Thursday, July 3, 2025

ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕವಾಗಿರುವ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ಚಿತ್ರದಲ್ಲಿ ಪ್ರೊ..ನಾಮದೇವಗೌಡ ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಇದ್ದಾರೆ.

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆರನೆಯ ಕುಲಪತಿಯಾಗಿ ಸಮಾಜಶಾಸ್ತç ಅಧ್ಯಯನ ವಿಭಾಗದ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ಥಾವರಚಂದ ಗೆÀಹಲೋಟ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ. 

ಇಲ್ಲಿಯ ವರೆಗೆ ಹೊರಗಿನ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ಕುಲಪತಿಗಳಾಗಿ ನೇಮಕಗೊಂಡಿದ್ದರು. ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಪ್ರಾಧ್ಯಾಪಕರಿಗೆ ಕುಲಪತಿ ಹುದ್ದೆ ಒಲಿದು ಬಂದಿದೆ.

ರಾಜ್ಯಪಾಲರು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 14 (4) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ, ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ಅಧಿಕಾರ ವಹಿಸಿಕೊಂಡ ದಿನದಿಂದ ಅನ್ವಯವಾಗುವಂತೆ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಕುಲಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 

ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ನೂತನ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಿಳಾ ವಿವಿಯ 6ನೆಯ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹಂಗಾಮಿ ಕುಲಪತಿಯಾಗಿದ್ದ ಪ್ರೊ..ನಾಮದೇವಗೌಡ, ಕುಲಸಚಿವ ಶಂಕರಗೌಡ ಸೋಮನಾಳ, ಸಿಂಡಿಕೇಟ್ ಸದಸ್ಯರಾದ ಶಿವಯೋಗೆಪ್ಪ ಮಾಡ್ಯಾಳ, ಅತೀಕ್ ಮಕಾನದಾರ, ಸೈದಪ್ಪ ಮಾದರ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ s ಉಪಸ್ಥಿತರಿದ್ದರು ಎಂದು ವಿವಿ ಪ್ರಕಟಣೆ ತಿಳಿಸಿದೆ.

ಪರಿಚಯ: ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹಿರಿಯ ಪ್ರಾಧ್ಯಾಕರಾಗಿರುವ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಸಮಾಜಶಾಸ್ತç ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಈ ಹಿಂದೆ, ಮಹಿಳಾ ವಿವಿಯ ಹಣಕಾಸು ಅಧಿಕಾರಿಗಳಾಗಿ, ಸಮಾಜ ವಿಜ್ಞಾನ ನಿಕಾಯದ ಡೀನರಾಗಿ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ, ಪಿಎಂಇಬಿ ನಿರ್ದೇಶಕರಾಗಿ, ಸಿಡಿಸಿ ನಿರ್ದೇಶಕರಾಗಿ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. 

ಪ್ರೊ.ವಿಜಯಾ ಕೋರಿಶೆಟ್ಟಿ ಅವರು, 50ಕ್ಕೂ ರಾಜ್ಯ, ರಾಷ್ಟç ಮತ್ತು ಅಂತಾರಾಷ್ಟಿçÃಯ ಮಟ್ಟದ ವಿಚಾರ ಸಂಕಿರಣ, ಕಾರ್ಯಾಗಾರ ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೇ ಏಳು ಪುಸ್ತಕಗಳು ಮತ್ತು 55 ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇಲ್ಲಿಯ ವರೆಗೆ 16 ವಿದ್ಯಾರ್ಥಿನಿಯರು ಇವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಪದವಿ ಗಳಿಸಿದ್ದಾರೆ. ನಾಲ್ಕು ಸಂಶೋಧನಾ ಪ್ರೊಜೆಕ್ಟ್ಗಳನ್ನು ಪೂರ್ಣಗೊಳಿಸಿದ್ದಾರೆ. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.




Wednesday, July 2, 2025

ಮೂರು ದಿನಗಳ ನಾಗರಿಕ ಪೌರತ್ವ ತರಬೇತಿ ಶಿಬಿರ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗವು ನಿಡಗುಂದಿ ತಾಲೂಕು ಯಲಗೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ನಾಗರಿಕ ಪೌರತ್ವ ತರಬೇತಿ ಶಿಬಿರವನ್ನು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಗ್ರಾಮದ ಹಿರಿಯ ಶಾಂಮ ಪಾತ್ರದ, ಮಹಿಳಾ ವಿವಿಯ ಶಿಕ್ಷಣ ನಿಕಾಯದ ಡೀನ್ ಪ್ರೊ.ಸಕ್ಪಾಲ್ ಹೂವಣ್ಣ, ಪ್ರಾಧ್ಯಾಪಕ ಡಾ.ವಿಷ್ಣು ಶಿಂದೆ, ಶಿಬಿರದ ಸಂಯೋಜಕ ಡಾ. ಉದಯಕುಮಾರ್ ಕುಲಕರ್ಣಿ ಹಾಗೂ ಮತ್ತಿತರು ಉದ್ಘಾಟಿಸಿದರು.

ವಿಜಯಪುರ: ದೇಶದ ನಿಜವಾದ ಪ್ರಗತಿ ಗ್ರಾಮಗಳ ಪ್ರಗತಿಯಲ್ಲಿ ಅಡಕವಾಗಿದ್ದು, ಎಲ್ಲರ ದೃಷ್ಟಿಯೂ ಗ್ರಾಮಗಳ ಅಭಿವೃದ್ಧಿಯತ್ತ ಹರಿಯಬೇಕು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗವು ನಿಡಗುಂದಿ ತಾಲೂಕು ಯಲಗೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ನಾಗರಿಕ ಪೌರತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಶಿಕ್ಷಕ ತರಬೇತಿಯಲ್ಲಿ ಪೌರತ್ವ ಮೌಲ್ಯಗಳನ್ನು ಪರಿಚಯಿಸುವ ಈ ತರಬೇತಿ ಶಿಬಿರಗಳು ಅತ್ಯಂತ ಅವಶ್ಯವಾಗಿವೆ. ವಿಶೇಷವಾಗಿ ಇವು ಗ್ರಾಮೀಣ ಭಾಗದಲ್ಲಿ ಆಯೋಜನೆಯಾಗಬೇಕು. ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ನೇರ ಅನುಭವ ಒದಗಿಸಲು ಶಿಬಿರಗಳು ಉತ್ತಮ ವೇದಿಕೆಯಾಗುತ್ತವೆ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಶಾಂಮ ಪಾತ್ರದ ಮಾತನಾಡಿ, ಈ ತರಬೇತಿ ಶಿಬಿರವು ಗ್ರಾಮಸ್ಥರಿಗೆ ಬಹಳ ಅನುಕೂಲ ನೀಡುತ್ತದೆ. ಹಳ್ಳಿಗಳಲ್ಲಿ ವಂಚನೆಯ ಹಾಗೂ ಮೂಢನಂಬಿಕೆಗಳ ಸಮಸ್ಯೆ ನಿವಾರಣೆಗೆ ಶಿಕ್ಷಣವೇ ಪರಿಣಾಮಕಾರಿಯಾದ ಮಾರ್ಗವಾಗಿದೆ ಎಂದರು.

ಮಹಿಳಾ ವಿವಿಯ ಶಿಕ್ಷಣ ನಿಕಾಯದ ಡೀನ್ ಪ್ರೊ.ಸಕ್ಪಾಲ್ ಹೂವಣ್ಣ ಮಾತನಾಡಿ, ಶಿಕ್ಷಕ ತರಬೇತಿಯು ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿದೆ. ವಿದ್ಯಾರ್ಥಿ ಶಿಕ್ಷಕರು ಸಮುದಾಯದೊಂದಿಗೆ ಸಂವಾದ ನಡೆಸುವಂತಹ ಅನುಭವಾಧಾರಿತ ಚಟುವಟಿಕೆಗಳನ್ನು ರೂಪಿಸಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯದ ಶಿಬಿರಗಳು ಸಮುದಾಯಮುಖಿಯಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮದ ಗಣ್ಯರಾದ ಭೀಮಣ್ಣ ಅವಟಿಗೇರ್, ಶ್ರೀಶೈಲ್ ಹೂಗಾರ್, ಗೋವಿಂದಪ್ಪ ಪೂಜಾರ, ಡಾ. ಅಶೋಕ್ ಕುಮಾರ್ ಸುರಪುರ, ಡಾ.ಪ್ರಕಾಶ್ ಸಣ್ಣಪ್ಪನವರ್, ಯಲಗೂರು ಗ್ರಾಮದ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, ಗ್ರಾಮದ ವಿವಿಧ ಗಣ್ಯರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. 

ಶಿಬಿರದ ಸಂಯೋಜಕ ಡಾ.ಉದಯಕುಮಾರ್ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕ ಡಾ.ವಿಷ್ಣು ಶಿಂದೆ ಪರಿಚಯಿಸಿದರು. ಬಿಎಡ್ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಡಿದರು. ಕಾರ್ಯಕ್ರಮವನ್ನು ಪ್ರಶಿಕ್ಷಣಾರ್ಥಿ ಪಲ್ಲವಿ ಬಂಗೇನ್ನವರ್ ನಿರೂಪಿಸಿದರು. ಸ್ವಾತಿ ಸ್ವಾಗತಿಸಿದರು. ಭಾಗ್ಯಶ್ರೀ ಬಡಿಗೇರ್ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Tuesday, July 1, 2025

ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ವೈದ್ಯರ ದಿನಾಚರಣೆ


ವಿಜಯಪುರ: ನಗರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಜುಲೈ 1ರಂದು ವೈದ್ಯರ ದಿನಾಚರಣೆ ಭಾವುಕವಾಗಿ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವೈದ್ಯರಾದ ಡಾ. ಸುಧೀರ್ ರೇಶ್ಮಿ ಅವರು ಮಕ್ಕಳಿಗೆ ಆರೋಗ್ಯದ ಮಹತ್ವವನ್ನು ವಿವರಿಸಿದರು ಹಾಗೂ ವಿಶೇಷ ಚೇತನತೆ ಹೊಂದಿದ ಮಕ್ಕಳಿಗೆ ಆರೋಗ್ಯದ ಬಗ್ಗೆ ಸದಾ ಜಾಗೃತರಾಗಿರಬೇಕು ಎಂಬುದಾಗಿ ಸಲಹೆ ನೀಡಿದರು.

ಡಾ. ಸುಧೀರ್ ರೇಶ್ಮಿ ಮಾತನಾಡುತ್ತಾ, "ಆರೋಗ್ಯವೇ ಜೀವನದ ಮೂಲಧಾರೆಯಾಗಿದೆ. ವಿಶೇಷ ಮಕ್ಕಳಿಗೆ ಆರೈಕೆ ಮತ್ತು ಪೋಷಣೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಸರಿಯಾದ ಆಹಾರ, ಸಮಯಪಾಲನೆಯು ಅವರಿಗೆ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗುತ್ತದೆ," ಎಂದು ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಡಾ. ಸುಧೀರ್ ರೇಶ್ಮಿ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದರು. ಬಳಿಕ ಮಕ್ಕಳಿಗೆ ಸಿಹಿ ಹಂಚಿ ದಿನಾಚರಣೆಯನ್ನು ಹರ್ಷೋತ್ಸಾಹದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಆಡಳಿತ ಮಂಡಳಿ ವೈದ್ಯರಿಗೆ ಧನ್ಯವಾದಗಳನ್ನು ತಿಳಿಸಿ, ಅಂತಹ ಸಾರ್ಥಕ ಕಾರ್ಯಕ್ರಮಗಳು ಮುಂದುವರೆಯಲಿ ಎಂಬ ಆಶಯ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.