರು. 2018 ರಲ್ಲಿ ಶ್ರೀಗಳು ಅಪಾರ ಸಂಖ್ಯೆಯ ಭಕ್ತಗಣವನ್ನು ಬಿಟ್ಟು ಇಹಲೋಕವನ್ನು ತ್ಯಜಿಸಿ ಶಿವೈಕ್ಯರಾದರು.
ಲಿಂಗೈಕ್ಯ ಡಾ. ಮಹಾಂತ ಶಿವಯೋಗಿ ಅಜ್ಜನವರು ದೇಶ-ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣದ ಜನಜಾಗೃತಿ ಮೂಡಿಸಲು ಶ್ರಮಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪ್ರತಿ ವರ್ಷವೂ ಶ್ರೀಗಳ ಜನ್ಮದಿನವಾದ 'ಆಗಸ್ಟ್ 01 ಅನ್ನು ವ್ಯಸನ ಮುಕ್ತ ದಿನಾಚರಣೆ'ಯನ್ನಾಗಿ ರಾಜ್ಯಾದ್ಯಂತ ಆಚರಿಸುವ ಮೂಲಕ ಶ್ರೀಗಳ ಸಮಾಜ ಸೇವೆ ಸ್ಮರಿಸಿಕೊಳ್ಳುತ್ತಾ, ಸಮಾಜದ ಯುವ ಜನತೆ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಚಟಗಳಿಗೆ ಅಂಟಿಕೊಳ್ಳದೇ ದೂರವಿದ್ದು, ಸಾರ್ವಜನಿಕರು ಆರೋಗ್ಯಯುತ ಬದುಕು ಕಟ್ಟಿಕೊಳ್ಳುವಂತೆ ಜಾಗೃತಿಯ ಸಂದೇಶ ಸಾರುತ್ತಿದೆ.
ವಿಶೇಷ ಲೇಖನ:-
ರೇವಣಸಿದ್ದ ಬಗಲಿ
(ಅಪ್ರೆಂಟಿಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ.)
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Tuesday, July 30, 2024
'ನಮ್ಮೂರು ನಮ್ಮ ಶಾಲೆ' ಚಿತ್ರಕಲಾ ಸ್ಪರ್ಧೆ
ವಿಜಯಪುರ : ವಿಜಯಪುರದ ಡ್ರೀಮ್ಸ್ ಕಮ್ಸ್ ಟ್ರು ವತಿಯಿಂದ ವಿಜಯಪುರದ ಗಾಂಧೀವೃತ್ತದ ಬಳಿ ಇರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ನಂ.೬ ರಲ್ಲಿ `ನಮ್ಮೂರು ನಮ್ಮ ಶಾಲೆ' ಎಂಬ ವಿಷಯಾಧಾರಿತ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.
ಮಕ್ಕಳು ಉತ್ಸಾಹದಿಂದ ವಿಜಯಪುರದ ಐತಿಹಾಸಿಕ ಸ್ಮಾರಕಗಳ ಹಾಗೂ ತಮ್ಮ ಶಾಲೆಯ ಮಹತ್ವವನ್ನು ಪ್ರತಿಬಿಂಬಿಸುವ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು. ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದ ರೂವಾರಿ ಹಾಗೂ ಡ್ರೀಮ್ಸ್ ಕಮ್ಸ್ ಟ್ರು ಸಂಸ್ಥೆಯ ಅಧ್ಯಕ್ಷ ಸರ್ಫರಾಜ್ ಮಿರ್ದೇ ಮಾತನಾಡಿ, ಮಕ್ಕಳು ಪ್ರತಿಭೆಯ ಆಗರ, ಪ್ರತಿಯೊಬ್ಬ ಮಗುವಿನಲ್ಲಿಯೂ ಪ್ರತಿಭೆ ಅಡಕವಾಗಿದೆ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವುದಕ್ಕಾಗಿ ಡ್ರೀಮ್ ಕಮ್ಸ್ ಟ್ರು ಅನೇಕ ಸಾಮಾಜಿಕ ಕಾರ್ಯಕ್ರಮ, ಸ್ಪರ್ಧಾ ಚಟುವಟಿಕೆಗಳನ್ನು ಆಯೋಜಿಸುತ್ತಿದೆ, ನಾವು ಇರುವ ಸ್ಥಳದ ಬಗ್ಗೆ, ನಾವು ಕಲಿಯುತ್ತಿರುವ ಶಾಲೆಯ ಬಗ್ಗೆ ಮಕ್ಕಳು ಸಮಗ್ರ ಜ್ಞಾನ ಹೊಂದಬೇಕಾಗಿರುವುದು ಅಗತ್ಯವಾಗಿದೆ, ಹೀಗಾಗಿ ಚಿತ್ರಕಲೆಯ ಮೂಲಕ ಅವರಲ್ಲಿ ಈ ಜ್ಞಾನ ಬಿತ್ತುವುದಕ್ಕಾಗಿ ಈ ವಿಶಿಷ್ಠ ಪೂರ್ಣ ಕಾರ್ಯಕ್ರಮ ಆಯೋಜಿಸಲಾಗಿದೆ, ಮುಂಬರುವ ದಿನಗಳಲ್ಲಿಯೂ ನಮ್ಮ ಶ್ರೇಷ್ಠ ಸಂವಿಧಾನದ ಮಹತ್ವ ಸಾರುವ ಚರ್ಚಾಗೋಷ್ಠಿ, ಯುವಕರಲ್ಲಿ ಕ್ರೀಡಾ ಜಾಗೃತಿಗಾಗಿ ಪಂದ್ಯಾವಳಿಗಳ ಆಯೋಜನೆಗೆ ಸಂಸ್ಥೆ ಕಾರ್ಯಯೋಜನೆ ರೂಪಿಸಿದೆ, ಜನರ ಸೇವೆ ನಮ್ಮ ಸಂಸ್ಥೆಯ ಗುರಿ, ವಿದ್ಯಾರ್ಥಿಗಳ ಪ್ರಗತಿ ನಮ್ಮ ಧ್ಯೇಯ, ಯುವಕರ ಸಬಲೀಕರಣ ನಮ್ಮ ಸಂಸ್ಥೆಯ ಉಸಿರಾಗಿದೆ ಎಂದರು.
ಡ್ರೀಮ್ಸ್ ಕಮ್ಸ್ ಟ್ರು ಉಪಾಧ್ಯಕ್ಷ ವಸೀಮ್ ಜಂಬಗಿ, ಕಾರ್ಯದರ್ಶಿ ಝಿಯಾ ಪಠಾಣ, ಬಿಆರ್‌ಪಿ ಮುನೀರ್ ಗುರಡ್ಡಿ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಪಾಲ್ಗೊಂಡಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Sunday, July 28, 2024
ಬ್ಲಾಕ್ ಮೇಲ್ ಮಾಡೋರು ಕಾರ್ಯನಿರತ ಪತ್ರಕರ್ತರಲ್ಲ, ಅವ್ರು ಕಿಸೆ ಕತ್ತರಿಸುವ ಪತ್ರಕರ್ತರು : ಯತ್ನಾಳ
ವಿಜಯಪುರ: ಪತ್ರಿಕೆ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡುವವರು ಕಾರ್ಯನಿರತ ಪತ್ರಕರ್ತರಲ್ಲ, ಅವರು ಕಿಸೆ ಕತ್ತರಿಸುವ ಪತ್ರಕರ್ತರು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ವಿಜಯಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಂಭಾಗದಲ್ಲಿರುವ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ನಾನು ಸತ್ಯವನ್ನೇ ಮಾತನಾಡುತ್ತೇನೆ, ಯಾರೊಂದಿಗೂ ನಾನು ಅಡ್ಜೆಸ್ಟಮೆಂಟ್ ರಾಜಕಾರಣ ಮಾಡುವುದಿಲ್ಲ, ಒಳ್ಳೆಯದು ಮಾಡಿದರೆ ಅದನ್ನು ಹೊಗಳುತ್ತೇನೆ, ಕೆಟ್ಟದ್ದು ಮಾಡಿದರೆ ಅದನ್ನು ಟೀಕಿಸುತ್ತೇನೆ, ನಮ್ಮವರೇ ಇರಲಿ ಯಾರೇ ಇರಲಿ, ನಾನು ಎಂದಿಗೂ ಮುಖ್ಯಮಂತ್ರಿಗಳ ಕಚೇರಿಗೆ ಹೋಗಿ ನಿಲ್ಲುವುದಿಲ್ಲ ಎಂದರು.
ಈ ಸಂದರ್ಭ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಮಾತನಾಡಿ, ಸರ್ಕಾರಗಳು ತಪ್ಪಿದಾಗ ಎಚ್ಚರಿಸುವ ಕೆಲಸ ಮಾಡುವ ಪತ್ರಕರ್ತರ ಜೀವನ ಮಾತ್ರ ಕಷ್ಟಕರವಾಗಿದೆ, ಹಗಲು ರಾತ್ರಿ ಎನ್ನದೇ ದುಡಿಯುವ ಪತ್ರಕರ್ತರು ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸುವಂತಾಗಿದೆ ಎಂದರು.
ಶಾಸಕಾAಗ, ಕಾರ್ಯಾಂಗ, ನ್ಯಾಯಾಂಗದAತೆ ಮಾಧ್ಯಮ ರಂಗ ನಾಲ್ಕನೇಯ ಅಂಗವಾಗಿ ತನ್ನ ಜವಾಬ್ದಾರಿ ನಿಭಾಯಿಸುತ್ತಿದೆ, ಪತ್ರಕರ್ತರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಪತ್ರಕರ್ತರಿಗಾಗಿ ಬಿಎಲ್‌ಡಿಇ ಸಂಸ್ಥೆಯ ವತಿಯಿಂದ ಆರೋಗ್ಯ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಬಸವಾದಿ ಶರಣರ ವಿಚಾರಗಳನ್ನು ಬೆಳಕಿಗೆ ತಂದ ಶ್ರೇಯಸ್ಸು ಡಾ.ಹಳಕಟ್ಟಿ ಅವರಿಗೆ ಸಲ್ಲುತ್ತದೆ, ಇಂತಹ ಶ್ರೇಷ್ಠ ವ್ಯಕ್ತಿ ಡಾ.ಹಳಕಟ್ಟಿ ಪತ್ರಕರ್ತರ ಬಳಗಕ್ಕೆ ಸೇರಿದವರು ಎಂಬುದು ಸಹ ಪತ್ರಕರ್ತರಿಗೆ ಹಮ್ಮೆಯ ಸಂಗತಿ ಎಂದರು.
ಈ ಸಂದರ್ಭ ಮುಖ್ಯಮಂತ್ರಿಗಳ ಪ್ರಧಾನ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಮಾತನಾಡಿ, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಹಾಗೂ ಪತ್ರಕರ್ತರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಗೃಹ ಮಂಡಳಿಯಲ್ಲಿ ಶೇ.5 ರಷ್ಟು ನಿವೇಶನಗಳನ್ನು ಪತ್ರಕರ್ತರಿಗೆ ಮೀಸಲಿರಸಲಾಗುತ್ತದೆ, ಈ ಸೌಲಭ್ಯವನ್ನು ಈ ಭಾಗದ ಪತ್ರಕರ್ತರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ವ್ಯಕ್ತಿ ಕೇಂದ್ರಿತ ಸುದ್ದಿಗಳೇ ಇಂದು ಮಾಧ್ಯಮಗಳಲ್ಲಿ ರಾರಾಜಿಸುತ್ತಿವೆ, ಶ್ರೀಮಂತ ಕುಟುಂಬಗಳ ಮದುವೆಗಳು ಗಂಟೆಗಟ್ಟಲೇ ಬಿತ್ತರವಾಗುತ್ತಿವೆ, ಈ ಎಲ್ಲದರ ಮಧ್ಯೆ ಮಾಧ್ಯಮಗಳ ಮೇಲೆ ವಿಶ್ವಾಸಾರ್ಹತೆಯೂ ಕಡಿಮೆಯಾಗುತ್ತಾ ಸಾಗಿದೆ ಎಂದರು.
ರೈತರ, ಜನಸಾಮಾನ್ಯರ ಸಮಸ್ಯೆಗಳು ಮಾಧ್ಯಮಗಳಲ್ಲಿ ಬೆಳಕು ಚೆಲ್ಲುವ ಕೆಲಸ ನಡೆಯುತ್ತಿಲ್ಲ, ಒಂದು ರೀತಿ ಮಾಧ್ಯಮಕ್ಕೂ ಕಾರ್ಪೋರೇಟ್ ಸಂಸ್ಕೃತಿ ಕಾಲಿಟ್ಟಿದೆ, ವ್ಯಕ್ತಿ ಕೇಂದ್ರಿತ ಸುದ್ದಿಗಳು, ಬ್ರೇಕಿಂಗ್ ನ್ಯೂಸ್ ಅಬ್ಬರದಲ್ಲಿ ವಿಶ್ವಾಸಾರ್ಹತೆಯ ಕೊರತೆಯಾಗುತ್ತಿದೆ, ಹೀಗಾಗಿ ವಿಶ್ವಾಸಾರ್ಹತೆಯನ್ನು ಪುನರ್ ಸ್ಥಾಪಿಸಿಕೊಳ್ಳುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಬೇಕಿದೆ ಎಂದರು.
ಅಭಿವ್ಯಕ್ತಿಯ ಸ್ವಾತಂತ್ರö್ಯವೇ ಪತ್ರಕರ್ತರ ಶಕ್ತಿ, ಆದರೆ ಈ ಸ್ವಾತಂತ್ರö್ಯ ದುರಪಯೋಗವಾದರೆ ದೊಡ್ಡ ದುರಂತವೇ ನಡೆದು ಹೋಗುತ್ತದೆ, ಪತ್ರಕರ್ತರು ಒಂದು ರೀತಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ರೀತಿ ಇರಬೇಕು, ಯತ್ನಾಳರು ತಾವು ಪ್ರತಿನಿಧಿಸುವ ಪಕ್ಷದವರು ತಪ್ಪು ಮಾಡಿದರೂ ಎತ್ತಿ ತೋರಿಸುತ್ತಾರೆ, ಸರ್ಕಾರ ತಪ್ಪು ಮಾಡಿದರೂ ಅದನ್ನು ಎಚ್ಚರಿಸುತ್ತಾರೆ, ಆ ರೀತಿ ಪತ್ರಕರ್ತರು ತಪ್ಪುಗಳನ್ನು ಎತ್ತಿ ತೋರಿಸಬೇಕು ಎಂದರು.
ಈ ಸಂದರ್ಭ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ಬ್ರೇಕಿಂಗ್ ಅಬ್ಬರದಲ್ಲಿ ಪತ್ರಕರ್ತರ ವಿಶ್ವಾಸಾರ್ಹತೆಯ ಪ್ರಶ್ನೆ ಮಾಡುವ ಪರಿಸ್ಥಿತಿ ಒಂದೆಡೆ ಸೃಜನೆಯಾದರೆ, ನಾನು ಪತ್ರಕರ್ತ, ನಾನು ಪತ್ರಕರ್ತ ಎಂಬ ಹೆಸರು ಹೇಳುವವರ ಸಂಖ್ಯೆ ಅಧಿಕವಾಗುತ್ತಿದೆ, ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವುದು ಅತ್ಯಂತ ಅವಶ್ಯವಾಗಿದೆ.
ಪತ್ರಕರ್ತರು ಎಂದು ಹೇಳಿ ಬ್ಲಾಕ್‌ಮೇಲ್ ಮಾಡುವವರ ಸಂಖ್ಯೆಯೂ ಇದೆ, ಈ ರೀತಿ ವೃತ್ತಿಗೆ ದ್ರೋಹ ಎಸಗುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವ ಕೆಲಸ ನಡೆಯಬೇಕಿದೆ, ಎಂದೋ ಒಂದು ದಿನ ಪತ್ರಿಕೆ ಹೊರತಂದು ಪತ್ರಕರ್ತರ ಎಂದು ಹೇಳಿಕೊಳ್ಳುವವರು ಇದ್ದಾರೆ ಎಂದರು.
ಶ್ರೇಷ್ಠ ಸಾಹಿತಿ ಡಾ.ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಕಾನಿಪ ಇಂದು ಹೆಮ್ಮರವಾಗಿ ಬೆಳೆದು ಕೇರಳ, ಮಹಾರಾಷ್ಟç ಮೊದಲಾದ ರಾಜ್ಯಗಳಲ್ಲಿ ವ್ಯಾಪಿಸಿಕೊಂಡು ವಿಸ್ತಾರವಾಗಿ ಬೆಳೆಯುತ್ತಾ ಸಾಗಿದೆ ಎಂದರು.
ಖಾದ್ರಿ ಶಾಮಣ್ಣ, ಎಸ್.ವಿ. ಜಯಶೀಲ್‌ರಾವ್ ಸೇರಿದಂತೆ ಅನೇಕ ಮಹಾನುಭಾವರು ಈ ಸಂಘದ ಸಾರಥ್ಯ ವಹಿಸಿ ಸಂಘವನ್ನು ಮುನ್ನಡೆಸಿದ ಪರಿಣಾಮ ಸಂಘ ಎತ್ತರಕ್ಕೆ ಬೆಳೆದಿದೆ, ಸುದೀರ್ಘ ಇತಿಹಾಸವುಳ್ಳ ಬೃಹತ್ ಸಂಘಟನೆಯಾಗಿ ತನ್ನ ಜವಾಬ್ದಾರಿಯನ್ನು ಕಾನಿಪ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದರು.
ಸದನದಲ್ಲಿಯೂ ಪತ್ರಕರ್ತರ ಹಿತರಕ್ಷಣೆಯ ಬಗ್ಗೆ ಚರ್ಚೆಯಾಗುತ್ತಿದೆ. ಪತ್ರಕರ್ತರ ಹಿತರಕ್ಷಣೆಗೆ ಪೂರಕವಾದ ಸೌಲಭ್ಯ ಕಲ್ಪಿಸುವಂತೆ ಸರ್ಕಾರ, ಸಂಬAಧಿಸಿದ ಇಲಾಖೆಗಳಿಗೆ ನಿರಂತರವಾಗಿ ಮನವಿ, ಮನವರಿಕೆ ಮಾಡಿಕೊಡುವ ಕೆಲಸವನ್ನು ಸಂಘ ಮುಂಚೂಣಿಯಲ್ಲಿ ನಿಂತು ಮಾಡುತ್ತಿದೆ ಎಂದರು.
ಮಾಧ್ಯಮಗಳಿಗೆ ಅದಮ್ಯ ಶಕ್ತಿ ಇದೆ, ಮಾಧ್ಯಮಕ್ಕೆ ಒಂದು ದೊಡ್ಡ ಜವಾಬ್ದಾರಿ ಇದೆ, ಒಂದು ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಸಹ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿಚಾರಗಳನ್ನು ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿದ್ದರು ಎಂಬುದನ್ನು ಮರೆಯುವಂತಿಲ್ಲ ಎಂದರು.
ಈ ಸಂದರ್ಭ ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಜಿಲ್ಲಾಧಿಕಾರಿ ಟಿ. ಭೂಬಾಲನ್, ವಿಡಿಎ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕಾನಿಪ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಕಾನಿಪ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವನೆ, ಚಾಣಕ್ಯ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ. ಬಿರಾದಾರ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕಾನಿಪ ರಾಜ್ಯ ಪದಾಧಿಕಾರಿ ದೇವರಾಜ್, ಡಾ.ಎಂ.ಎಸ್. ಮದಭಾವಿ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.





