Thursday, September 17, 2026
Sunday, September 13, 2026
ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ: ಕುಲಸಚಿವ ಸೋಮಲಿಂಗ ಗೆಣ್ಣೂರ
ವಿಜಯಪುರ: ಪುಸ್ತಕಗಳು ನಮ್ಮ ದಿನನಿತ್ಯದ ಗೆಳೆಯರಾಗಬೇಕು, ಪುಸ್ತಕಪ್ರೀತಿಯಿಂದ ಮನುಷ್ಯರೂಪದ ಜೀವಿಯೊಬ್ಬ ನಿಜವಾದ ಮನುಷ್ಯನಾಗಿ ರೂಪುಗೊಳ್ಳುವುದು ಸಾಧ್ಯವಾಗುತ್ತದೆಂದು ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಈ ಹಿಂದಿನ ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿದ್ದ ಸೋಮಲಿಂಗ ಗೆಣ್ಣೂರ ಹೇಳಿದರು.
ವಿಜಯಪುರದ ನವರಸಪುರದಲ್ಲಿರುವ ತಿಕೋಟಾದ ನೇತ್ರಾಧಿಕಾರಿ ಡಾ. ಪ್ರಕಾಶ ಪರಣಾಕಾರ ಅವರ ಮನೆಯಲ್ಲಿ ನಡೆದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಪ್ರತಿಯೊಂದು, ನಿಜವಾದ ಪುಸ್ತಕದ ಒಳಗೂ ನಮ್ಮೊಂದಿಗೆ ಸಂವಾದಕ್ಕೆ ಹಾತೊರೆಯುವ ಒಂದು ವ್ಯಕ್ತಿತ್ವ ಮತ್ತು ಮನಸ್ಸಿದೆ ದಿಕ್ಕು ತಪ್ಪಿಸುವ, ಮೌಢ್ಯಬಿತ್ತುವ ಕಂದಾಚಾರಕ್ಕೆ ದೂಡುವ ಪುಸ್ತಕಗಳ ತಿರಸ್ಕರಿಸಿ, ವೈಚಾರಿಕ ಹಾಗೂ ವೈಜ್ಞಾನಿಕತೆ ಬಿತ್ತುವ ಪುಸ್ತಕಗಳ ಓದಬೇಕು ಎಂದರು.
ಈ ಸಂದರ್ಭ ಡಾ. ಮಹಾಂತೇಶ ಬಿರಾದಾರ ಮಾತನಾಡಿ, ಒಂದು ಪುಸ್ತಕವನ್ನೋದುವುದೆಂದರೆ ಬಸವಣ್ಣನ ಸಮಸಮಾಜವನು ಮುನ್ನಡೆಸುವುದು ಎಂದರ್ಥ. ಅದೊಂದು ಹೊಸ ಅನುಭವ ಹಾಗೂ ಪ್ರಪಂಚದಲ್ಲಿ ಸಹೃದಯರು ಕೈಗೊಳ್ಳುವ ಪರ್ಯಟನವೋ ಅಥವಾ ರಸಯಾತ್ರೆಯೋ ಆಗಿರುತ್ತದೆ ಎಂದರು.
ಕನ್ನಡ ಪುಸ್ತಕ ಪ್ರಾಧಿಕಾರದ ವಿಜಯಪುರ ಜಿಲ್ಲಾ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯ ಪ್ರೊ. ಬಸವರಾಜ ಜಾಲವಾದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪುಸ್ತಕ ಓದುವವನು ಒಂದೇ ಜನ್ಮದಲ್ಲಿ ಸಾವಿರ ಜೀವನ ಕಾಣಬಲ್ಲ, ಆದರೆ ಪುಸ್ತಕ ಓದದವನು ಒಂದು ಹುಟ್ಟಿನಲ್ಲಿ ಕೇವಲ ಒಂದೇ ಜೀವನ ಅನುಭವಿಸಬಲ್ಲ’ ಎಂದು ನೆನಪಿಸಿ, ಬುದ್ಧ, ಬಸವ, ಅಂಬೇಡ್ಕರರೇ ಈ ಜನ್ಮಕೆಷ್ಟು ಪುಸ್ತಕ ಓದಿದ ಬಳಿಕ ಇವನಾರವ, ಇವನಾರವ ಎನ್ನದೇ ಇಂವ ನಮ್ಮಂವ, ಇಂವ ನಮ್ಮವ ಎಂದಾದರೆ ಓದಿದ್ದಕ್ಕೂ ಸಾರ್ಥಕವಾಯಿತು ಎಂದು ಪುಸ್ತಕದ ಮಹತ್ವ ಸಾರಿದರು.
ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕಕಮರಿ ಗುರುದೇವಾಶ್ರಮದ ಪರಮಪೂಜ್ಯ ಶ್ರೀ ಆತ್ಮಾರಾಮ ಮಹಾಸ್ವಾಮಿಗಳು ಕನ್ನಡ ಪುಸ್ತಕ ಪ್ರಾಧಿಕಾರದವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ, ಇದೊಂದು ಆದರ್ಶ ಕಾರ್ಯಕ್ರಮ ಪ್ರತಿಯೊಬ್ಬರ ಮನೆಯಲ್ಲೂ ಈ ತರದ ಕಾರ್ಯಕ್ರಮಗಳನ್ನ ಮಾಡಿದಾಗ ಪುಸ್ತಕ ಪ್ರೀತಿಯ ಬಗ್ಗೆ ಒಲವು ಮೂಡುತ್ತದೆ ಹಾಗೂ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಬೇಕೆಂದು ಕರೆಕೊಟ್ಟರು. ಸ್ವಾಮಿಗಳಾದವರ ನಿಜವಾದ ಅಭಿಲಾಶೆಯೂ ಇದೇ ಆಗಿರುತ್ತದೆ. ಸಮಾಜ ಈ ತರದ ಕಾರ್ಯಕ್ರಮ ಹಮ್ಮಿಕೊಂಡು ಕತ್ತಲಿನಿಂದ ಹೊರಬರಲು ಕರೆಕೊಟ್ಟರು.
ಯರಡೋಣದ ಕುಮಾರೇಶ್ವರ ಸ್ವಾಮಿಗಳು, ಪ್ರಗತಿಪರ ರೈತ ಮಲ್ಲಿಕಾರ್ಜುನ ಹಂಜಗಿ, ಶ್ರೀಧರ್ ಮುರಾಳೆ, ಬಾಬೂರಾವ ಮಹಾರಾಜ, ವೀರೇಶ ಹಿರೇಮಠ ವೇದಿಕೆ ಮೇಲಿದ್ದರು.
ಬಸವರಾಜ ಬೆಳಗಲಿ ಸ್ವಾಗತಿಸಿದರು.ಸಿದ್ಧಾರ್ಥ ಪರಣಾಕರ ವಂದಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಕಲ್ಯಾಣ ಕರ್ನಾಟಕ ಸಾರಿಗೆಯ ವಿಜಯಪುರ ವಿಭಾಗದಲ್ಲಿ ಹೈದ್ರಾಬಾದ್ ವಿಮೋಚನಾ ದಿನ ಆಚರಣೆಗೆ ಆಗ್ರಹಿಸಿ ಮನವಿ
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ವಿಜಯಾನಂದ ಟ್ರಾವೆಲ್ಸ್ ಹೊಸ ದಾಖಲೆ!
ಸಾರಿಗೆ ಕ್ಷೇತ್ರದಲ್ಲಿ ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ. (ವಿಟಿಪಿಎಲ್) ಹೊಸ ದಾಖಲೆ ಬರೆದಿದೆ. ವೋಲ್ವೋ ಇಂಡಿಯಾ ಸಂಸ್ಥೆ ಮೂಲಕ ಸಿಂಗಲ್ ಆರ್ಡರ್‌ನಲ್ಲಿ 150 ವೋಲ್ವೋ ಬಸ್‌ಗಳನ್ನು ಖರೀದಿಸಿದೆ. ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ.ಗೆ 150 ವೋಲ್ವೋ-9600 ಐಷಾರಾಮಿ ಸ್ಲೀಪರ್ ಕೋಚ್ ಗೋಲ್ಡ್ ಕ್ಲಾಸ್ ಬಸ್‌ಗಳನ್ನು ಹಸ್ತಾಂತರಿಸಿತು. ಈ ಒಪ್ಪಂದವು ಖಾಸಗಿ ಟ್ರಾವೆಲ್ಸ್‌ವೊಂದು ವೋಲ್ವೋ ಬಸ್‌ಗೆ ನೀಡಿದ ಅತಿದೊಡ್ಡ ಆರ್ಡರ್ ಆಗಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
1,000 ಬಡ ವಿದ್ಯಾರ್ಥಿಗಳಿಗೆ ಶ್ರೀರಾಮ್ ಫೈನಾನ್ಸ್ ವಿದ್ಯಾರ್ಥಿವೇತನ
ವಿಜಯಪುರ: ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ವಿಜಯಪುರ ರೀಜನ್ ವತಿಯಿಂದ ನಗರದ ಆನಂದನಗರದಲ್ಲಿರುವ ಭಾವಸಾರ ಕ್ಷತ್ರೀಯ ಮಂಗಲ ಕಾರ್ಯಾಲಯದಲ್ಲಿ ಬೃಹತ್ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 1,000 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಸ್ವೀಕರಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Saturday, September 5, 2026
ಅರ್ಜುನ್ ರಾಠೋಡ್ ಅವರನ್ನು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
ವಿಜಯಪುರ: ಬಂಜಾರ ಸಮಾಜದ ಹಿರಿಯ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡರಾದ ಶ್ರೀ ಅರ್ಜುನ್ ರಾಠೋಡ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ವಿಜಯಪುರ ಜಿಲ್ಲಾ ಬಂಜಾರ ಸಮಾಜ ಹಾಗೂ ಕಾಂಗ್ರೆಸ್ ಬಂಜಾರಾ ಕಾರ್ಯಕರ್ತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಸಚಿವ ರುದ್ರಪ್ಪ ಲಮಾಣಿ ಹಾಗೂ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಮಾಜದ ಮುಖಂಡರು ಮುಂದಾಗಿದ್ದಾರೆ.ಅರ್ಜುನ್ ರಾಠೋಡ್ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಬಂಜಾರ ಸಮಾಜದ ವಿವಿಧ ಸಮಸ್ಯೆಗಳು, ಹಕ್ಕುಗಳು ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ನಿರಂತರವಾಗಿ ಧ್ವನಿ ಎತ್ತಿಕೊಂಡು ಬಂದಿದ್ದಾರೆ. ಅವರು ಬಂಜಾರ ಮಹಾಸಭೆಯ ಅಧ್ಯಕ್ಷರಾಗಿ ಹಾಗೂ ವಿಜಯಪುರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ ಸಮಾಜ ಮತ್ತು ಪಕ್ಷದ ಸಂಘಟನೆಗೆ ಸೇವೆ ಸಲ್ಲಿಸಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಬಂಜಾರ ಸಮಾಜದ ಮತದಾರರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಸಮಾಜದ ಮತಗಳು ನಿರ್ಣಾಯಕವಾಗಿವೆ. ಅರ್ಜುನ್ ರಾಠೋಡ್ ಅವರು ಪ್ರಬಲ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದರೂ ಪಕ್ಷದ ಟಿಕೆಟ್ ದೊರೆಯದ ಸಂದರ್ಭದಲ್ಲಿ ಪಕ್ಷದ ನಿಷ್ಠೆ ತೋರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರವಾಗಿ ಸಚಿವ ಎಂ.ಬಿ. ಪಾಟೀಲ ಹಾಗೂ ಅರ್ಜುನ್ ರಾಠೋಡ್ ಅವರ ನೇತೃತ್ವದಲ್ಲಿ ಬಂಜಾರ ಸಮಾಜದ ಬೃಹತ್ ಸಮಾವೇಶ ಆಯೋಜಿಸಿ ಬೆಂಬಲ ನೀಡಲಾಗಿತ್ತು ಎಂದು ಮುಖಂಡರು ಹೇಳಿದ್ದಾರೆ.
ಪಕ್ಷದ ಮೇಲಿನ ನಿಷ್ಠೆ, ಸಮಾಜ ಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ನಾಯಕತ್ವದ ಅನುಭವವನ್ನು ಪರಿಗಣಿಸಿ ಅರ್ಜುನ್ ರಾಠೋಡ್ ಅವರಿಗೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಬಂಜಾರ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಮನವಿಗೆ ಜಗನು ಮಹಾರಾಜ, ಸೋಮನಿಂಗ್ ಸ್ವಾಮೀಜಿ, ಧನಶಿಂಗ ಮಹಾರಾಜ್, ಗೋಪಾಲ ಮಹಾರಾಜರು, ಅಮರ್ಶಿಂಗ ಮಹಾರಾಜರು, ಸಂಜು ಮಹಾರಾಜರು, ಪ್ರಕಾಶ ಮಹಾರಾಜರು, ಭೀಮಶಿಂಗ ಮಹಾರಾಜರು ಸೇರಿದಂತೆ ಸಮಾಜದ ಧಾರ್ಮಿಕ ಮುಖಂಡರು ಹಾಗೂ ಆಡಿ ರಾಜೇಂದ್ರಪ್ರಸಾದ, ಬಿಬಿ ನಾಯಕ, ರಾಜಪಾಲ ಚವಾಣ್, ಡಿ.ಎಲ್. ಚವಾಣ್, ಶಂಕರ ಚವಾಣ್, ರಾಜು ಜಾಧವ್, ಮಲ್ಲಿಕಾರ್ಜುನ ನಾಯಕ, ಈಶ್ವರ ಜಾಧವ್, ಶೇಖರ ನಾಯ್ಕ್, ಲಿಂಬಾಜಿ ರಾಠೋಡ, ವಾಮನ ಚವಾಣ್, ಮಹಾದೇವ ರಾಠೋಡ, ಎಸ್.ಆರ್. ನಾಯ್ಕ್, ಎಂ.ಎಸ್. ನಾಯಕ್, ಅಶೋಕ ರಾಠೋಡ, ನಾತು ಪವಾರ, ಪದ್ದು ಚವಾಣ್, ಸತೀಶ ನಾಯಕ, ತುಕಾರಾಮ್ ರಾಠೋಡ, ಪ್ರಕಾಶ ರಾಠೋಡ, ಗೋವಿಂದ ರಾಠೋಡ, ಮಿಟ್ಟು ಚವಾಣ್, ಅನಿಲ್ ಚವಾಣ್, ಅಮೇಶಿ ರಾಠೋಡ, ಸುನೀಲ್ ಚವಾಣ್, ರಾಜು ಪವಾರ, ಸುರೇಶ ಪವಾರ ಸೇರಿದಂತೆ ಹಲವು ಸಮಾಜದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಬಂಜಾರ ಸಮಾಜದ ಹಿತಾಸಕ್ತಿ ಹಾಗೂ ಜಿಲ್ಲೆಯ ರಾಜಕೀಯ ಪ್ರಾತಿನಿಧ್ಯವನ್ನು ಗಮನದಲ್ಲಿಟ್ಟುಕೊಂಡು ಅರ್ಜುನ್ ರಾಠೋಡ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ವಿಜಯಪುರ ಜಿಲ್ಲಾ ಬಂಜಾರ ಸಮಾಜದ ಮುಖಂಡ ಪ್ರಕಾಶ ಗಂಗಾರಾಮ್ ರಾಠೋಡ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಎಂ.ಎಸ್. ಖೇಡ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ವಿಜಯಪುರ: ನಗರದ ಎಂ.ಎಸ್. ಖೇಡ್ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಸಂಸ್ಥೆಯ ಖಜಾಂಚಿ ವಿನೋದ ಎಂ. ಖೇಡ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಕ್ಷರ ಕಲಿಸಿ ಜ್ಞಾನವನ್ನು ನೀಡುವವರು ಶಿಕ್ಷಕರು; ಜ್ಞಾನ ನೀಡಿ ಬದುಕಿನ ದಾರಿಯನ್ನು ತೋರಿಸುವವರು ಗುರುಗಳು” ಎಂದು ಶಿಕ್ಷಕರ ಮಹತ್ವವನ್ನು ವಿವರಿಸಿದರು. ನಮ್ಮ ಬದುಕಿಗೆ ದಾರಿದೀಪವಾಗಿ, ಜ್ಞಾನದ ಬೆಳಕನ್ನು ಹರಿಸಿ, ಉತ್ತಮ ಭವಿಷ್ಯ ರೂಪಿಸುವ ಗೌರವಾನ್ವಿತ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವೇ ಶಿಕ್ಷಕರ ದಿನಾಚರಣೆ ಎಂದು ತಿಳಿಸಿದರು. ಇದೇ ವೇಳೆ ಶಿಕ್ಷಕ ಸಮುದಾಯಕ್ಕೆ ಮತ್ತೊಮ್ಮೆ ಶಿಕ್ಷಕರ ದಿನದ ಶುಭಾಶಯಗಳನ್ನು ಕೋರಿದರು.
ಶಾಲೆಯ ಮುಖ್ಯಗುರು ಸೀತಾ ಲಮಾಣಿ ಅವರು ಮಾತನಾಡಿ, “ಮುಗ್ಧ ಮನದಲ್ಲಿ ಅಕ್ಷರ ಬಿತ್ತಿ, ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ, ಸುಂದರ ನಾಡು ಕಟ್ಟುವ ಅದ್ಭುತ ಶಿಲ್ಪಿಗಳು ಶಿಕ್ಷಕರು” ಎಂದು ಶಿಕ್ಷಕರ ಸೇವೆ ಹಾಗೂ ಜವಾಬ್ದಾರಿಯನ್ನು ಕೊಂಡಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಶ್ರೀದೇವಿ ಸೊನ್ನದ ಹಾಗೂ ಗಂಗೂಬಾಯಿ ಹಂಗರಗಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಲಾಯಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


.jpg)


