Wednesday, July 9, 2025

ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕರಿಸಿದರು.

ವಿಜಯಪುರ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ 2016ರ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಜುಲೈ 09ರಂದು ಅಧಿಕಾರ ಸ್ವೀಕರಿಸಿದರು.

 ವಿಜಯಪುರ ನಿರ್ಗಮಿತ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಬರ ಮಾಡಿಕೊಂಡು, ಹೂಗುಚ್ಛ ನೀಡಿ ಸ್ವಾಗತಿಸಿ, ಬುಧವಾರ ಅಧಿಕಾರ ಹಸ್ತಾಂತರಿಸಿದರು.

 ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವೈದ್ಯಕೀಯ ಪದವಿ ಪಡೆದಿರುವ ಇವರು, ಕಳೆದ 2 ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಯಾಗಿದ್ದಾರೆ.

 ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ, ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ತದನಂತರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಗಳಾಗಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಅಧಿಕಾರಿಗಳಾಗಿ ಹಾಗೂ ಜಿಲ್ಲೆಯ ಇಂಡಿ ಉಪ ವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, July 6, 2025

ಸುಜಾತಾ ಸಿಂಗೆ ವಾಣಿಜ್ಯ ವಿಭಾಗದಲ್ಲಿ ಅತ್ಯುನ್ನ ಶ್ರೇಣಿಯಲ್ಲಿ ಉತ್ತೀರ್ಣ ಗೌರವ ಸನ್ಮಾನ

ವಿಜಯಪುರ : ಕುಮಾರಿ ಸುಜಾತಾ ಸಿಂಗೆ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 512 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಮಹಾವಿದ್ಯಾಲದ ಕೀರ್ತಿಯನ್ನು ಹೆಚ್ಚಿಸಿದ ಹಿನ್ನೆಲೆ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮೇಶ್ವರ ಸ್ವತಂತ್ರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ, ಚಡಚಣವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸುಜಾತಾ ಸಿಂಗೆ ವಿದ್ಯಾರ್ಥಿನಿಯ ಸಾಧನೆಗೆ ಮಹಾವಿದ್ಯಾಲಯದ ಅಧ್ಯಕ್ಷರು, ಪ್ರಾಚಾರ್ಯರರು ಸೇರಿದಂತೆ ಮಹಾವಿದ್ಯಾಲಯದ ಆಡಳಿತ ಮಂಡಳಿ ವರ್ಗದವರು ಅಭಿನಂದಿಸಿದ ಹಾರೈಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, July 5, 2025

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಿತ ಅಧ್ಯಯನ ವಿಭಾಗ ಹಾಗೂ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಅಡಿಯಲ್ಲಿ ಗ್ರಂಥಗಳ ಲೋಕಾರ್ಪಣೆ

 ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಿತ ಅಧ್ಯಯನ ವಿಭಾಗ ಹಾಗೂ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಅಡಿಯಲ್ಲಿ ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವತಿಯಿಂದ ಪ್ರಕಟಿಸಲಾದ “ಗ್ರಂಥಗಳ- ಲೋಕಾರ್ಪಣೆ”ಯನ್ನು ಶುಕ್ರವಾರ, ಮಹಿಳಾ ವಿವಿಯ ನೂತನ ಕುಲಪತಿ ಪ್ರೊ.ವಿಜಯಾ ಬಿ ಕೋರಿಶೆಟ್ಟಿ, ಡಾ.ವೇಣುಗೋಪಾಲ ಹೆರೂರ, ಕುಲಸಚಿವ ಶಂಕರಗೌಡ ಸೋಮನಾಳ, ಡಾ.ಎನ್.ಬಿ ನಡುವಿನಮನಿ, ಪ್ರೊ.ಜಿ.ಜಿ.ರಜಪೂತ, ಪ್ರೊ.ರಾಜು ಬಾಗಲಕೋಟ ಮತ್ತಿತರರು ಮಾಡಿದರು.

ವಿಜಯಪುರ: ಭಾಸ್ಕರಾಚಾರ್ಯರ ವಿಧಾನದ ಮೂಲಕ ಗಣಿತದ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದಾಗಿದೆ ಎಂದು ಮಹಿಳಾ ವಿವಿಯ ನೂತನ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಹೇಳಿದರು. 

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಿತ ಅಧ್ಯಯನ ವಿಭಾಗ ಹಾಗೂ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಅಡಿಯಲ್ಲಿ ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವತಿಯಿಂದ ಶುಕ್ರವಾರ ಆಯೋಜಿಸಿದ್ದ “ಗ್ರಂಥಗಳ- ಲೋಕಾರ್ಪಣೆ” ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾಮಾನ್ಯ ಪ್ರಕಟಿತ ಪಠ್ಯಪುಸ್ತಕಗಳ ಕಠಿಣ ಶೈಲಿಯಿಂದ ಹೊರಬಂದು, ವಿದ್ಯಾರ್ಥಿಗಳನ್ನು ಅರ್ಥಗರ್ಭಿತ, ಜ್ಯಾಮಿತೀಯ ಹಾಗೂ ಕಾವ್ಯಾತ್ಮಕ ರೀತಿಯಲ್ಲಿ ಚಿಂತಿಸಲು ಪ್ರೋತ್ಸಾಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಕಲನಶಾಸ್ತç, ಬೀಜಗಣಿತ ಮತ್ತು ಸಂಖ್ಯಾಸಿದ್ಧಾAತದ ಪರಿಕಲ್ಪನೆಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು. 

ಇದೇ ಸಂದರ್ಭದಲ್ಲಿ ಹಿಂದೈ ಗಣಿತ ಐತಿಹಾಸಿಕ-ಒಂದು ಮೂಲ ಗ್ರಂಥ ಭಾಗ- II , ಭಾರತದಲ್ಲಿ ಶ್ರೇಣಿ ಗಣಿತ, ಭಾರತೀಯ ಗಣಿತ ಶಾಸ್ತçದ ಚಾರಿತ್ರೆ ಭಾಗ-1, ಬ್ರಹ್ಮಗುಪ್ತಮ್-1 ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಗ್ರಂಥಗಳ ಲೇಖಕ ಹಾಗೂ ನಿವೃತ್ತ ಚಾರ್ಟರ್ಡ ಅಭಿಯಂತರ ಡಾ.ವೇಣುಗೋಪಾಲ ಹೆರೂರ, ಹಾಗೂ ಗುಲಬರ್ಗಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಎನ್.ಬಿ ನಡುವಿನಮನಿ, ವಿವಿಯ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿಜ್ಞಾನ ನಿಕಾಯದ ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು. 

ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಂಯೋಜಕ ಪ್ರೊ.ಜಿ.ಜಿ.ರಜಪೂತ ಸ್ವಾಗತಿಸಿ, ಭಾಸ್ಕಾರಾಚಾರ್ಯರರ ಕೊಡುಗೆಗಳು ಹಾಗೂ ಗ್ರಂಥಗಳ ಬಗ್ಗೆ ಮಾಹಿತಿ ನೀಡಿದರು. ಪ್ರಸಾರಾಂಗ ನಿರ್ದೇಶÀಕಿ ಪ್ರೊ.ರಾಜು ಬಾಗಲಕೋಟ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿಯರಾದ ಸಹನಾ ದೇಶಪಾಂಡೆ ಹಾಗೂ ಸೌಂದರ್ಯ ನಿರೂಪಿಸಿದರು. ಆಸಿಯಾ ದೌಲತಕೋಟಿ ವಂದಿಸಿದರು. 