Tuesday, December 23, 2025

2.50 ಕೋಟಿ ಅಕ್ರಮ ಆಸ್ತಿ ಪತ್ತೆ : ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ

ವಿಜಯಪುರ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಬಸವನಬಾಗೇವಾಡಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಹನಮಂತಪ್ಪ ಯರಝರಿ ಅವರಿಗೆ ಸಂಬಂಧಿಸಿದ ನಾಲ್ಕು ಕಡೆ ಆಸ್ತಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, 2.50 ಕೋಟಿ ರೂ.ಗೂ ಹೆಚ್ಚು ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ.

ಅಕ್ರಮ ಆಸ್ತಿ ಕುರಿತು ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಆರೋಪಿ ನೌಕರನಿಗೆ ಸಂಬಂಧಿಸಿದ ಮನೆಯ ಶೋಧನೆ ನಡೆಸಲು ನ್ಯಾಯಾಲಯದಿಂದ ವಾರಂಟ್‌ನ್ನು ಪಡೆದು. ಬೆಳಗ್ಗೆ ಆರೋಪಿ ನೌಕರರಿಗೆ ಸಂಬಂಧಿಸಿದ ವಿಜಯಪುರ ನಗರದ ನವರಸಪುರದ ಮನೆ, ನೌಕರರಿಗೆ ಸಂಬಂಧಿಸಿದ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ಫಾರ್ಮಹೌಸ್, ಮುದ್ದೇಬಿಹಾಳ ನಗರದಲ್ಲಿರುವ ಆರೋಪಿ ಅಧಿಕಾರಿಯ ಮಾವನ ಮನೆ, ಅಪಾದಿತರು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಶೋಧನೆ ಕಾರ್ಯ ನಡೆಸಿದ್ದು, ಶೋಧನೆ ವೇಳೆ ಆರೋಪಿ ವಿಜಯಪುರ ನವರಸಪುರ ಮನೆ, ಲಾಕರ್ ಮತ್ತು ಮಾವನ ಮನೆ ಸೇರಿ ಸುಮಾರು 29,42,000 ರೂ. ನಗದು ಹಣ, ಬೆಳ್ಳಿ ಬಂಗಾರದ ಆಭರಣಗಳು, ವಾಹನಗಳು ಮತ್ತು ಇತರೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲಾತಿಗಳು ದೊರೆತಿದ್ದು, ಅಂದಾಜು 2.50 ಕೋಟಿಗೂ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವದು ಪತ್ತೆಯಾಗಿದೆ.

ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ್ ಮಾರ್ಗದರ್ಶನದಲ್ಲಿ ಡಿಎಸ್‌ಪಿಗಳಾದ ಮಲ್ಲಿಕಾರ್ಜುನ ತುಳಸಿಗೇರಿ, ಬಿ.ಎಸ್. ಪಾಟೀಲ್, ಪೊಲೀಸ್ ಇನ್ಸಪೆಕ್ಟರ್‌ಗಳಾದ ಆನಂದ ಟಕ್ಕನ್ನವರ್, ಆನಂದ ಡೋಣಿ, ನಿಂಗಪ್ಪ ಪೂಜೇರಿ, ಸಂಗಮನಾಥ ಹೊಸಮನಿ ಹಾಗೂ ವಿಜಯಪುರ ಹಾಗೂ ಬೆಳಗಾವಿ ಪೊಲೀಸ್ ಠಾಣೆಯ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, December 9, 2025

https://drive.google.com/file/d/1ue_FGs31toJBL_Q-s565xGBbGsQe8l6e/view?usp=sharing

Monday, December 8, 2025

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಬೇಡಿಕೆ | ಸುವರ್ಣ ವಿಧಾನಸೌಧದಲ್ಲಿ ಪ್ರತಿಧ್ವನಿ

ವರದಿ : ಉಮೇಶ ಶಿವಶರಣ, ಸಂಪಾದಕ

ಈ ದಿವಸ ವಾರ್ತೆ ಬೆಳಗಾವಿ : ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಿಜಯಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಅನಿರ್ಧಿಷ್ಟಾವಧಿ ಧರಣಿ ವಿಷಯ ಮೇಲ್ಮನೆಯಲ್ಲಿ ಸೋಮವಾರ ಪ್ರತಿಧ್ವನಿಸಿತು.

ವಿಧಾನ ಪರಿಷತ್ತಿನ ಸದಸ್ಯ ಕೇಶವಪ್ರಸಾದ್ ಎಸ್. ಅವರು ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಬಹುದಿನಗಳ ಬೇಡಿಕೆಯಿದ್ದು ಸದರಿ ಬೇಡಿಕೆಗೆ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ? ಬಂದಿದ್ದರೆ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ಕೈಕೊಂಡಿರುವ ಕ್ರಮಗಳೇನು? ಎಂದು ಪ್ರಶ್ನಿಸಿದರು.

ವಿಧಾನ ಪರಿಷತ್ತಿನ ಸದಸ್ಯ ಕೇಶವ್ ಪ್ರಸಾದ್ ಎಸ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆ 54(104)ರ ಕ್ಕೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲರವರು ಉತ್ತರಿಸಿ, ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟ ಸರ್ಕಾರದ ಗಮನಕ್ಕೆ ಬಂದಿದೆ. ರಾಜ್ಯದ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕೆAಬುವುದು ಸರ್ಕಾರದ ನೀತಿಯಾಗಿರುತ್ತದೆ. ರಾಜ್ಯ ಸರ್ಕಾರದ ವತಿಯಿಂದ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಅಂದಾಜು ರೂ. 610 ಕೋಟಿಗಳ ಆವರ್ತಕದ ವೆಚ್ಚದ ಅವಶ್ಯಕತೆ ಇರುತ್ತದೆ. ಅದರಂತೆ ಅನುದಾನದ ಲಭ್ಯತೆಯನ್ನು ಆಧರಿಸಿ ಸರ್ಕಾರಿ ವೈದ್ಯಕಿಯ ಕಾಲೇಜುಗಳನ್ನು ಹೊಂದಿರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು. ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಬಗ್ಗೆ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕಿಯ ಕಾಲೇಜನ್ನು ಪ್ರಾರಂಭಿಸುವAತೆ ಧರಣಿಗಳು ನಡೆಯುತ್ತಿದ್ದು ಕಾಲೇಜು ಪ್ರಾರಂಭದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಗಣ್ಯರು ಹಾಗೂ ಜಿಲ್ಲಾ ಮುಖಂಡರೊAದಿಗೆ ಸಭೆಯನ್ನು ನಡೆಸಿ ಪರಿಶೀಲಿಸಲಾಗುವುದು ಎಂದು ವೈದ್ಯಕೀಯ ಸಚಿವರು ತಿಳಿಸಿದ್ದಾರೆ. 

ವಿಜಯಪುರ ಜಿಲ್ಲೆಯಲ್ಲಿ ಕಳೆದ 82 ದಿನಗಳಿಂದ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಹೋರಾಟ ಸಮಿತಿಯಿಂದ ನಿರಂತರ ಧರಣಿ ನಡೆಯುತ್ತಿದೆ. ಧರಣಿಗೆ ಜಿಲ್ಲೆಯ ವಿವಿಧ ಸಂಘಟನೆಗಳು, ವಿವಿಧ ಪಕ್ಷದ ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.