Tuesday, August 26, 2025
ಇಂದಿನ ಪೀಳಿಗೆ ದೇವರಾಜ ಅರಸು ಅವರ ಜೀವನ ಸಾಧನೆ ತಿಳಿದುಕೊಳ್ಳಬೇಕು : ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಮಂಡಳಿಯ ಅಧ್ಯಕ್ಷ ಹಾಗೂ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅಶೋಕ ದಳವಾಯಿ
ವಿಜಯಪುರ: ದಿವಂಗತ ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿದ್ದ “ಊಳುವವನೇ ಭೂಮಿಯ ಒಡೆಯ” ಎಂಬ ಕ್ರಾಂತಿಕಾರಿ ಭೂ ಸುಧಾರಣಾ ಕಾಯ್ದೆ ದೇಶದಲ್ಲಿಯೇ ಮಾದರಿಯಾಗಿತ್ತು ಎಂದು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಮಂಡಳಿಯ ಅಧ್ಯಕ್ಷ ಹಾಗೂ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಅವರು ಅಭಿಪ್ರಾಯಪಟ್ಟರು.
ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮತ್ತು ಸಮಾನ ಅವಕಾಶ ಘಟಕದ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸರ ೧೧೦ನೇ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕದಲ್ಲಿ ಜಮೀನ್ದಾರಿ ಪದ್ಧತಿ, ಜೀತ ಪದ್ಧತಿ ಮತ್ತು ತಲೆಮೇಲೆ ಮಲ ಹೊರುವ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದ ಶ್ರೇಯಸ್ಸು ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅರಸು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಹುವಾಗಿ ಶ್ರಮಿಸಿದ್ದರು ಎಂದ ಅವರು, ಅರಸು ಒಬ್ಬ ಕರ್ಮಯೋಗಿ, ರಾಜಕೀಯ ಮುತ್ಸದ್ಧಿಯಾಗಿದ್ದರು ಎಂದು ಬಣ್ಣಿಸಿದರು.
ರಾಜ್ಯದಲ್ಲಿ ೭೦-೮೦ರ ದಶಕದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಪರಿವರ್ತನೆಗೆ ಗಟ್ಟಿಯಾದ ಅಡಿಗಲ್ಲು ಹಾಕಿದ್ದ ದೇವರಾಜ ಅರಸು ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದ್ದರು. ಇದರ ಪರಿಣಾಮವಾಗಿ ಜನರ ಬಡತನ ದೂರ ಮಾಡುವ ಇಚ್ಛಾಶಕ್ತಿ ಅವರಲ್ಲಿತ್ತು ಎಂದು ಅವರು ವಿವರಿಸಿದರು.
ಇಂದಿನ ಪೀಳಿಗೆ ದೇವರಾಜ ಅರಸು ಅವರ ಜೀವನ ಸಾಧನೆ ತಿಳಿದುಕೊಳ್ಳಬೇಕು. ಅವರ ಜೀವನಾದರ್ಶಗಳನ್ನು ನಾವೆಲ್ಲರೂ ನಮ್ಮ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕು. ಅಂದಾಗ ಮಾತ್ರ ನಾವು ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಅಶೋಕ ದಳವಾಯಿ ಪ್ರತಿಪಾದಿಸಿದರು.
ಡಿ.ದೇವರಾಜ ಅರಸು ಅವರು ಸದಾ ಸಮಾನತೆಯ ಹಾದಿಯನ್ನು ತೋರಿದ ಮಹಾನ್ ನಾಯಕ. ಸಮಾಜದಲ್ಲಿ ಮೇಲು–ಕೀಳು ಎಂಬ ಅಸಮಾನತೆಗಳನ್ನು ಹೋಗಲಾಡಿಸಲು ಅವರು ದೃಢ ಪ್ರಯತ್ನ ನಡೆಸಿದರು. ತಮ್ಮ ದೃಢ ಸಂಕಲ್ಪದಿAದ ಶ್ರಮಜೀವಿಗಳ ಹಕ್ಕನ್ನು ಸಂರಕ್ಚಿಸಿದರು. ಅರಸು ಅವರ ಜೀವನವೇ ಒಂದು ಪಾಠ. ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಅವರು ಬದ್ಧರಾಗಿ ದುಡಿಯುವುದರ ಮೂಲಕವೇ ನಿಜವಾದ ನಾಯಕತ್ವವೆಂದರೇನು ಎಂಬುದನ್ನು ತೋರಿಸಿಕೊಟ್ಟವರು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ಡಿ.ದೇವರಾಜ್ ಅರಸು ಅವರು ಕರ್ನಾಟಕದ ರಾಜಕೀಯದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಜನಪರ ಆಡಳಿತದ ನಿಜವಾದ ಪ್ರತಿರೂಪವಾಗಿದ್ದರು. ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಅವರು ಕೈಗೊಂಡ ಕಲ್ಯಾಣಕಾರಿ ಕ್ರಮಗಳು ಇಂದಿಗೂ ಮಾದರಿಯಾಗಿವೆ. ಪಾರದರ್ಶಕತೆ, ಸರಳತೆ ಹಾಗೂ ನೈತಿಕತೆಗೆ ಹೆಸರಾಗಿದ್ದ ಅವರ ಆಡಳಿತ ಶೈಲಿ ಇಂದಿನ ರಾಜಕೀಯ ನಾಯಕತ್ವಕ್ಕೆ ದಿಕ್ಕು ತೋರಿಸುವಂತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಘಟಕದ ಸಂಯೋಜಕ ಪ್ರೊ.ಶ್ರೀನಿವಾಸ, ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ನಾತಕ ಅಧ್ಯಯನ ವಿಭಾಗದ ವಿಶೇಷ ಅಧಿಕಾರಿ ಪ್ರೊ.ಸಕ್ಪಾಲ ಹೂವಣ್ಣ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಶ್ವೇತಾ ಅತಿಥಿಗಳನ್ನು ಪರಿಚಯಿಸಿದರು. ಡಾ.ತಹಮೀನಾ ನಿಗಾರ ಸುಲ್ತಾನಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಉಪಾಧ್ಯೆ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಪತ್ರಕರ್ತೆ ಪ್ರೇಮಾ ಕುಲಕರ್ಣಿ ಅವರು ರಚಿಸಿರುವ 'ಹೂ ಮಾಲೆ' ಗ್ರಂಥ ಲೋಕಾರ್ಪಣೆ | ಮಾನವೀಯತೆ, ಪ್ರೀತಿ ಬೋಧಿಸುವ ಪಠ್ಯ ಹಿಂದೆಂದಿಗಿಂತಲೂ ಈಗ ಅಗತ್ಯ : ಲೇಖಕಿ ಭಾರತಿ ಪಾಟೀಲ
ವಿಜಯಪುರ : ಪಠ್ಯ ಪುಸ್ತಕ ರಚನೆ ರಾಜಕೀಯ ಪ್ರೇರಿತವಾಗಿರಬಾರದು, ಅದು ರಾಜಕೀಯ ಮುಕ್ತವಾಗಿರಬೇಕು, ಮಾನವೀಯತೆ, ಪ್ರೀತಿ ಬೋಧಿಸುವ ಪಠ್ಯ ಹಿಂದೆಂದಿಗಿಂತಲೂ ಈಗ ಅಗತ್ಯವಾಗಿದೆ ಎಂದು ಲೇಖಕಿ ಭಾರತಿ ಪಾಟೀಲ ಹೇಳಿದರು.
ವಿಜಯಪುರದ ಜಿಲ್ಲಾ ಪಂಚಾಯತ ಬಳಿ ಇರುವ ಗಾಂಧೀ ಭವನದಲ್ಲಿ ಶ್ರೀ ಹಲಗಣೀಶ ಪ್ರಕಾಶನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪತ್ರಕರ್ತೆ ಪ್ರೇಮಾ ಕುಲಕರ್ಣಿ ಅವರು ರಚಿಸಿರುವ 'ಹೂ ಮಾಲೆ' ಗ್ರಂಥ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿದ ಅವರು, ಇಂದು ಹೊಡಿ, ಬಡಿ, ಕಡಿ ಸಾಹಿತ್ಯವೇ ಮಕ್ಕಳಲ್ಲಿ ಪ್ರಭಾವ ಬೀರುತ್ತಿದೆ, ಮಕ್ಕಳಿಗೆ ಹಾಡು ಹೇಳಲು ಹೇಳಿದರೆ ಹೊಡಿ ಮಗ ಹಾಡು ಹೇಳುತ್ತಾರೆ, ಹೀಗಾಗಿ ಪಠ್ಯದಲ್ಲಿ ಮಾನವೀಯತೆ, ಪ್ರೀತಿ ಪ್ರತಿಪಾದಿಸುವ ವಿಷಯಗಳು ಪಠ್ಯದಲ್ಲಿರಬೇಕು ಎಂದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Monday, August 25, 2025
ಕೈ ಎತ್ತದೆ.. ಕೈಪಿಡಿ ಹೊರ ತಂದ ಬಸವರಾಜ ಜಾಲವಾದಿ". ಪ್ರಾಚಾರ್ಯ ಕೆ. ಜಿ. ಲಮಾಣಿ
ಕೂಡಗಿ: ವೆಬ್ ಕ್ಯಾಮೆರಾದ ಕೆಳಗೆ ಕೂತು ಆನಂದದಿಂದ ಪರೀಕ್ಷೆ ಬರೆಯಬೇಕೆ ವಿನಹ ಭಯದಿಂದಲ್ಲ. ಹಾಗಾದರೆ ಪ್ರತಿ ಘಟಕದ ಅಂಶಗಳನ್ನು ಸಹಿತ ನೀವು ಓದಿಕೊಳ್ಳಬೇಕಾಗುತ್ತದೆ. ಅದಕ್ಕೆ ಇಂತಹ ಕೈಪಿಡಿಗಳು ಮಾದರಿಯಾಗಿ ನಿಲ್ಲುತ್ತವೆ. ಕೈ ಎತ್ತದೆ ಕೈಪಿಡಿಯನ್ನು ಹೊರ ತಂದಿರುವ ಬಸವರಾಜ ಜಾಲವಾದಿಯವರು ನಿಜಕ್ಕೂ ಅಭಿನಂದನಾರ್ಹರು ಎಂದು ಪ್ರಾಚಾರ್ಯ ಕೆಜಿ ಲಮಾಣಿ ಹೇಳಿದರು.
ಪ್ರೊ: ಬಸವರಾಜ ಜಾಲವಾದಿ ಅವರು ಬರೆದ ದ್ವಿತೀಯ ಪಿಯುಸಿಯ ಸಮಾಜ ಶಾಸ್ತ್ರದ ಕೈಪಿಡಿ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಆಳವಾಗಿ ಓದುವುದು ಕಡಿಮೆಯಾದಷ್ಟು ಸಮಸ್ಯೆಗಳನ್ನೆದುರಿಸಬೇಕಾಗುತ್ತದೆ ಇಂತಹ ಸಂದರ್ಭದಲ್ಲಿ ಈ ತರನಾದ ಕೈಪಿಡಿಗಳು ಪಾಠದ ಅಂಶಗಳಾದ ಜ್ಞಾನ, ಕೌಶಲ್ಯ, ತಿಳುವಳಿಕೆ, ಅಳವಡಿಕೆ, ಅನ್ವಯ, ಹೋಲಿಕೆ ಎಲ್ಲ ಅಂಶಗಳನ್ನು ಒಳಗೊಂಡಿರುವ ಸೃಜನಾತ್ಮಕವಾದ ಇಂಥಹ ಕೈಪಿಡಿ ಹೊರ ತಂದ ಪ್ರೊ ಬಸವರಾಜ ಜಾಲವಾದಿ ಅಭಿನಂನಾರ್ಹರು. ಉಪನ್ಯಾಸಕರಾದವರು ಪ್ರತಿಯೊಂದು ಕಾಲೇಜಿನಲ್ಲಿ ಈ ತರದ ಕೈಪಿಡಿ ಮಾಡಿದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಎದುರಿಸುವುದು ಸುಲಭವಾಗುತ್ತದೆ. ಆ ದಿಶೆಯಲ್ಲಿ ಪ್ರೊ ಬಸವರಾಜ ಜಾಲವಾದಿಯವರು ಮಾದರಿಯಾಗಿ ನಿಲ್ಲುತ್ತಾರೆ ಎಂದರು.
ಸ್ವಾಗತ ಹಾಗೂ ಪ್ರಾಸ್ತಾನಿಕ ಮಾತುಗಳನ್ನಾಡಿದ ಬಸವರಾಜ ಜಾಲವಾದಿಯವರು ಓದುವುದನ್ನು ಕಲಿತರೆ ಬರೆಯಲು ಮಾತನಾಡಲು ತಾನಾಗಿಯೇ ಬರುತ್ತದೆ ವಿನಯ ವೃದ್ಧಿಯಾಗುತ್ತದೆ ನಮ್ಮ ಮನಸ್ಥಿತಿ ಸರಿಯಾದ ಮಾರ್ಗದತ್ತ ನಮ್ಮನ್ನು ಕೊಂಡೊಯ್ಯುತ್ತದೆ ಪಿಯುಸಿ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ತರ ತಿರುವುಗಳಿಗೆ ಕಾರಣವಾಗಬಲ್ಲ ಹಂತ 2015 ರಿಂದ ನಿರಂತರವಾಗಿ ನಾನು ಪ್ರತಿ ವರ್ಷ ಇಂತಹ ಕೈಪಿಡಿಗಳನ್ನು ಹೊರ ತರುತ್ತಿದ್ದೇನೆ ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದು ತಿಳಿ ಹೇಳಿದರು.
ಕಳೆದ ಮೂರು ಘಟಕಗಳ ಮೇಲಿನ ರಸಪ್ರಶ್ನೆ ಕಾರ್ಯಕ್ರಮಗಳನ್ನು ಏರ್ಪಡಿಸಿ ಹಾಗೂ ಘಟಕ ಪರೀಕ್ಷಗಳನ್ನ ಏರ್ಪಡಿಸಿ ಅದರಲ್ಲಿ ಪ್ರಥಮ ದ್ವಿತೀಯ, ತೃತೀಯ, ಬಂದ ಎಲ್ಲ ವಿದ್ಯಾರ್ಥಿಗಳಿಗೂ ಬಹುಮಾನವನ್ನು ಕೈಪಿಡಿಯ ರೂಪದಲ್ಲಿ ನೀಡಲಾಯಿತು. ವೇದಿಕೆಯ ಮೇಲೆ
ಪ್ರೊ:ಎಸ್. ಬಿ.ದೇಸಾಯಿ ಪ್ರೊ ವ್ಹಿ.ಜಿ ಕಿವುಡಜಾಡರ್, ಡಾ ಲಕ್ಷ್ಮಿ ಅಂಗಡಿ, ಡಾ ಅಮರೇಶಗೌಡ ಪಾಟೀಲ್, ಮೇಘನಾ ಹೆರಕಲ್ ರಾಜೇಶ್ವರಿ ಜಾಧವ್ ಹಾಜರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
.jpg)

