Tuesday, August 20, 2024
Monday, August 19, 2024
'ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ'' ತುಮಕೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಥಮ ರ‍್ಯಾಂಕ್ | ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಪ್ರದಾನ
ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.
ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ 'ಚಿನ್ನದ ಪದಕ'ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.
ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ 'ಗೋಲ್ಡ್ ಮೆಡಲ್' ನ ಸಾಧನೆ ತಂದಿದ್ದಾರೆ.
ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.
ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ.
''ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ 'ಚಿನ್ನದ ಪದಕ' ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ.
-ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)
"ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ.
- ಡಾ. ಬಿ.ಟಿ ಮುದ್ದೇಶ (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಆ.21 ರಂದು ಮುಖ್ಯಮಂತ್ರಿಗಳಿAದ ಕೃಷ್ಣೆಗೆ ಬಾಗಿನ ಅರ್ಪಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಆ.21 ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿ, 10.50 ಕ್ಕೆ ಗಿಣಿಗೆರಾ ಏರಸ್ಟಿçಪ್ ಕೊಪ್ಪಳ ಜಿಲ್ಲೆಗೆ ಆಗಮಿಸಿ, ಬೆಳಗ್ಗೆ 11 ಗಂಟೆಗೆ ಕೊಪ್ಪಳದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12.30ಕ್ಕೆ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿ, ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಆಶ್ರಯದಲ್ಲಿ ಆ.21 ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತಿç ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ನಾಡಿನ ಪ್ರತಿಷ್ಠಿತ ಆಲಮಟ್ಟಿ ಅಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ನಿಮಿತ್ತ ಅಂದು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ ಉಪಸ್ಥಿತಿ ವಹಿಸಲಿದ್ದು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆದ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Saturday, August 17, 2024
ಕ್ರೀಡೆಯಿಂದ ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾಗಿ ವಿಶಾಲಗೊಳಿಸುತ್ತದೆ : ಎಲ್.ಆರ್.ಹಳ್ಳದಮನಿ
ವಿಜಯಪುರ : ವಿಜಯಪುರ ನಗರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಹಾಗೂ ಅಲ್ ಹಸ್ನಾತ ಪದವಿ ಪೂರ್ವ ಕಾಲೇಜು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ನಡೆದ 2024-25 ನೇ ಸಾಲಿನ ವಿಜಯಪುರ ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಎಲ್.ಆರ್. ಹಳ್ಳದಮನಿ ಪ್ರಾಚಾರ್ಯರು ಸರ್ಕಾರಿ ಪದವಿ ಪೂರ್ವ ಕಾಲೇಜು ಕನ್ನೂರವರು ಕ್ರೀಡೆ ಮಕ್ಕಳ ಮನಸ್ಸು ಮುದ ನೀಡುತ್ತದೆ. ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾಗಿ ವಿಶಾಲಗೊಳಿಸುತ್ತದೆ ಎಂದು ಹೇಳಿದರು.
ಮಕ್ಕಳ ಮನಸ್ಸು ಕಲಿಕೆಯತ್ತ ಸಾಗಿಸಲು ದೈಹಿಕ ಶಿಕ್ಷಣದ ಅವರ್ಶಯಕತೆ ಇದೆ. ಮಕ್ಕಳು ದೈನಂದಿನ ಕೆಲಸ ಕಾರ್ಯಗಳ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಅಲ್ ಹಸ್ನಾತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎ.ಎ. ಬಿಜಾಪುರ ಮಾತನಾಡಿದರು.
ಅಲ್ ಹಸ್ನಾತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಂ.ಡಿ. ರೂಗಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಎ.ಎ.ಶಟಗಾರ, ಉಪನ್ಯಾಸಕರಾದ ಬಿ.ಎಸ್.ಗೌರಿ, ಕ್ರೀಡಾ ಸಂಯೋಜಕರಾದ ಎಸ್.ಆರ್.ಮುತ್ತಗಿ, ಗಣೇಶ ಗುನ್ನಾಪೂರ, ಪ್ರೌಢಶಾಲೆಯ ಮುಖ್ಯಗುರುಗಳಾದ ಎಸ್.ಎಸ್.ಹರಿಯಾಲ, ಹಾಗೂ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಎಂ.ಬಿ.ಅವಟಿ, ಕ್ರೀಡಾ ಸಂಘಟನಾ ಕಾರ್ಯದರ್ಶಿಗಳಾದ ಆಬೀದ ಬಾಗವಾನ, ದೈಹಿಕ ಶಿಕ್ಷಕರಾದ ಡಾ. ಮೊಹ್ಮದ ಸಲೀಂ ಮಕಾಂದಾರ, ನಿವೃತ್ತ ಮುಖ್ಯಗುರುಗಳಾದ ಎ.ಜೆ.ಜಮಾದಾರ, ನಿವೃತ್ತ ಶಿಕ್ಷಕರಾದ ಎ.ಎಚ್.ಬಾಗವಾನ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಾ. ಎಸ್.ಸಿ.ಮುಲ್ಲಾ ನಿರೂಪಿಸಿದರು. ಫೀರದೋಸ ಮಣಿಯಾರ ಸ್ವಾಗತಿಸಿದರು. ರಿಜ್ವಾನಾ ಚೌಧರಿ ವಂದಿಸಿದರು.
ಇದೇ ಸಂದರ್ಭದಲ್ಲಿ ವಿಜಯಪುರ ತಾಲೂಕಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಎಸ್.ಎಸ್.ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮಸ್ಥಾನ ಹಾಗೂ ಕೋನಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.
ಇದೇ ಸಂದರ್ಭದಲ್ಲಿ ವಿಜಯಪುರ ತಾಲೂಕಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದದಲ್ಲಿ ಎಸ್.ಎಸ್.ಪದವಿಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿಗಳು ಪ್ರಥಮಸ್ಥಾನ ಹಾಗೂ ಲೋಯೋಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಇದೇ ಸಂದರ್ಭದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಅಲ್ ಹಸ್ನಾತ ಪದವಿ ಪೂರ್ವ ಕಾಲೇಜನ ವಿದ್ಯಾರ್ಥಿನಿಯರಾದ ಮದಿಯಾ ಅರಬ, ಅನಿಸಾ ಅನಾಸೂರ ಪ್ರಾರ್ಥಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.




