Friday, July 25, 2025

ದೋಷರಹಿತ-ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಕ್ರಮ -ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ


 

ವಿಜಯಪುರ  : ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರ ಮಾರ್ಗದರ್ಶನದಲ್ಲಿ ಈಗಾಗಲೇ ಇರುವ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಇರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ದೋಷರಹಿತ, ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷರಾದ ಮಾಜಿ ಶಾಸಕ ಸೈಯ್ಯದ ಅಜೀಮಪೀರ ಎಸ್.ಖಾದಿ ಅವರು ಹೇಳಿದರು.

 ನಗರದ ಬಿಡಿಎ ಕಚೇರಿಯ ಹತ್ತಿರವಿರುವ ಹೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಹೆಸ್ಕಾಂ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.

 ಕಳೆದ 2023ನೇ ಸಾಲಿನವರೆಗೆ 10 ಸಾವಿರ ರೂ. ಹಣ ತುಂಬಿ ಆರ್.ಆರ್.ನಂಬರ್ ಪಡೆದ 15200 ರೈತರಿಗೆ ಪಂಪಸೆಟ್‌ಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದ್ದು, 50 ರೂ. ಹಣ ತುಂಬಿ ಆರ್.ಆರ್.ನಂಬರ್ ಪಡೆದ 23 ಸಾವಿರ ರೈತರಿಗೆ ಐಪಿ ಸೆಟ್ ಕಲ್ಪಿಸುವ ಟೆಂಡರ್ ಪ್ರಗತಿಯಲ್ಲಿದೆ. ಗೃಹ ಜ್ಯೋತಿ ಸೇರಿದಂತೆ ರೈತರು, ಸಾರ್ವಜನಿಕರಿಗೆ ಸಮರ್ಪಕವಾಗಿ ವಿದ್ಯುತ್ ಒದಗಿಸಲಾಗುವುದು ಎಂದು ತಿಳಿಸಿದ ಅವರು, ರೈತರ ಬೇಡಿಕೆಯಂತೆ ಗ್ರಾಮೀಣ ಭಾಗದಲ್ಲಿ ಹಗಲು ವೇಳೆಯಲ್ಲಿ 7 ಗಂಟೆ ನಿರಂತರ ತ್ರಿಫೇಸ್ ವಿದ್ಯುತ್ ಪೂರೈಕೆ ಕಾರ್ಯಕ್ಕೆ ಈಗಾಗಲೇ ರಾಜ್ಯದ ದೊಡ್ಡಬಳ್ಳಾಪುರ ಹಾಗೂ ಗದಗ ಜಿಲ್ಲೆಯ ಮೂಸಿಗೆರಿಯಲ್ಲಿ ಜಿಲ್ಲೆಯಲ್ಲಿ ಕುಸುಮಸಿಯಡಿಯಲ್ಲಿ ಚಾಲನೆ ನೀಡಲಿದ್ದು, ಶೀಘ್ರದಲ್ಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಸಹ ಸೋಲಾರದಿಂದ ಉತ್ಪಾದಿಸಲಾದ ವಿದ್ಯುತ್ ಪಡೆದುಕೊಂಡು ಹಗಲು ವೇಳೆಯಲ್ಲಿ 7 ಗಂಟೆ ವಿದ್ಯುತ್ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. 

ವಿಜಯಪುರಗೆ ಭೂಗರ್ಭ ಕೇಬಲ್ ಅಳವಡಿಕೆ ಮಂಜೂರಾತಿ : ವಿಜಯಪುರ ನಗರದಲ್ಲಿ ಭೂಗರ್ಭ (ಅಂಡರ್‌ಗ್ರೌAಡ್ ಕೇಬಲ್ ಅಳವಡಿಕೆ) ಕೇಬಲ್ ಅಳವಡಿಕೆಗೆ ಇಂಧನ ಇಲಾಖೆಯಿಂದ ಮಂಜೂರಾತಿ ದೊರೆತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು. ಕಳೆದ 20 ರಿಂದ 30 ವರ್ಷ ಹಳೆಯದಾದ ಅಪಾಯಕಾರಿಯಾದ ವಿದ್ಯುತ್ ಕಂಬಗ್‌ಗಳಿAದ ಯಾವುದೇ ಅಪಘಾತಗಳು ಸಂಭವಿಸದAತೆ ನೋಡಿಕೊಳ್ಳಲು ಈಗಾಗಲೇ ಇಂತಹ ಪೋಲ್ಸ್ಗಳನ್ನು ಗುರುತಿಸಿ ತೆರವುಗೊಳಿಸಿ ಬದಲಿ ಕಂಬಗಳÀ ಅವಳಡಿಕೆ ಹಾಗೂ ಅಪಾಯಕಾರಿಯಾದ ವಿದ್ಯುತ್ ಟ್ರಾನ್ಸ್ಫಾರ್ಮರ್‌ಗಳಿದ್ದಲ್ಲಿ ಇದನ್ನು ಶಿಫ್ಟ್ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಹೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದಲ್ಲಿ ತಕ್ಷಣವೇ ಹೆಸ್ಕಾಂ ಅಧಿಕಾರಿಗಳು ಸ್ಪಂದಿಸಿ ಅಗತ್ಯ ಕ್ರಮ ವಹಿಸಲಿದ್ದಾರೆ ಎಂದು ಅವರು ಹೇಳಿದರು. 

 ಸ್ಮಾರ್ಟ್ ಮೀಟರ್ ಅಳವಡಿಕೆಗೆ ಚೆಸ್ಕಾಂ ಹಾಗೂ ಬೆೆಸ್ಕಾಂನಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಭಾಗದಲ್ಲಿ ಸ್ಮಾರ್ಟ್ ಮಿಟರ್ ಅಳವಡಿಸುವ ಪ್ರಸ್ತಾವನೆ ಇದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಲಾಗುವುದು. ಹೆಸ್ಕಾಂ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ 350 ಲೈನ್‌ಮನ್ ನೇಮಕಾತಿ ಪ್ರಕ್ರಿಯೆಯಲ್ಲಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಮೆರಿಟ್ ಹಾಗೂ ಕೌನ್ಸಿಲಿಂಗ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿ, ನೇಮಕಾತಿಯಾದವರಿಗೆ ಅಗತ್ಯವಿರುವ ಕಡೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು. 

 ಪತ್ರಿಕಾಗೋಷ್ಠಿಯಲ್ಲಿ ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ಧಪ್ಪ ಬಿಂಜಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಕ್ಕಳ ಆರೋಗ್ಯ ಕಡೆ ಹೆಚ್ಚಿನ ನಿಗಾ ವಹಿಸಿ - ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ


 ವಿಜಯಪುರ  : ಯುವಕರಲ್ಲಿ ಹೃದಯ ಸಂಬAಧಿ ಕಾಯಿಲೆಗಳು ಹೆಚ್ಚುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಮಕ್ಕಳ ಆರೋಗ್ಯ ಕಡೆ ಹೆಚ್ಚು ನಿಗಾ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಹೇಳಿದರು.

 ಇಂದು ನಗರದ ಅಲ್ಪ ಸಂಖ್ಯಾತರ ವಸತಿ ಶಾಲೇಜು, ಎಸ್.ಎಸ್. ಪಿ.ಯು ಕಾಲೇಜು ಹಾಗೂ ಸೇಂಟ್ ಜೊಸೆಪ್ ಶಾಲೆಗಳಿಗೆ ಅನಿರೀಕ್ಷವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಠಕ್ಕೆ ಹತ್ತಿರ ವಿರುವ ಅಲ್ಪ ಸಂಖ್ಯಾತರ ವಸತಿ ಕಾಲೇಜಿಗೆ ಭೇಟಿ ನೀಡಿ ಆವರಣದಲ್ಲಿರುವ ಹೆಣ್ಣು ಮಕ್ಕಳ ವಾಸಿಸುವ ಕೊಠಡಿಯಲ್ಲಿ ಅವಶ್ಯಕ್ಕಿಂತ ಹೆಚ್ಚು ಮಕ್ಕಳ ವಾಸಿಸುತ್ತಿರುವುದನ್ನು ಕಂಡು ಹೆಚ್ಚುವರಿ ಮಕ್ಕಳಿಗೆ ಪರ್ಯಾಯ ವ್ಯವಸ್ಥ ಕಲ್ಪಿಸಬೇಕು, ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ಉತ್ತಮ ಆಹಾರ ಹಾಗೂ ಸುವ್ಯವಸ್ಥಿತ ವಸತಿ ಕಲ್ಪಿಸುವಂತೆ ಹಾಗೂ ಸ್ವಚ್ಚತೆಗೆ ಹೆಚ್ಚು ಗಮನ ಹರಿಸಬೇಕು ಎಂದು ಅವರು ಹೇಳಿದರು. 

 ಯುವಕರಲ್ಲಿ ಹೆಚ್ಚು ಹೃದಯಕ್ಕೆ ಸಂಬAಧಿತ ಕಾಯಿಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಶಿಕ್ಷಣದೊಂದಿಗೆ ಯೋಗ, ಪಿಜಿಕಲ್ ಎಜುಕೇಶನ್ ಮೇಲಿಂದ ಮೇಲೆ ನೀಡಬೇಕು, ಪ್ರತಿ ವಾರ ಮಕ್ಕಳ ಆರೋಗ್ಯ ತಪಾಸನೆ ಕೈಗೊಳ್ಳಬೇಕು, ಮಕ್ಕಳಿಗೆ ಕನ್ನಡ ಬಾಷೆಯೊಂದಿಗೆ ಇಂಗ್ಲೀಷ ಬಾಷೆಯನ್ನು ಕಲಿಸಿದಲ್ಲಿ ಮುಂದಿನ ದಿನಗಳಲ್ಲಿ ಸ್ಪರ್ದಾತ್ಮಕವಾಗಿ ಪರೀಕ್ಷೆಗಳನ್ನು ಬರೆಯಲು ಹೆಚ್ಚು ಅನುಕೂಲವಾಗಲಿದೆ. ವಸತಿ ನಿಲಯ, ಶಾಲಾ ಕಾಲೇಜುಗಳಲ್ಲಿ ಚೈಲ್ಡ್ ಪ್ರೊಟಕ್ಷನ್ ಪಾಲಸಿ ಕಾಯಿದೆ 2016 ಕುರಿತು ಜಾಗೃತಿ ಮೂಡಿಸಬೇಕು. ಮಕ್ಕಳ ಸಹಾಯವಾಣಿ, ಸಲಹಾ ಪೆಟ್ಟಿಗೆ ಕಡ್ಡಾಯ ಅಳವಡಿಸಿರಬೇಕು ಮಕ್ಕಳ ಸುರಕ್ಷತೆ ಕುರಿತು ಸಮಿತಿಗಳನ್ನು ರಚಿಸಿರಬೇಕು, ಮೇಲಿಂದ ಮೇಲೆ ಪಾಲಕರ ಸಭೆಗಳನ್ನು ಕರೆದು ಪಾಲಕರ ಹಾಗೂ ಮಕ್ಕಳ ಅಭಿಪ್ರಾಯ ತಿಳಿಯಬೇಕು. 500 ಶಾಲಾ ಮಕ್ಕಳಿರುವಲ್ಲಿ ಓರ್ವ ಕೌನ್ಸಿಲರಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಅದರಂತೆ ನಗರದ ಎಸ್.ಎಸ್. ಪಿ.ಯು ಕಾಲೇಜು ಹಾಗೂ ಸೇಂಟ್ ಜೊಸೆಪ್ ಶಾಲೆಗಳಿಗೆ ಪರಿಶೀಲನೆ ನಡೆಸಿದ ಅವರು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಯಾವುದೇ ತರಹದ ತೊಂದರೆಗಳಿದ್ದಲ್ಲಿ ಪತ್ರ ಮುಖಾಂತರ ತಿಳಿಸಿದಲ್ಲಿ ಆಯೋಗವು ಈ ಕುರಿತು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. 

 ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ ಚವ್ಹಾಣ, ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳಾದ ಆರ್.ವಿ. ಹೊಸುರ, ಎಸ್.ಎಸ್ ಕಾಲೇಜಿನ ಪ್ರಾಚಾರ್ಯರಾದ ಡಾ. ಡಿ.ಬಿ ಅಕಮಂಚಿ, ಸೇಂಟ್ ಜೊಸೆಪ್ ಕಾಲೇಜಿನ ಪ್ರಾಚಾರ್ಯರಾದ ಆನ್ವಿಸಾ ಬೋಸ್ಕೋ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, July 24, 2025

ಜು.28 ಕ್ಕೆ ಹಿರಿಯ ಹೋರಾಟಗಾರ ಕಾಂ. ಭೀಮಶಿ ಕಲಾದಗಿ ಮೂರ್ತಿ ಪ್ರತಿಷ್ಠಾಪನೆ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ರೈತ ಮುಖಂಡ, ಹೋರಾಟಗಾರ ಕಾಂ. ದಿ.ಭೀಮಶಿ ಕಲಾದಗಿ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ನೆನಪು ಕಾರ್ಯಕ್ರಮ ಜುಲೈ 28 ರಂದು ಬೆಳಿಗ್ಗೆ 11ಕ್ಕೆ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ನಡೆಯಲಿದೆ. ಸಚಿವ ಶಿವಾನಂದ ಪಾಟೀಲ ಅವರು ಕಲಾದಗಿ ಅವರ ಪುತ್ಥಳಿಯನ್ನು ಅನಾವರಣ ಮಾಡಲಿದ್ದಾರೆ. ಕಾರ್ಮಿಕ ಮುಖಂಡ ವಿ.ಜಿ.ಕೆ.ನಾಯರ್,  ಹಿರಿಯ ಹೋರಾಟಗಾರರಾದ ಅಣ್ಣಾರಾಯ ಈಳಗೇರ, ವಕೀಲ ಶ್ರೀಧರ ಕುಲಕರ್ಣಿ, ರೈತ ಮುಖಂಡ ಪಂಚಪ್ಪ ಕಲಬುರ್ಗಿ, ಮಲ್ಲಿಕಾರ್ಜುನ ಯಂಡಿಗೇರಿ, ರಿಯಾಜ್ ಫಾರೂಕಿ, ಡಿ.ಜಿ.ಬಿರಾದಾರ, ಸೋಮನಾಥ ಕಳ್ಳಿಮನಿ,  ಮುಖಂಡ ಬಿ.ಡಿ.ಪಾಟೀಲ ಸೇರಿದಂತೆ ಅಪಾರ ಅಭಿಮಾನಿಗಳು ಸೇರಿದಂತೆ ಮತ್ತಿತರರು ಅಪಾಲ್ಗೊಳ್ಳುವರು ಎಂದು ಭೀಮಶಿ ಅವರ ಸುಪುತ್ರ ಸುರೇಶ ಕಲಾದಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, July 23, 2025

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ : ಸಚಿವ ಸಂತೋಷ ಲಾಡ್

                                    

 ವಿಜಯಪುರ : ವಿವಿಧ ಸಣ್ಣ ಸಣ್ಣ ವೃತ್ತಿ ಕೈಗೊಂಡು, ವೃತ್ತಿಯನ್ನೇ ಅವಲಂಬಿಸಿ ಶ್ರಮಿಜೀವಿಯಾಗಿ ತಮ್ಮ ಜೀವನ ನಿರ್ವಹಿಸುತ್ತಿರುವ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು. 

 ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಬುಧವಾರ ಆಯೋಜಿಸಿದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ವಿತರಿಸಿ ಅವರು ಮಾತನಾಡಿದರು. 

 ರಾಜ್ಯದಾದ್ಯಂತ ವಿವಿಧ ವೃತ್ತಿಗಳಲ್ಲಿ ತೊಡಗಿರುವ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಷ್ಟೇನೂ ಸಬಲರಾಗಿರುವುದಿಲ್ಲ. ಸಂಘಟಿತ ಕಾರ್ಮಿಕರಿಗೆ ದೊರಕುವ ಕಾನೂನಾತ್ಮಕ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೂ ದೊರೆತು ಅವರ ಜೀವನಮಟ್ಟ ಸುಧಾರಣೆಗೊಳ್ಳಲಿ ಎಂದು ಸರ್ಕಾರ ಸದುದ್ದೇಶ ಹೊಂದಿ, ವಿವಿಧ ಯೋಜನೆಗಳಡಿ ಈ ಕಾರ್ಮಿಕರನ್ನು ಒಳಪಡಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು. 

 ಅಸಂಘಟಿತ ವಲಯದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬAಧಿಸಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಸೌಲಭ್ಯ ಒದಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರ ಸಾರಿಗೆ ಮತ್ತು ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಅಧಿನಿಯಮ 2024ನ್ನು ಜಾರಿಗೆ ತಂದಿದ್ದು, ಇದಕ್ಕನುಗುಣವಾಗಿ ನಿಯಮಾವಳಿಗಳನ್ನು ರೂಪಿಸಿ ಮಂಡಳಿ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ, ಕರ್ನಾಟಕ ರಾಜ್ಯ ದಿನ ಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಮಂಡಳಿ, ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024, ಕರ್ನಾಟಕ ಪ್ಲಾಟ್‌ಫಾರ್ಮ ಆಧಾರಿತ ಗಿಗ್ ಕಾರ್ಮಿಕರ ಅಧಿನಿಮ-2025, ಕಾರ್ಮಿಕರಿಗೆ ಸುರಕ್ಷತೆ ಒದಗಿಸುವ ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು-2024 ಸೇರಿದಂತೆ ಮಂಡಳಿ ವತಿಯಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು. 

 ಅಸಂಘಟಿತ ವಲಯದ ಕಾರ್ಮಿಕರಿಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 30 ರಿಂದ 40 ಲಕ್ಷ ಕಾರ್ಮಿಕರು ಒಳಗೊಂಡಿದ್ದು, ಈ ಕಾರ್ಮಿಕರನ್ನು ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ. ಸರ್ಕಾರದಿಂದ ಜಾರಿಗೊಂಡಿರುವ ಸೌಲಭ್ಯಗಳು ಕಾರ್ಮಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಒದಗಿಸಲಾಗುತ್ತಿದ್ದು, ಈವರೆಗೆ ರಾಜ್ಯದಲ್ಲಿ 25,45,607 ಕಾರ್ಮಿಕರು ನೊಂದಣಿಯಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ 102971 ನೊಂದಾಯಿಸಿಕೊAಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ಸ್ಮಾರ್ಟ್ ಕಾರ್ಡ್ ಪಡೆದುಕೊಂಡು ಸರ್ಕಾರದ ಯೋಜನೆಗಳ ಲಾಭ ಪಡೆದು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು. 

 ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕ್ಕಿಂಗ್ ಗುಮಾಸ್ತ್, ಸಮಯ ಪಾಲಕರು, ಕಾವಲುಗಾರ ಹಾಗೂ ಪರಿಚಾರಕರು, ಮೋಟಾರ್ ಗ್ಯಾರೇಜ್‌ಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಸೇರಿದಂತೆ ವಿವಿಧ ಕಾರ್ಮಿಕರನ್ನು ಸಾಮಾಜಿಕ ಭದ್ರತಾ ಸೌಲಭ್ಯದಡಿ ಒಳಪಡಿಸಲಾಗಿದೆ ಎಂದು ಅವರು ಹೇಳಿದರು. 

 ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೀದರ ಮಾದರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸೊಸಾಯಿಟಿ ರಚನೆ ಮಾಡಿ ಸೊಸಾಯಿಟಿ ಮೂಲಕವೇ ವೇತನ ಪಾವತಿಸುವ ವ್ಯವಸ್ಥೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಹೆಚ್ಚೆಚ್ಚು ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಶಾ ದೀಪ ಯೋಜನೆಯನ್ನು ಜಾರಿಗೊಳಿಸಿ ಮಾಲೀಕರು ಹಾಗೂ ಉದ್ಯೋಗದಾತರನ್ನು ಉತ್ತೇಜಿಸಲಾಗುತ್ತಿದೆ ಎಂದು ಅವರು ಹೇಳಿದರು.

 ಸರ್ಕಾರ ಜಾರಿಗೊಳಿಸಿರುವ ಪಂಚ್ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಹಸನಗೊಳಿಸಿದೆ. ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಪ್ರಯಾಣ ಬೆಳೆಸಲಾಗಿದೆ. ಸರ್ಕಾರದಿಂದ ಪಂಚ್ ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ 60 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಎಲ್ಲ ವರ್ಗದ ಜನರನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಡಿ ಸೌಲಭ್ಯಗಳನ್ನು ದೊರಕಿಸಲಾಗುತ್ತಿದೆ ಎಂದು ಅವರು ಹೇಳಿದರು. 

 ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಅವರು ಮಾತನಾಡಿ, ಅಸಂಘಟಿತ ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ವಿತರಿಸುವ ಮೂಲಕ ದುರ್ಬಲ ವರ್ಗದವರನ್ನು ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಾರ್ಮಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಬದುಕನ್ನು ಸುಭದ್ರಗೊಳಿಸಿಕೊಳ್ಳುವಂತೆ ಅವರು ಕರೆ ನೀಡಿದರು.

 ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 15 ಜನ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು. ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರದಡಿ ಇಬ್ಬರಿಗೆ ಪರಿಹಾರ ಚೆಕ್, ಅಪಘಾತದಿಂದ ಮರಣ ಹೊಂದಿದ ಇಬ್ಬರೂ ಕಾರ್ಮಿಕರ ಮಕ್ಕಳಿಗೆ ತಲಾ 10 ಸಾವಿರ ರೂ. ಚೆಕ್ ಮತ್ತು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಮರಣ ಹೊಂದಿದ ಕಾರ್ಮಿಕರ ಅವಲಂಬಿತರಿಗೆ 10 ಸಾವಿರ ರೂ.ಗಳ ಚೆಕ್‌ನ್ನು ವಿತರಿಸಲಾಯಿತು. 

 ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ.ಎಸ್.ಬಿ.ರವಿಕುಮಾರ, ಕಾರ್ಮಿಕ ಇಲಾಖೆ ಉಪ ಕಾರ್ಮಿಕ ಆಯುಕ್ತರಾದ ಡಿ.ಜಿ.ನಾಗೇಶ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ, ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಕಾರ್ಮಿಕ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.